ಮಂಗಳೂರು: ನವ ಭಾರತ ನಿರ್ಮಾಣದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಪಾತ್ರ ನಿರ್ಣಾಯಕವಾಗಿರುತ್ತದೆ. ಈ ನೀತಿ ನಮ್ಮ ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯ ಭವಿಷ್ಯವನ್ನು ಉಜ್ವಲ ಮತ್ತು ಸುರಕ್ಷಿತವಾಗಿಸುತ್ತದೆ. ಈ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಂಗಸಂಸ್ಥೆ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸ್ವಾಯತ್ತತೆಯ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
Advertisement
ಮಾತೃಭಾಷೆಯಲ್ಲಿ ಅಧ್ಯಯನದ ಜೊತೆಗೆ ಆದ್ಯತೆಯ ವಿಷಯವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ನೀಡುವ ಈ ಶಿಕ್ಷಣ ನೀತಿಯ ಗುರಿಯು ಎಲ್ಲರಿಗೂ ಉನ್ನತ ಶಿಕ್ಷಣವನ್ನು ಒದಗಿಸುವುದು. ಭಾರತದ ಸಾಂಸ್ಕೃತಿಕ ವೈಭವವನ್ನು ಮರುಸ್ಥಾಪಿಸುವಲ್ಲಿ ಮತ್ತು ಈ ಶಿಕ್ಷಣ ನೀತಿಯನ್ನು ಯಶಸ್ವಿಗೊಳಿಸುವಲ್ಲಿ ನೀವು ನಿಮ್ಮ ಪಾತ್ರವನ್ನು ಮಾಡಬೇಕು, ಭಾರತವನ್ನು ಜಾಗತಿಕ ಜ್ಞಾನ-ಶಕ್ತಿಯನ್ನಾಗಿ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಗ್ರೀನ್ ಸಿಗ್ನಲ್
Advertisement
Advertisement
ಯುವಕರು ನಮ್ಮ ದೇಶದ ಭವಿಷ್ಯ ಹಾಗೂ ದೇಶದ ಅಭಿವೃದ್ಧಿಯ ಪ್ರಮುಖ ಭಾಗವಾಗಿದೆ. ಯುವಕರನ್ನು ನುರಿತರನ್ನಾಗಿಸುವ ಮೂಲಕವೇ ನಾವು ವೋಕಲ್ ಫಾರ್ ಲೋಕಲ್ ಎಂಬ ದಿಕ್ಕಿನಲ್ಲಿ ಮುನ್ನಡೆಯಬಹುದು. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ‘ಸ್ವಾವಲಂಬಿ ಭಾರತ’ದ ಕನಸನ್ನು ನನಸಾಗಿಸಲು ಒಗ್ಗಟ್ಟಿನಿಂದ ಕೊಡುಗೆ ನೀಡಿ. ಸ್ವಾತಂತ್ರ್ಯವನ್ನು ಅಖಂಡವಾಗಿಡಲು ಮತ್ತು ದೇಶಪ್ರೇಮದ ವಾತಾವರಣವನ್ನು ಬಲಪಡಿಸಲು ಮತ್ತು ಸೃಷ್ಟಿಸಲು ನಾವು ಒಂದು ಸಂಕಲ್ಪವನ್ನು ತೆಗೆದುಕೊಳ್ಳಬೇಕು ಮತ್ತು ಮುಂದೆ ಸಾಗಬೇಕು. ದೇಶದ ಸ್ವಾತಂತ್ರ್ಯ ಗಟ್ಟಿಯಾಗಬೇಕು, ಬಲಿಷ್ಠವಾಗಬೇಕು ಮತ್ತು ದೇಶಪ್ರೇಮದ ವಾತಾವರಣ ನಿರ್ಮಾಣವಾಗಬೇಕು ಎಂಬುದು ನಮ್ಮ ಪ್ರಯತ್ನವಾಗಬೇಕು ಎಂದು ಹೇಳಿದರು.
Advertisement
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹಸರಕಾರ್ಯವಾಹ ಮುಕುಂದ್ ಸಿ ಆರ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೆ.ಎಂ.ಕೃಷ್ಣಭಟ್, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ಸ್ವಾಯತ್ತ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ. ಶ್ರೀಧರ್ ಹೆಚ್.ಜಿ., ಸಂಚಾಲಕ ಮುರಳಿಕೃಷ್ಣ ಕೆ.ಎನ್, ಪ್ರಾಚಾರ್ಯ ವಿಷ್ಣುಗಣಪತಿ ಭಟ್ ಉಪಸ್ಥಿತರಿದ್ದರು.