– ಸರ್ಕಾರದ ಜೊತೆಗೆ ಜನರು ಕೈ ಜೋಡಿಸಬೇಕು
ನವದೆಹಲಿ: ಜನರ ಸಹಕಾರ ಇಲ್ಲದೇ ಸರ್ಕಾರ ಏನೇ ಕ್ರಮ ತೆಗೆದುಕೊಂಡರು ಅದು ವಿಫಲವಾಗಲಿದೆ. ಶೇಕಡಾ 80% ಜನರು ಭಾರತ ಲಾಕ್‍ಡೌನ್‍ಗೆ ಬೆಂಬಲ ನೀಡಿದ್ದು ಬಾಕಿ 20% ಜನರು ಕೊರೊನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಬೇಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಇನ್ನು ಪರಿಸ್ಥಿತಿ ಕೈ ಮೀರಿಲ್ಲ ಸರ್ಕಾರ ಇದನ್ನು ನಿಭಾಯಿಸುವ ಪ್ರಯತ್ನ ಮಾಡುತ್ತಿದೆ. ಭಾರತ ಲಾಕ್‍ಡೌನ್ ಮಾಡುವ ಮೂಲಕ ಮುಂದಗಾಬಹುದಿದ್ದ ದೊಡ್ಡ ಅನಾಹುತವನ್ನು ತಡೆಯುವ ಪ್ರಯತ್ನ ಸರ್ಕಾರ ಮಾಡಿದೆ. ಸರ್ಕಾರಕ್ಕೆ ಕೊರೊನಾ ಸೃಷ್ಟಿಸಬಹುದಾ ನಷ್ಟದ ಬಗ್ಗೆ ಮುಂಚೆಯೇ ತಿಳಿದಿತ್ತು ಎಂದರು.
Advertisement
Advertisement
ಕೊರೊನಾ ವಿಚಾರದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ನಿಜಮುದ್ದೀನ್ ಯಾತ್ರಿಗಳು ಸೇರಿ ಯಾರೇ ಆಗಿರಲಿ ಕೊರೊನಾ ಲಕ್ಷಣಗಳು ಕಂಡು ಬಂದರೆ ಸ್ವಯಂ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಿರಿ. ಬಹುತೇಕ ಪ್ರಮಾಣದ ಜನರು ಬೆಂಬಲ ನೀಡಿದ್ದಾರೆ. ಆದರೆ ಅಲ್ಲಲ್ಲಿ ಜನರು ಮನೆಯಿಂದ ಹೊರಬರುವ ಪ್ರಯತ್ನ ಮಾಡುತ್ತಿದ್ದಾರೆ. ಈ ಜನರು ಕೂಡಾ ಎಚ್ಚೆತುಕೊಂಡು ಮನೆಯಲ್ಲಿರಬೇಕು ತಮ್ಮಗಲ್ಲದಿದ್ದರು ಸಮಾಜದ ಮತ್ತು ದೇಶದ ಸ್ವಾಸ್ಥ್ಯಕ್ಕಾಗಿ ಲಾಕ್‍ಡೌನ್ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.
Advertisement
Advertisement
ಭಾರತ ಲಾಕ್‍ಡೌನ್ ಆಗಿ ಹದಿನಾರು ದಿನ ಕಳೆದಿದೆ. ಆದರೆ ಪ್ರಮಾಣ ಇಳಕೆಯಾಗಿಲ್ಲ ಇದಕ್ಕೆ ಕೆಲ ಜನರ ನಿರ್ಲಕ್ಷ್ಯವೂ ಕಾರಣವಾಗಿದೆ. ಲಾಕ್‍ಡೌನ್ ಮುಂದುವರೆಸುವ ಬಗ್ಗೆ ನಾನೇನು ಹೇಳಲು ಸಾಧ್ಯವಿಲ್ಲ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಬಗ್ಗೆ ಚಿಂತನೆ ನಡೆಸಿದ್ದು ವಿಪಕ್ಷ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಎಲ್ಲ ಸಿಎಂಗಳ ಜೊತೆಗೆ ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ವೈದ್ಯಕೀಯ ಸಾಮಾಗ್ರಿಗಳ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ. ಪಿಪಿಇ ಕಿಟ್, ಮಾಸ್ಕ್, ವೆಂಟಿಲೇಟರ್ ಸೇರಿ ಅಗತ್ಯ ವೈದ್ಯಕೀಯ ಸಾಮಾಗ್ರಿಗಳನ್ನು ಪೂರೈಕೆ ಮಾಡುತ್ತಿದೆ. ಆದರೆ ವಿರೋಧ ಪಕ್ಷಗಳು ಸುಮ್ಮನೆ ಆರೋಪ ಮಾಡಿದೆ. ಕೇಂದ್ರ ಸರ್ಕಾರ ಸಾಮಾಗ್ರಿಗಳ ಪೂರೈಕೆ ಮಾಡಿರುವ ಅಂಕಿ ಅಂಶಗಳನ್ನು ನೀಡಲು ನಾವು ಸಿದ್ಧ ಎಂದು ಸವಾಲು ಹಾಕಿದರು.