ನವದೆಹಲಿ: ಹುಳಿ ಸಿದ್ದರಾಮಯ್ಯ ಎಂಬ ಬಿರುದು ಬೇಡ, ನಿದ್ದರಾಮಯ್ಯ ಎಂಬ ಬಿರುದು ಇರಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್‍ಗೆ ಬಿಜೆಪಿ ನಾಯಕ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಮ್ಮ ರಾಜ್ಯ ಸರ್ಕಾರವನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂಬ ಸಿದ್ದರಾಮಯ್ಯ ಅವರ ಟ್ವೀಟ್‍ಗೆ ತಿರುಗೇಟು ನೀಡಿ. ಕಾಂಗ್ರೆಸ್ ಅವರಿಗೆ ಮೋದಿ ಅವರ ಮೇಲೆ ವಿಶ್ವಾಸ ಇಲ್ಲದಿದ್ದರೆ, ನಮಗೆ ಮೋದಿ ಅವರ ಭರವಸೆ ಬಗ್ಗೆ ವಿಶ್ವಾಸವಿದೆ ಎಂದು ಹೇಳಿದರು.
Advertisement
Advertisement
ನಮ್ಮ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್‍ಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಹಿಂದೆ ನೆರೆ-ಬರ ಬಗ್ಗೆ ಚರ್ಚೆ ಮಾಡೋಕೆ ಸಮಯನೇ ಕೊಡುತ್ತಿರಲಿಲ್ಲ. ನಮ್ಮ ಪ್ರಧಾನಿ 45 ನಿಮಿಷ ಸಮಯ ಕೊಟ್ಟಿದ್ದಾರೆ. ಡಾ. ಮನಮೋಹನ್ ಸಿಂಗ್ ಮತ್ತು ಮೋದಿ ಸರ್ಕಾರದ ಕೊಡುಗೆಯನ್ನು ತುಲನೆ ಮಾಡಿ ಸಿದ್ದರಾಮಯ್ಯ ಹುಳಿ ಹಿಂಡಬಾರದು. ಹುಳಿ ಸಿದ್ದರಾಮಯ್ಯ ಎಂಬ ಬಿರುದು ಬೇಡ. ನಿದ್ದರಾಮಯ್ಯ ಎಂಬ ಬಿರುದು ಇರಲಿ ಎಂದು ಲೇವಡಿ ಮಾಡಿದರು.
Advertisement
Advertisement
ಈ ರೀತಿಯ ವರ್ತನೆಯಿಂದ ಲೋಕಸಭಾ ಚುನಾವಣೆಯಲ್ಲಿ ಕೇವಲ ಒಂದು ಸೀಟು ಬಂದಿದೆ. ಮತ್ತೆ ಇವರು ಇದೇ ರೀತಿ ಮೋದಿ ಅವರ ಬಗ್ಗೆ ಮಾತನಾಡಿದರೆ ಶೂನ್ಯಕ್ಕೆ ಸೀಮಿತವಾಗಬೇಕಾಗುತ್ತದೆ. ರಾಜ್ಯದ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ ಕೇಂದ್ರದ ಮೇಲೆ ಕಾಂಗ್ರೆಸ್ ಹೈಕಮಾಂಡ್‍ನಿಂದ ಒತ್ತಡ ತರಲಿ ಎಂದು ಹೇಳಿದರು.
ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ , ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ,
ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ.
ಸ್ವಾಭಿಮಾನಿ,
ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು.@INCKarnataka
— Siddaramaiah (@siddaramaiah) August 17, 2019
ಸಿದ್ದರಾಮಯ್ಯ ಟ್ವೀಟ್?
ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ, ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ. ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ. ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು ಎಂದು ಟ್ವೀಟ್ ಮಾಡಿದ್ದರು.