-ತಪ್ಪಿತಸ್ಥರಿಗೆ 10 ವರ್ಷದವರೆಗೆ ಕಠಿಣ ಶಿಕ್ಷೆ, 5 ಲಕ್ಷದವರೆಗೆ ದಂಡ
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro Finance) ಕಿರುಕುಳಕ್ಕೆ ಕಡಿವಾಣ ಹಾಕಲು, ಕರ್ನಾಟಕ ಮೈಕ್ರೋ ಫೈನಾನ್ಸ್ (ದಬ್ಬಾಳಿಕೆ ಮತ್ತು ಅಮಾನವೀಯ ಕ್ರಮಗಳ ನಿಯಂತ್ರಣ) ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಿಎಂ ಸಿದ್ದರಾಮಯ್ಯ (Siddaramaiah) ಒಪ್ಪಿಗೆ ನೀಡಿದ್ದು, ರಾಜಭವನಕ್ಕೆ ಸರ್ಕಾರ ಸುಗ್ರೀವಾಜ್ಞೆ ಕಳುಹಿಸಿದೆ.
Advertisement
ಸುಗ್ರೀವಾಜ್ಞೆಯ ಪ್ರಕಾರ, ತಪ್ಪಿತಸ್ಥರಿಗೆ 10 ವರ್ಷಗಳ ಕಾಲ ಶಿಕ್ಷೆ ವಿಧಿಸಲು ಅವಕಾಶವಿದೆ. ಅಲ್ಲದೇ 5 ಲಕ್ಷದವರೆಗೆ ದಂಡ ವಿಧಿಸಲು ಪ್ರಸ್ತಾಪವಿದೆ. ಇನ್ನು ಅನಧಿಕೃತವಾಗಿ ಸಾಲ ನೀಡಿದ್ದರೇ ಅದನ್ನು ಮನ್ನಾ ಮಾಡಲಾಗುವುದು. ನೋಂದಣಿ ರಹಿತ ಮೈಕ್ರೋ ಫೈನಾನ್ಸ್‌ಗಳ ಅಸಲು, ಬಡ್ಡಿ ಕೂಡ ಮನ್ನಾ ಆಗಲಿದೆ. ಖಾಸಗಿ ಬಡ್ಡಿದಾರರಿಗೂ ಕಡಿವಾಣ ಬೀಳಲಿದೆ. ಇದನ್ನೂ ಓದಿ: Invest Karnataka 2025 ಜಾಗತಿಕ ಹೂಡಿಕೆದಾರರ ಸಮಾವೇಶ; 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ನಿರೀಕ್ಷೆ: ಡಿಕೆಶಿ
Advertisement
Advertisement
Advertisement
ಸುಗ್ರೀವಾಜ್ಞೆಯ ಅಂಶಗಳೇನು?
ಲೇವಾದೇವಿದಾರರು ನೋಂದಣಿ ಮಾಡದೆ ಸಾಲ ವಹಿವಾಟು ಮಾಡುವಂತಿಲ್ಲ. ಸುಗ್ರೀವಾಜ್ಞೆ ಹೊರಡಿಸಿದ 30 ದಿನಗಳ ಒಳಗೆ ನೋಂದಣಿ ಮಾಡಿಕೊಳ್ಳಬೇಕು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನೋಂದಣಿ ಕಡ್ಡಾಯ. ನೋಂದಣಿ ವೇಳೆ ಸಾಲಗಾರರ ಸಂಪೂರ್ಣ ಮಾಹಿತಿ ಸಂಗ್ರಹಿಸಿದ ಲಿಖಿತ ಮುಚ್ಚಳಿಕೆ ನೀಡಬೇಕು. ಸಾಲಗಾರರಿಂದ ಯಾವುದೇ ಅಡಮಾನ ಇಟ್ಟುಕೊಳ್ಳುವಂತಿಲ್ಲ. ಅಡಮಾನ ಇಟ್ಟುಕೊಂಡಿದ್ದರೆ ತಪ್ಪದೇ ಹಿಂತಿರುಗಿಸಬೇಕು. ನೋಂದಣಿ ಮಾಡಿಕೊಳ್ಳದ ಲೇವಾದೇವಿದಾರರಿಗೆ ಸಾಲ ಮರುಪಾವತಿಸುವಂತಿಲ್ಲ. ಅಸಲು, ಬಡ್ಡಿ ಎರಡೂ ಮನ್ನಾ ಆಗಲಿದೆ ಎಂದು ಸುಗ್ರೀವಾಜ್ಞೆಯಲ್ಲಿ ಬರೆಯಲಾಗಿದೆ. ಇದನ್ನೂ ಓದಿ: ಲಾಲ್‌ಬಾಗ್ ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಕಾರಿಗೆ ಬೆಂಕಿ – ಪಕ್ಕದಲ್ಲಿದ್ದ ಬೈಕ್ ಸುಟ್ಟು ಭಸ್ಮ
ದೂರು ಬಂದರೆ ಅಥವಾ ಸ್ವಯಂಪ್ರೇರಿತವಾಗಿ ನೋಂದಣಿ ರದ್ದು ಮಾಡುವ ಅಧಿಕಾರವು ಪ್ರಾಧಿಕಾರಕ್ಕೆ ಇರಲಿದೆ. ಸುಗ್ರೀವಾಜ್ಞೆಯಲ್ಲಿರುವ ಯಾವುದೇ ನಿಯಮವನ್ನು ಉಲ್ಲಂಘಿಸಿದರೆ, ಪ್ರಾಧಿಕಾರವು ನೋಟಿಸ್ ನೀಡದೆ ನೋಂದಣಿಯನ್ನು ಅಮಾನತು ಅಥವಾ ರದ್ದು ಮಾಡಬಹುದು ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಅಗತ್ಯ – ಹೆಚ್‌ಡಿಡಿ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ