ಬೆಂಗಳೂರು: ಸಮ್ಮಿಶ್ರ ಸರ್ಕಾದ ಮೊದಲ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿಯರು ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣಕ್ಕೆ ಒಟ್ಟು 26,581 ಕೋಟಿ ರೂ. ಹಣವನ್ನು ಮೀಸಲಿಟ್ಟಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ:
* ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳ ಕಟ್ಟಡಗಳ ದುರಸ್ತಿಗಾಗಿ ವಿಶೇಷ ಪ್ಯಾಕೇಜ್ ಮೂಲಕ 150 ಕೋಟಿ ರೂ.
Advertisement
* ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ತರಬೇತಿ ಕೇಂದ್ರಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ, ತರಬೇತಿ ಕೇಂದ್ರಗಳನ್ನು ಬಲವರ್ಧಿಸುವ ಉದ್ದೇಶದಿಂದ 5 ಕೋಟಿ ರೂ. ಅನುದಾನ.
Advertisement
* ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮ ತರಗತಿಗಳ ಜೊತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಿಲಾಗುವುದು. ಇದರಿಂದಾಗಿ ಹೆಚ್ಚು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಆಕರ್ಷಿಸಬಹುದಾಗಿದೆ. ಆರಂಭಿಕವಾಗಿ 1,000 ಶಾಲೆಗಳಲ್ಲಿ ಇಂತಹ ಪ್ರಯೋಗ ನಡೆಸಲಾಗುವುದು.
Advertisement
Advertisement
* ರಾಜ್ಯದ 48 ಸಾವಿರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಮತ್ತು ಮಕ್ಕಳ ಹಾಜರಾತಿಯ ನಿಗಾವಹಿಸಲು ಬಯೋಮೆಟ್ರಿಕ್ ಸಾಧನಗಳನ್ನು ಅಳವಡಿಸಲಾಗುವುದು. ಈ ಯೋಜನೆಯನ್ನು ಮುಂದಿನ 3 ವರ್ಷಗಳಲ್ಲಿ ಜಾರಿಗೊಳಿಸಲಾಗುವುದು. ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ 5 ಕೋಟಿ ರೂಪಾಯಿ ಅನುದಾನ ಮೀಸಲು.
* ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಆಯ್ದ 4,100 ಸರ್ಕಾರಿ ಪ್ರಾಥಮಿಕ ಶಾಲೆಗಳ ಆವರಣಕ್ಕೆ ಸ್ಥಳಾಂತರಿಸಿ `ಬಾಲಸ್ನೇಹಿ ಕೇಂದ್ರ’ಗಳನ್ನಾಗಿ ಬಲವರ್ಧಿಸಲಾಗುವುದು. ಹಂತಹಂತವಾಗಿ ಕಾರ್ಯಸಾಧ್ಯತೆಯನುಸಾರ ಇತರೆ ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ/ಯು.ಕೆ.ಜಿ. ತರಗತಿಗಳನ್ನು ಪ್ರಾರಂಭಿಸಲಾಗುವುದು. ಇದರಿಂದ ಸರ್ಕಾರಿ ಶಾಲೆಗಳಲ್ಲಿನ ದಾಖಲಾತಿ ಪ್ರಮಾಣವು ಹೆಚ್ಚಾಗುವುದರೊಂದಿಗೆ ಮಕ್ಕಳ ಕಲಿಕೆ ಗುಣಮಟ್ಟವನ್ನು ವೃದ್ಧಿಸಬಹುದು.
* 1 ಕಿ.ಮೀ ವ್ಯಾಪ್ತಿಯಲ್ಲಿರುವ ಮತ್ತು ದಾಖಲಾತಿ ಕಡಿಮೆ ಇರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಹತ್ತಿರದ ಶಾಲೆಯೊಂದಿಗೆ ವಿಲೀನಗೊಳಿವುದು. ಈಗಾಗಲೇ 1 ಕಿ.ಮೀ ವ್ಯಾಪ್ತಿಯಲ್ಲಿ ಕಡಿಮೆ ದಾಖಲಾತಿ ಹೊಂದಿರುವ 28,847 ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಗುರುತಿಸಲಾಗಿದ್ದು, ಈ ಶಾಲೆಗಳನ್ನು ಹತ್ತಿರದ 8,530 ಸರ್ಕಾರಿ ಶಾಲೆಗಳೊಂದಿಗೆ ವಿಲೀನಗೊಳಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು.
ಉನ್ನತ ಶಿಕ್ಷಣ:
* ರಾಜ್ಯದ ಸರ್ಕಾರಿ ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಇತರೆ ದುರಸ್ಥಿ ಕಾರ್ಯಗಳಿಗೆ ವಿಶೇಷ ಪ್ಯಾಕೇಜ್ ಮುಖಾಂತರ 250 ಕೋಟಿ ರೂ. ಅನುದಾನ.
* ನಮ್ಮ ರಾಜ್ಯದಲ್ಲಿರುವ ವಿಶ್ವವಿದ್ಯಾನಿಲಗಳು ವೃತ್ತಿ ಪೂರಕ ಶಿಕ್ಷಣಗಳನ್ನು ನೀಡುತ್ತಿಲ್ಲವಾಗಿರುವುದರಿಂದ ಪದವೀಧರರನ್ನು ನೇರವಾಗಿ ಉದ್ಯೋಗಕ್ಕೆ ತೆಗೆದುಕೊಳ್ಳಲು ತೊಂದರೆಯಾಗಿದೆ. ಸಾಂಪ್ರದಾಯಿಕ ಶಿಕ್ಷಣ ವ್ಯವಸ್ಥೆಯಿಂದ ಹೊರತಾದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರಲು ಉದ್ದೇಶಿಸಿ ಕೌಶಲ್ಯವೇ ಬುನಾದಿಯಾದ ಹೊಸ ವಿಶ್ವವಿದ್ಯಾನಿಲಯಗಳನ್ನು ತೆರೆಯಲು ತೀರ್ಮಾನ ಕೈಗೊಂಡಿದೆ.
* ರಾಜ್ಯದಲ್ಲಿರುವ ಪ್ರಾಥಮಿಕ ಶಾಲಾ ಹಂತದಲ್ಲೇ ಕ್ರೀಡೆಯನ್ನು ಪಠ್ಯಕ್ರಮದಲ್ಲಿ ಸೇರಿಸಲಾಗಿದ್ದು, ಆದರೆ ಉನ್ನತ ಶಿಕ್ಷಣದಲ್ಲಿ ಸಾಂಪ್ರದಾಯಿಕ ವ್ಯವಸ್ಥೆಯ ಪದವಿ ಇದ್ದರೆ ಒಳ್ಳೆಯದು ಎಂಬ ಭಾವನೆಯಿಂದ ಬಹುತೇಕ ವಿದ್ಯಾರ್ಥಿಗಳು ಕ್ರೀಡೆ ಮತ್ತು ಅಂಗಸಾಧನೆಯನ್ನು ಒಂದು ವಿಷಯವಾಗಿ ಕಲಿಯಲು ಮುಂದೆ ಬರುತ್ತಿಲ್ಲ. ಹೀಗಾಗಿ ತುಮಕೂರು ಜಿಲ್ಲೆಯಲ್ಲಿ ಕ್ರೀಡೆ ಮತ್ತು ಅಂಗಸಾಧನೆಗೆ ಸಂಬಂಧಿಸಿದ ವಿಶ್ವವಿದ್ಯಾನಿಲಯವನ್ನು ಖಾಸಗಿ ಸಹಭಾಗಿತ್ವದಲ್ಲಿ ತೆರೆಯಲು ಯೋಜನೆ ರಚಿಸಲಾಗಿದೆ. ಇದಕ್ಕೆ ಪೂರಕವಾಗಿ ತುಮಕೂರು ಜಿಲ್ಲೆಯಲ್ಲಿ ಕ್ರೀಡೆ ಮತ್ತು ಅಂಗಸಾಧನೆಗಳಿಗೆ ಬೇಕಾದಂತಹ ಉಪಕರಣ ಮತ್ತು ಇತರೆ ವಸ್ತುಗಳನ್ನು ತಯಾರು ಮಾಡುವ ಘಟಕ ಸ್ಥಾಪನೆ ಹಾಗೂ ಪ್ರಾಥಮಿಕ ಕಾರ್ಯಗಳಿಗಾಗಿ 3 ಕೋಟಿ ರೂಪಾಯಿಗಳನ್ನು ಮೀಸಲೀರಿಸಿದೆ.
* ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಲಕ್ಷಾಂತರ ಭದ್ರತಾ ಸಿಬ್ಬಂದಿಗಳು ದುಡಿಯುತ್ತಿದ್ದಾರೆ. ಆದರೆ ಸರ್ಕಾರದಲ್ಲಿ ನೇಮಕವಾಗುವ ಹಾಗೂ ಖಾಸಗಿ ಕ್ಷೇತ್ರದಲ್ಲಿ ಸೇವೆ ಒದಗಿಸುವ ಭದ್ರತಾ ಸಿಬ್ಬಂದಿಗಳಿಗೆ ಅಗತ್ಯವಾದ ತರಬೇತಿಗಳನ್ನು ನೀಡುತ್ತಿರುವುದಿಲ್ಲ. ಇದೀಗ ಭದ್ರತೆಯ ಪರಿಕಲ್ಪನೆಯಲ್ಲಿ ಅನೇಕ ಬದಲಾವಣೆಗಳಾಗಿದ್ದು, ಸೈಬರ್ ಕ್ರೈಂ ಇದರಲ್ಲಿ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ `ತಾಯಿನಾಡು ಭದ್ರತಾ ವಿಶ್ವವಿದ್ಯಾನಿಲಯ’ವನ್ನು ಖಾಸಗಿ ಸಹಭಾಗಿತ್ವದೊಂದಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಆರಂಭಿಸಲು ಉದ್ದೇಶಿಸಿದ್ದು, ಇದಕ್ಕಾಗಿ 3 ಕೋಟಿ ರೂಪಾಯಿಯನ್ನು ಅನುದನವನ್ನು ನೀಡಿದೆ.
* ನಮ್ಮ ಈಗೀನ ಪ್ರವಾಸೋದ್ಯಮವು ಸಂಘಟಿತವಾಗಿ ಒಂದು ಉದ್ಯಮದ ರೂಪದಲ್ಲಿರುವುದಿಲ್ಲ. ಅಲ್ಲದೇ ಅಗತ್ಯವಿರುವಷ್ಟು ಉದ್ಯೋಗವನ್ನು ನಿರೀಕ್ಷಿತ ಮಟ್ಟದಲ್ಲಿ ಕಲ್ಪಿಸಿರುವುದಿಲ್ಲ. ಪ್ರವಾಸೋದ್ಯಮ ಎಂದರೆ ಉತ್ತಮವಾಗಿ ತರಬೇತಿ ಹೊಂದಿದ, ವಿವಿಧ ಭಾಷೆಯಲ್ಲಿ ಪ್ರವಾಸಿ ಸ್ಥಳದ ಬಗ್ಗೆ ವಿವರವಾದ ಮಾಹಿತಿ ನೀಡುವ ಉತ್ತಮ ಮಾರ್ಗದರ್ಶಿಗಳು ಇರಬೇಕು. ಪ್ರವಾಸಿಗರೊಂದಿಗೆ ಸೌಜನ್ಯದಿಂದ ವರ್ತಿಸುವ ಸಿಬ್ಬಂದಿಗಳಿರಬೇಕು. ಪ್ರವಾಸೋದ್ಯಮವನ್ನು ಲಾಭದಾಯಕವಾಗಿ ನಡೆಸುವ ವ್ಯವಹಾರಿಕ ಜ್ಞಾನ ಇರಬೇಕು. ಸರ್ಕಾರವು ಪ್ರವಾಸಿ ತಾಣಗಳಲ್ಲಿ ರಸ್ತೆ, ಶೌಚಾಲಯ ಇತ್ಯಾದಿ ಮೂಲಸೌಕರ್ಯಗಳನ್ನು ಒದಗಿಸಬಹುದು. ಆದರೆ ಪ್ರವಾಸಿ ಸ್ಥಳ ಮತ್ತು ಪ್ರವಾಸಿಗಳ ಮಧ್ಯೆ ಇರುವ ಮುಖ್ಯ ಕೊಂಡಿಯಾದ ಭಾವನಾತ್ಮಕವಾಗಿ ಬೆಸೆಯುವ ಮಾನವ ಸಂಪನ್ಮೂಲವನ್ನು ಸೃಜಿಸಲಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲವನ್ನು ಸೃಜಿಸಲಾಗುದಿಲ್ಲ. ಈ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲವನ್ನು ನಿರಂತರವಾಗಿ ತರಬೇತಿಯ ಮುಖಾಂತರ ಉತ್ತೇಜಿಸಲು ಖಾಸಗಿ ಸಹಭಾಗಿತ್ವದಲ್ಲಿ ಒಂದು ಪ್ರವಸೋದ್ಯಮ ವಿಶ್ವವಿದ್ಯಾನಿಲಯವನ್ನು ಐತಿಹಾಸಿಕ ಸ್ಥಳವಾದ ಹಂಪಿಯಲ್ಲಿ ಆರಂಭಿಸಲು ಉದ್ದೇಶಿಸಿ 3 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ.