ಕೊಪ್ಪಳ: ತುಂಗಭದ್ರಾ ಜಲಾಶಯದಿಂದ ನೀರಿನ ಹರಿವು ಹೆಚ್ಚಾದ ಹಿನ್ನಲೆ ಕೊಪ್ಪಳದಲ್ಲಿ ತುಂಗಾಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾದ ಹೊಸ ಸೇತುವೆಯೊಂದು ಬಿರುಕು ಬಿಟ್ಟು ಜನರಲ್ಲಿ ಆತಂಕ ಮೂಡಿಸಿದೆ.
ಗಂಗಾವತಿ ತಾಲೂಕಿನ ಕಡೇಬಾಗಿಲು-ಬುಕ್ಕಸಾಗರ ರಸ್ತೆ ಸಂಪರ್ಕ ಕಲ್ಪಿಸುವ ಸೇತುವೆಯಲ್ಲಿ ಬಿರುಕು ಕಂಡಿದೆ. ಕಳೆದ ವರ್ಷ ಸೆಪ್ಟಂಬರ್ 22ರಂದು ಮಾಜಿ ಸಿ.ಎಂ ಸಿದ್ದರಾಮಯ್ಯನವರು ಈ ಸೇತುವೆಯನ್ನು ಉದ್ಘಾಟನೆ ಮಾಡಿದ್ದರು. ಸುಮಾರು 32 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಅರ್ಧ ಕಿ.ಮೀ. ಉದ್ದದ ಸಂಪರ್ಕ ಸೇತುವೆ ಇದಾಗಿದ್ದು, ಸ್ವಲ್ಪ ಹೆಚ್ಚು ಕಡಿಮೆಯಾದರೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ.
Advertisement
Advertisement
ತುಂಗಾಭದ್ರಾ ಜಲಾಶಯದಿಂದ ಪ್ರತಿದಿನ 2 ಲಕ್ಷ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಕಳೆದ ಒಂದು ವಾರದಿಂದ ಗಂಗಾವತಿ ಕಂಪ್ಲಿಗೆ ರಸ್ತೆ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣ ಮುಳುಗಡೆ ಆಗಿದೆ.
Advertisement
ಇದರಿಂದಾಗಿ ಗಂಗಾವತಿ- ಹೊಸಪೇಟೆ ಮತ್ತು ಬಳ್ಳಾರಿ ಗೆ ಇದೆ ಸೇತುವೆ ಮೂಲಕ ಪ್ರತಿದಿನ ಸಾವಿರಾರು ವಾಹನಗಳು ಸಂಚಾರಿಸುತ್ತಿವೆ. ಸ್ವಲ್ಪ ಹೆಚ್ಚುಕಮ್ಮಿ ಆದರೂ ಬಾರಿ ಮಟ್ಟದ ಅನಾಹುತ ಸಂಭವಿಸುವುದರಲ್ಲಿ ಅನುಮಾನವೇ ಇಲ್ಲ. ಇನ್ನೂ ಸೇತುವೆ ಬಿರುಕಿಗೆ ಕಳಪೆ ಕಾಮಗಾರಿ ಕಾರಣ ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸುತ್ತಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv