ಬೆಂಗಳೂರು: ಶೀಘ್ರವೇ ಸಚಿವ ಸಂಪುಟವನ್ನು ಪುನಾರಚಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷದ 21 ಸಚಿವರು ರಾಜೀನಾಮೆ ಸಲ್ಲಿಸಿರುವ ರೀತಿಯಲ್ಲೇ ಜೆಡಿಎಸ್ ಪಕ್ಷದ ಎಲ್ಲ ಸಚಿವರು ರಾಜೀನಾಮೆ ನೀಡಿದ್ದಾರೆ. ಸಚಿವ ಸಂಪುಟವನ್ನು ಶೀಘ್ರವೇ ಪುನಾರಚಿಸಲಾಗುವುದು ಎಂದು ಹೇಳಿದ್ದಾರೆ.
ಮಧ್ಯಾಹ್ನ ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು, ನನ್ನ ಕೆಲಸ ಏನು ಅದನ್ನು ನಾನು ಮಾಡುತ್ತೇನೆ ಎಂದು ಪ್ರತಿಕ್ರಿಯೆ ನೀಡಿ ಒಳನಡೆದರು. ವಿಧಾನಸಭೆಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಸರ್ಕಾರಕ್ಕೆ ಏನು ಆಗುವುದಿಲ್ಲ ಎಂದು ಹೇಳಿದರು.
ಭಾನುವಾರ ರಾತ್ರಿ ಸುಮಾರು 7.50ಕ್ಕೆ ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು ಸಭೆಗಳ ಮೇಲೆ ಸಭೆ ನಡೆಸಿದರು. ಇಂದು ಬೆಳಗ್ಗೆ ಡಿಸಿಎಂ ಪರಮೇಶ್ವರ್ ಆಯೋಜನೆಯ ಉಪಹಾರ ಕೂಟದಲ್ಲಿ ಭಾಗಿಯಾಗಿದ್ದ ಎಲ್ಲ ಕಾಂಗ್ರೆಸ್ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಚಿವರು ರಾಜೀನಾಮೆ ನೀಡಿದ ಬಳಿಕ ಎಲ್ಲ ಬೆಳವಣಿಗೆಯ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಉಸ್ತುವಾರಿ ನಾಯಕ ವೇಣುಗೋಪಾಲ್ ಸ್ಪಷ್ಟಪಡಿಸಿದರು. ಕಾಂಗ್ರೆಸ್ ನಾಯಕರ ಸ್ಪಷ್ಟನೆ ಬಳಿಕ ಸಿಎಂ ತಮ್ಮ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದರು.
ಕಾಂಗ್ರೆಸ್ ಪಕ್ಷದ 21 ಸಚಿವರು ರಾಜೀನಾಮೆ ಸಲ್ಲಿಸಿರುವ ರೀತಿಯಲ್ಲೇ ಜೆಡಿಎಸ್ ಪಕ್ಷದ ಎಲ್ಲ ಸಚಿವರು ರಾಜೀನಾಮೆ ನೀಡಿದ್ದಾರೆ.
ಸಚಿವ ಸಂಪುಟವನ್ನು ಶೀಘ್ರವೇ ಪುನಾರಚಿಸಲಾಗುವುದು.
— CM of Karnataka (@CMofKarnataka) July 8, 2019