ಕೋಲಾರ: ಜಿಲ್ಲೆಯ ವಕ್ಕಲೇರಿ ಗ್ರಾಮದಲ್ಲಿ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕಾಂಗ್ರೆಸ್ (Congress) ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಫ್ಲೆಕ್ಸ್ (Flex) ಹರಿದು ಕಿಡಿಗೇಡಿಗಳು ದರ್ಪ ಮೆರೆದಿದ್ದಾರೆ. ಪರಿಣಾಮ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.
Advertisement
ದೇಶ ರಾಜಕಾರಣದಲ್ಲಿ ಸದ್ಯ ಅತ್ಯಂತ ಹೀನಾಯ ಸ್ಥಿತಿಯಲ್ಲಿರುವ ಶತಮಾನದ ಪಕ್ಷ ಕಾಂಗ್ರೆಸ್ ಚುಕ್ಕಾಣಿಯನ್ನು ಇದೀಗ ಕನ್ನಡಿಗ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಹಿಸಿಕೊಂಡಿದ್ದಾರೆ. ಇತ್ತೀಚಿಗೆ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಐಸಿಸಿ (AICC) ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೋನಿಯಾ ಗಾಂಧಿ (Sonia Gandhi) ಅಧಿಕಾರ ಹಸ್ತಾಂತರಿಸಿದ್ದಾರೆ. ಹಾಗಾಗಿ ಖರ್ಗೆಗೆ ಅಭಿನಂದನೆ ಸಲ್ಲಿಸಿ ಫ್ಲೆಕ್ಸ್ ಅಳವಡಿಸಲಾಗಿತ್ತು. ವಕ್ಕಲೇರಿ ಗ್ರಾಮ ಪಂಚಾಯತ್ ಕಚೇರಿ ಮುಂಭಾಗ ಅಳವಡಿಸಿದ್ದ ಬ್ಯಾನರ್ ಒಂದನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಕೋಲಾರ-ಮಾಲೂರು ಮುಖ್ಯ ರಸ್ತೆಯನ್ನು ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಖರ್ಗೆ ಎಐಸಿಸಿ ಅಧ್ಯಕ್ಷರಾಗುತ್ತಲೇ ಸ್ಟೇರಿಂಗ್ ಸಮಿತಿ ರಚನೆ – ಕರ್ನಾಟಕದ ಮೂವರಿಗೆ ಸ್ಥಾನ
Advertisement
Advertisement
ಇದೇ ಫ್ಲೆಕ್ಸ್‌ನಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿ ಸದಸ್ಯೆಯಾದ ಅಶ್ವಿನಿಯವರ ಭಾವಚಿತ್ರವನ್ನೂ ಸಹ ಮುದ್ರಿಸಲಾಗಿದ್ದು, ಕಳೆದ ರಾತ್ರಿಯಷ್ಟೇ ಗ್ರಾಮ ಪಂಚಾಯತ್ ಬಳಿ ಹಾಕಲಾಗಿದ್ದ ಫ್ಲೆಕ್ಸ್‌ನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಸಮೀಪದ ಸಿಸಿಟಿವಿಗಳಲ್ಲಿ ಕಿಡಿಗೇಡಿಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದು, ಕಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಮೂರೂವರೆ ವರ್ಷಗಳ ಬಳಿಕ ಜೆಡಿಎಸ್ ಕಚೇರಿಗೆ ಬಂದ ಜಿ.ಟಿ ದೇವೇಗೌಡ- ಸಿಹಿ ತಿನ್ನಿಸಿ ಸ್ವಾಗತಿಸಿದ ಹೆಚ್‌ಡಿಕೆ