– ಸಂಸದರು, ಶಾಸಕರಿಂದ ಸ್ಥಳ ಪರಿಶೀಲನೆ
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಗೆ (Bengaluru-Mysuru Expressway) ಹೊಸ ಎಂಟ್ರಿ-ಎಕ್ಸಿಟ್ (Entry-Exit) ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ರಾಮನಗರ-ಚನ್ನಪಟ್ಟಣ ನಡುವಿನ ಕಣ್ವ ಡ್ಯಾಂ ಜಂಕ್ಷನ್‌ನಲ್ಲಿ (Kanva Dam Junction) ಎಂಟ್ರಿ-ಎಕ್ಸಿಟ್ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದೆ. ಈ ಹಿನ್ನೆಲೆ ಇಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಮಂಜುನಾಥ್ ಹಾಗೂ ಶಾಸಕ ಸಿ.ಪಿ.ಯೋಗೇಶ್ವರ್ ಸ್ಥಳ ಪರಿಶೀಲನೆ ನಡೆಸಿದರು.
ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಸ್ಥಳ ವೀಕ್ಷಣೆ ಮಾಡಿ ಹೊಸ ಎಂಟ್ರಿ-ಎಕ್ಸಿಟ್‌ನಿಂದಾಗುವ ಅನುಕೂಲಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಮಂಜುನಾಥ್ (Dr Manjunath), ಪ್ರವಾಸಿಗರು ಹಾಗೂ ವಾಹನ ಸವಾರರ ಅನುಕೂಲಕ್ಕಾಗಿ ಹೊಸ ಎಂಟ್ರಿ ಹಾಗೂ ಎಕ್ಸಿಟ್‌ಗೆ ಹೆದ್ದಾರಿ ಪ್ರಾಧಿಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ರಾಂಪುರದ ಬಳಿ ಇದಕ್ಕೆ ಜಾಗ ಗುರುತಿಸಲಾಗಿತ್ತು. ಆದರೆ ಅಲ್ಲಿ ಸೂಕ್ತ ಜಾಗ ಇಲ್ಲದ್ದಕ್ಕೆ ಕಣ್ವ ಜಂಕ್ಷನ್ ಬಳಿ ಜಾಗ ಗುರುತು ಮಾಡಲಾಗಿದೆ. ಹಾಗಾಗಿ ಸ್ಥಳೀಯ ಶಾಸಕರು ಹಾಗೂ ಎನ್‌ಹೆಚ್‌ಎಐ (NHAI) ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ಮಾಡಲಾಗಿದೆ. ಕಣ್ವ ಜಂಕ್ಷನ್‌ನಲ್ಲಿ ಎಕ್ಸಿಟ್-ಎಂಟ್ರಿ ನಿರ್ಮಾಣ ಆದರೆ ಪ್ರವಾಸೋದ್ಯಮಕ್ಕೂ ಅನುಕೂಲ. ಕಣ್ವ ಡ್ಯಾಂ, ಕೆಂಗಲ್ ಆಂಜನೇಯನ ದೇವಾಲಯ ಹಾಗೂ ಬೆಂ-ಮೈ ಹಳೇ ಹೆದ್ದಾರಿಗೆ ನೇರ ಸಂಪರ್ಕ ಕಲ್ಪಿಸುತ್ತದೆ. ಶೀಘ್ರದಲ್ಲೇ ಮೂರು ಕಡೆಗಳಲ್ಲಿ ಸ್ಕೈವಾಕ್ ಕಾಮಗಾರಿ ಸಂಪೂರ್ಣ ಆಗಲಿದೆ. ಚನ್ನಪಟ್ಟಣದ ಬಳಿ ಟಾಯ್ಸ್ ಪಾರ್ಕ್ ಕೂಡಾ ಬರಲಿದೆ. ಅದಕ್ಕೂ ಈಗಾಗಲೇ ಜಾಗ ಗುರುತು ಮಾಡಲಾಗಿದೆ. ಎಕ್ಸ್‌ಪ್ರೆಸ್ ಹೈವೇಯ ಎಲ್ಲಾ ಸಮಸ್ಯೆಗಳನ್ನ ಹಂತಹಂತವಾಗಿ ಬಗೆಹರಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಚೀನಾದ ಹೋಟೆಲ್‌ನಲ್ಲಿ ಭಾರೀ ಬೆಂಕಿ – 22 ಮಂದಿ ಸಾವು, ಮೂವರಿಗೆ ಗಾಯ
ಇನ್ನೂ ಇದೇವೇಳೆ ಪಹಲ್ಗಾಮ್ ದಾಳಿಗೆ ಕೇಂದ್ರದ ಭದ್ರತಾ ವೈಫಲ್ಯ ಕಾರಣ ಎಂಬ ವಿಪಕ್ಷಗಳ ಆರೋಪ ವಿಚಾರ ಕುರಿತು ಮಾತನಾಡಿ, ಈ ಸಂದರ್ಭದಲ್ಲಿ ಘಟನೆಗೆ ಯಾವ ರೀತಿ ಪ್ರತಿಕ್ರಿಯೆ ನೀಡಬೇಕು ಎಂಬುದು ಮುಖ್ಯ. ಈ ಕ್ಷಣಕ್ಕೆ ಭಯೋತ್ಪಾದನೆ ಹಾಗೂ ಭಯೋತ್ಪಾದಕರಿಗೆ ತಕ್ಕಪಾಠ ಕಲಿಸುವ ಬಗ್ಗೆ ಯೋಚನೆ ಮಾಡಬೇಕು. ಮಿಕ್ಕಿದ್ದೆಲ್ಲ ಆಮೇಲೆ ಮಾತನಾಡಬಹುದು. ಯುದ್ಧ ಎಂಬುದು ಸೂಕ್ಷ್ಮವಾದ ವಿಚಾರ. ಅದರ ಬಗ್ಗೆ ಎಲ್ಲೆಂದರಲ್ಲಿ ಚರ್ಚೆ ಮಾಡೋದು ಸೂಕ್ತ ಅಲ್ಲ ಎಂದರು. ಇದನ್ನೂ ಓದಿ: ಗಡಿಜಿಲ್ಲೆ ಬೀದರ್‌ನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – ನೆಲಕ್ಕುರುಳಿದ ಬೃಹತ್ ಮರ