Bengaluru CityDistrictsKarnatakaLatestLeading NewsMain Post

ಬೆಂಗಳೂರಿನ ಶಾಲೆಗಳಲ್ಲಿ ಮತ್ತೆ ಕೊರೊನಾ ಸ್ಫೋಟ

ಬೆಂಗಳೂರು: ಇಷ್ಟು ದಿನ ಕಡಿಮೆಯಾಗಿದ್ದ ಕೊರೊನಾ ಪ್ರಕರಣಗಳು ಇದೀಗ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನ ಎರಡು ಖಾಸಗಿ ಶಾಲೆಗಳಲ್ಲಿ ಕೊರೋನಾ ಸ್ಫೋಟಗೊಂಡಿದೆ.

ದಾಸರಹಳ್ಳಿ ವಲಯದ ರಾಜ ಗೋಪಾಲನಗರದಲ್ಲಿ ಇರುವ ನ್ಯೂ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಮತ್ತು ಎಂಇಎಸ್ ಪಬ್ಲಿಕ್ ಸ್ಕೂಲ್ ಎಂಬ ಎರಡು ಖಾಸಗಿ ಶಾಲೆಗಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ 400 ಕೇಸ್ – ಸಕ್ರಿಯ ಪ್ರಕರಣಗಳ ಸಂಖ್ಯೆ 3,545ಕ್ಕೆ ಏರಿಕೆ

ನ್ಯೂ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ 5 ಮತ್ತು 6 ನೇ ತರಗತಿಯಲ್ಲಿ ಓದುತ್ತಿದ್ದ 21 ಮಕ್ಕಳಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಎಂಇಎಸ್ ಪಬ್ಲಿಕ್ ಸ್ಕೂಲ್‍ನಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದ 10 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯಕ್ಕೆ ಎಲ್ಲಾ ಮಕ್ಕಳಿಗೂ ಮತ್ತು ಶಾಲಾ ಸಿಬ್ಬಂದಿಗೂ ಕೋವಿಡ್ ಟೆಸ್ಟ್ ಮಾಡಲಾಗಿದೆ. ಸದ್ಯ ಶಾಲೆಗಳನ್ನು ಕಂಟೈನ್ಮೆಂಟ್ ಅಂತ ಘೋಷಣೆ ಮಾಡಲಾಗಿದ್ದು, ಕೊರೊನಾ ಪಾಸಿಟಿವ್ ಬಂದಿರುವ ಮಕ್ಕಳೆಲ್ಲರೂ ಕೂಡ ಕ್ಷೇಮವಾಗಿದ್ದು, ಯಾವುದೇ ಆತಂಕ ಪಡುವಂತ ಅಗತ್ಯವಿಲ್ಲ ಎನ್ನಲಾಗುತ್ತಿದೆ.

ಸೋಮವಾರ ರಾಜ್ಯದಲ್ಲಿ ಒಟ್ಟು 415 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ. ಈ ಪೈಕಿ ಬೆಂಗಳೂರು ನಗರ ಒಂದರಲ್ಲೇ ಭರ್ತಿ 400 ಪಾಸಿಟಿವ್ ಕೇಸ್ ವರದಿಯಾಗಿತ್ತು. ಇದನ್ನೂ ಓದಿ: ಲೈಟರ್ ವಿಚಾರಕ್ಕೆ ಪುಂಡರ ಜಗಳ – ಮಹಿಳೆ ಜುಟ್ಟು ಎಳೆದಾಡಿ, ಪತಿ ವಿವಸ್ತ್ರಗೊಳಿಸಿ ಮಾರಣಾಂತಿಕ ಹಲ್ಲೆ

Leave a Reply

Your email address will not be published.

Back to top button