ನವದೆಹಲಿ: ದೇಶಾದ್ಯಂತ ಜಾರಿಗೊಳಿಸಲಾದ ಹೊಸ ಕ್ರಿಮಿನಲ್ ಕಾನೂನುಗಳು (New Criminal Laws) ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಿದ ಗೌರವ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಹೇಳಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ (Independence Day) ಮುನ್ನಾದಿನ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತವು ಈಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು ವಿಶ್ವದ ಮೂರು ದೊಡ್ಡ ಆರ್ಥಿಕತೆಗಳಲ್ಲಿ ಒಂದಾಗಲು ಸಿದ್ಧವಾಗಿದೆ ಎನ್ನುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಈ ಯಶಸ್ಸು ರೈತರು ಮತ್ತು ಕಾರ್ಮಿಕರ ಕಠಿಣ ಪರಿಶ್ರಮ, ಉದ್ಯಮಿಗಳ ದೂರದೃಷ್ಟಿ ಮತ್ತು ದೇಶದ ದೂರದೃಷ್ಟಿಯ ನಾಯಕತ್ವದ ಫಲಿತಾಂಶವಾಗಿದೆ ಎಂದು ಬಣ್ಣಿಸಿದರು.
Advertisement
Advertisement
ಭಾರತವು 2021 ಮತ್ತು 2024 ರ ನಡುವೆ ಸರಾಸರಿ 8% ವಾರ್ಷಿಕ ಬೆಳವಣಿಗೆಯೊಂದಿಗೆ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ. ಜನರ ಕೈಗೆ ಹೆಚ್ಚಿನ ಹಣವನ್ನು ನೀಡಿದ್ದು ಮಾತ್ರವಲ್ಲ ಬಡವರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ ಎಂದು ಮೋದಿ ಸರ್ಕಾರದ ಸಾಧನೆಯನ್ನು ಹೊಗಳಿದರು.
Advertisement
ಈ ಬಾರಿ ಬಜೆಟ್‌ನಲ್ಲಿ (Budget) ಪ್ರಕಟಿಸಿದ ಇಂಟರ್ನ್‌ಶಿಪ್ ಯೋಜನೆಯನ್ನು ಶ್ಲಾಘಿಸಿದ ರಾಷ್ಟ್ರಪತಿಗಳು, ಇದು ದೇಶಾದ್ಯಂತ 1 ಕೋಟಿಗೂ ಹೆಚ್ಚು ಯುವಕರಿಗೆ ಕೆಲಸದ ಅನುಭವ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.
Advertisement
ಲೋಕಸಭೆ ಚುನಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಕಾರಣಿಕರ್ತರಾದ ಚುನಾವಣಾ ಆಯೋಗ, ಅಧಿಕಾರಿಗಳು, ಭದ್ರತಾ ಸಿಬ್ಬಂದಿಯನ್ನು ಶ್ಲಾಘಿಸಿದರು.