– ಕೊರೊನಾಗೆ ಹೆದರಬೇಡಿ, ಸೂಕ್ತ ವೈದ್ಯರ ಸಲಹೆ ಪಡೆಯಿರಿ
ನವದೆಹಲಿ: ಇಡೀ ಪ್ರಪಂಚವೇ ನಮಸ್ಕಾರ ಮಾಡುತ್ತಿದೆ. ಈಗ ನಾವು ಅದನ್ನು ಅಭ್ಯಾಸ ಮಾಡಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಪಿಎಂ ಮೋದಿ ಅವರು ಜನೌಷಧಿ ಕೇಂದ್ರಗಳ ಮಾಲೀಕರು ಮತ್ತು ಪ್ರಧಾನ್ ಮಂತ್ರಿ ಭಾರತೀಯ ಜನೌಶಧಿ ಪರಿಯೋಜನ (ಪಿಎಂಬಿಜೆಪಿ) ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಹನ ನಡೆಸಿದರು. ಈ ವೇಳೆ ಕೊರೊನಾ ವೈರಸ್ ವಿಚಾರವಾಗಿ ಹೆದರಬೇಡಿ, ಸೂಕ್ತ ವೈದ್ಯರ ಸಲಹೆ ಪಡೆದುಕೊಳ್ಳಿ ಎಂದು ತಿಳಿಸಿದರು.
Advertisement
Interaction with Jan Aushadhi Yojana beneficiaries. #JanJanTakJanAushadhi https://t.co/LVsqVZTqah
— Narendra Modi (@narendramodi) March 7, 2020
Advertisement
ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಮೋದಿ, ಕೊರೊನಾ ವೈರಸ್ ವದಂತಿಯಿಂದ ದೂರ ಇರುವಂತೆ ನನ್ನ ದೇಶದ ಜನರಲ್ಲಿ ಮನವಿ ಮಾಡುತ್ತೇನೆ. ಕೊರೊನಾ ಈ ನಿಟ್ಟಿನಲ್ಲಿ ನಾವು ವೈದ್ಯರ ಸಲಹೆಯನ್ನು ಪಾಲಿಸಬೇಕಾಗಿದೆ ಎಂದು ಕರೆ ಕೊಟ್ಟರು. ನಾವು ನಮಸ್ಕಾರ ಎಂದು ಶುಭಾಶಯ ಕೋರುವುದನ್ನು ಕೆಲವು ಕಾರಣಗಳಿಂದ ಮರೆತ್ತಿದ್ದೇವೆ. ಆದರೆ ಇಂದು ಇಡೀ ಪ್ರಪಂಚವೇ ನಮಸ್ಕಾರ ಮಾಡಿ ಆಹ್ವಾನಿಸುವುದನ್ನು ಮಾಡುತ್ತಿದೆ. ನಮಗೆ ಇದೇ ಸರಿಯಾದ ಸಮಯ ಹ್ಯಾಂಡ್ಶೇಕ್ ಮಾಡುವ ಬದಲು ನಮಸ್ಕಾರ ಮಾಡುವ ಅಭ್ಯಾಸವನ್ನು ಮತ್ತೊಮ್ಮೆ ಅಳವಡಿಸಿಕೊಳ್ಳಬೇಕು ಎಂದು ಮೋದಿ ತಿಳಿಸಿದ್ದಾರೆ.
Advertisement
Advertisement
ಈ ವೇಳೆ ಪಿಎಂ, ಪ್ರತಿ ತಿಂಗಳು, ಒಂದು ಕೋಟಿ ಕುಟುಂಬಗಳು ಈ ಜನೌಷಧಿ ಕೇಂದ್ರಗಳಿಂದ ಅಗ್ಗದ ಔಷಧಿಗಳ ಲಾಭವನ್ನು ಪಡೆಯುತ್ತಿವೆ. ದೇಶಾದ್ಯಂತ 6,000 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಜನರಿಗೆ 2,000-2,500 ಕೋಟಿ ರೂ. ಗಳನ್ನು ಉಳಿಸಲು ಸಹಾಯ ಮಾಡಿದೆ ಎಂದು ಅವರು ಹೇಳಿದರು.