-ತಿಲಕ್ ವರ್ಮಾಗೆ ಉಪನಾಯಕನ ಜವಾಬ್ದಾರಿಗೆ ಚಿಂತನೆ
ಮುಂಬೈ: ನಾಳೆ ಭಾರತ ಟಿ-20 ತಂಡದ (India T20 Squad) ಹೊಸ ನಾಯಕನ ಘೋಷಣೆಯಾಗಲಿದ್ದು, ಸೂರ್ಯಕುಮಾರ್ ಯಾದವ್ (Suryakumar Yadav) ಬೈ ಹೇಳಿ, ಶ್ರೇಯಸ್ ಅಯ್ಯರ್ (Shreyas Iyer) ಅವಕಾಶ ನೀಡುವ ಸಾಧ್ಯತೆಯಿದೆ.
ಸತತ ವೈಫಲ್ಯ ಅನುಭವಿಸುತ್ತಿರುವ ಸೂರ್ಯಕುಮಾರ್ ಯಾದವ್ ಅವರಿಗೆ ಟಿ20 ತಂಡದ ನಾಯಕತ್ವ ಸ್ಥಾನಕ್ಕೆ ಆಯ್ಕೆ ಸಮಿತಿ ಕೊಕ್ ನೀಡುವ ಸಾಧ್ಯತೆಯಿದೆ. ಈ ಬೆನ್ನಲ್ಲೇ ಶ್ರೇಯಸ್ ಐಯ್ಯರ್ ಅವರನ್ನು ನೂತನ ಟಿ20 ತಂಡದ ನಾಯಕನನ್ನಾಗಿ ಹಾಗೂ ತಿಲಕ್ ವರ್ಮಾಗೆ ಉಪನಾಯಕನ ಜವಾಬ್ದಾರಿ ನೀಡಲು ಆಯ್ಕೆ ಸಮಿತಿ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಿಸಿಸಿಐ ಸೂಚನೆ ಪಾಲಿಸದ ರೋಹಿತ್ – ಕೊಹ್ಲಿ ಬೆನ್ನಲ್ಲೇ ಅಫ್ಘಾನ್ ಸರಣಿಯಿಂದ ಔಟ್?

ಗುರುವಾರ (ಜೂ.4) ನಡೆದ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಶನಿವಾರ ನಡೆಯಲಿರುವ ಆಯ್ಕೆ ಸಮಿತಿ ಸಭೆಯಲ್ಲಿ ಶ್ರೇಯಸ್ ಅಯ್ಯರ್ ಭಾಗವಹಿಸಲಿದ್ದು, ಈ ಸಭೆಯಲ್ಲಿ ಮುಂಬರುವ ಐರ್ಲೆಂಡ್ (Ireland) ಹಾಗೂ ಇಂಗ್ಲೆಂಡ್ (England) ವಿರುದ್ಧದ ಟಿ20 ಸರಣಿ ಹಾಗೂ ಏಷ್ಯನ್ ಗೇಮ್ಸ್ (Asian Games) ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗುತ್ತದೆ.
2023ರ ಡಿಸೆಂಬರ್‌ನಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧದ ಟಿ20 ಪಂದ್ಯದಲ್ಲಿ ಕಣಕ್ಕಿಳಿದ ಬಳಿಕ ಶ್ರೇಯಸ್ ಅಯ್ಯರ್ ತಂಡದಿಂದ ಹೊರಗುಳಿದಿದ್ದರು. ಇತ್ತೀಚಿಗೆ ಮುಕ್ತಾಯ ಕಂಡಿದ್ದ ಐಪಿಎಲ್ ಟೂರ್ನಿಯಲ್ಲಿ ಅವರು ಪಂಜಾಬ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುವುದರ ಜೊತೆಗೆ 498 ರನ್ ಗಳಿಸಿ ಉತ್ತಮ ಪ್ರದರ್ಶನ ನೀಡಿದ್ದರು. ಸದ್ಯ ಭಾರತ ಜೂನ್ 26ರಿಂದ ನಡೆಯಲಿರುವ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಸಿದ್ಧತೆ ನಡೆಸುತ್ತಿದೆ. ಬಳಿಕ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಲಿದೆ. ಈ ಸರಣಿಗೆ ಯುವ ಆಟಗಾರ ತಿಲಕ್ ವರ್ಮಾ ಅವರನ್ನು ಉಪನಾಯಕರನ್ನಾಗಿ ನೇಮಿಸಲು ಬಿಸಿಸಿಐ (BCCI) ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಹಾಗೂ ಕೋಚ್ ಗೌತಮ್ ಗಂಭೀರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ.ಇದನ್ನೂ ಓದಿ: T20I ನಾಯಕತ್ವದಿಂದ ಸೂರ್ಯಕುಮಾರ್ಗೆ ಗೇಟ್ಪಾಸ್?

ಈ ಬಗ್ಗೆ ಮಾತನಾಡಿರುವ ಟೀಂ ಇಂಡಿಯಾ ಮಾಜಿ ವಿಕೆಟ್ ಕೀಪರ್ ಸಬಾ ಕರೀಮ್, ಈ ಹಿಂದೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯವರು ಚುಟುಕು ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಬಳಿಕ ಆಯ್ಕೆ ಸಮಿತಿ ಟಿ20 ತಂಡದ ನಾಯಕತ್ವದ ಜವಾಬ್ದಾರಿಯನ್ನು ಸೂರ್ಯಕುಮಾರ್ ಯಾದವ್ ಅವರಿಗೆ ನೀಡಿತ್ತು. ಆದರೆ ಸೂರ್ಯಕುಮಾರ್ ಯಾದವ್ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರು. ಅವರ ಬ್ಯಾಟಿಂಗ್ ವೈಫಲ್ಯ ಐಪಿಎಲ್‌ನಲ್ಲೂ ಕೂಡ ಮುಂದುವರೆದಿತ್ತು. ಹೀಗಾಗಿ ಪ್ರಸ್ತುತ ಸೂರ್ಯಕುಮಾರ್ ಯಾದವ್ ಅವರ ಫಾರ್ಮ್ ಗಮನಿಸಿದರೆ 2028ರ ಟಿ20 ವಿಶ್ವಕಪ್ ದೃಷ್ಟಿಯಿಂದ ಬಿಸಿಸಿಐ ಯುವ ಆಟಗಾರರಿಗೆ ಮಣೆಹಾಕಲು ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದಿದ್ದಾರೆ.

ಸೂರ್ಯಕುಮಾರ್ ಕಳಪೆ ಪ್ರದರ್ಶನ:
ಭಾರತ ತಂಡ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ 2026ರ ಟಿ20 ವಿಶ್ವಕಪ್ ಗೆದ್ದು ಚಾಂಪಿಯನ್ಸ್ ಪಟ್ಟ ಅಲಂಕರಿಸಿತ್ತು. ಆದರೆ ನಾಯಕ ಸೂರ್ಯಕುಮಾರ್ ಅವರು ನಿರಂತರವಾಗಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿ ಕಳಪೆ ಪ್ರದರ್ಶನ ನೀಡಿದ್ದರು. ಅವರು ವಿಶ್ವಕಪ್ ಟೂರ್ನಿಯ 9 ಪಂದ್ಯಗಳಲ್ಲಿ ಕೇವಲ 242 ರನ್ ಕಲೆಹಾಕಿದ್ದರು. ಇತ್ತ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿದ್ದ ಸೂರ್ಯಕುಮಾರ್ 13 ಪಂದ್ಯಗಳನ್ನಾಡಿ ಕೇವಲ 270 ರನ್ ಕಲೆಹಾಕಲಷ್ಟೇ ಶಕ್ತರಾಗಿದ್ದಾರೆ.ಇದನ್ನೂ ಓದಿ: ವಿರಾಟ್ ಕೊಹ್ಲಿಗೆ ಗಾಯ – ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಔಟ್
