ಜೈಪುರ: ರಾಜ್ಯದಲ್ಲಿ ಪಕ್ಷ ಹಾಗೂ ಸರ್ಕಾರವನ್ನು ಮುನ್ನಡೆಸಲು ಹೊಸ ಪೀಳಿಗೆಗೆ ಅವಕಾಶ ನೀಡಬೇಕು ಎಂದು ರಾಜಸ್ಥಾನ ಮುಖ್ಯಮಂತ್ರಿ (Rajasthan Chief Minister) ಅಶೋಕ್ ಗೆಹ್ಲೋಟ್ (Ashok Gehlot) ಹೇಳಿದ್ದಾರೆ. ಆ ಮೂಲಕ ಸಿಎಂ ಸ್ಥಾನಕ್ಕೆ ರಾಜೀನಾಮೆ (Resignation) ನೀಡುವ ಸುಳಿವು ನೀಡಿದ್ದಾರೆ.
ಜೈಪುರದಲ್ಲಿ ಭಾನುವಾರ ನಡೆಯಲಿರುವ ನಿರ್ಣಾಯಕ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಗೆ ಮುನ್ನ ಮಾತನಾಡಿದ ಅವರು, ನಾನು NSUI ಯಿಂದ ಕಳೆದ 50 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. 40 ವರ್ಷಗಳಿಂದ ಕೆಲವು ಸಾಂವಿಧಾನಿಕ ಹುದ್ದೆಯಲ್ಲಿದ್ದೇನೆ. ಒಬ್ಬ ವ್ಯಕ್ತಿಯು ಇನ್ನೇನು ಕೇಳಬಹುದು? ನಾನು ಮೂರು ಬಾರಿ ಸಿಎಂ, ಶಾಸಕ, ಸಂಸದ, ಕೇಂದ್ರ ಸಚಿವ ಮತ್ತು ರಾಜ್ಯ ಪಕ್ಷದ ಮುಖ್ಯಸ್ಥನಾಗಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 108 ಅಂಬುಲೆನ್ಸ್ ಕರೆ ಸ್ವೀಕಾರ ಸೇವೆ ಪುನರಾರಂಭಗೊಂಡಿದೆ: ಆರೋಗ್ಯ ಇಲಾಖೆ ಸ್ಪಷ್ಟನೆ
Advertisement
Advertisement
ಯಾವುದೇ ನಾಯಕರ ಹೆಸರು ಉಲ್ಲೇಖಿಸದೇ ಮಾತನಾಡಿದ ಗೆಹ್ಲೋಟ್, ಹೊಸ ತಲೆಮಾರಿಗೆ ಅವಕಾಶ ನೀಡಬೇಕು. ಎಲ್ಲರೂ ಒಟ್ಟಾಗಿ ದೇಶಕ್ಕೆ ನಾಯಕತ್ವವನ್ನು ನೀಡಬೇಕು ಎಂದು ನಾನು ಆಶಿಸುತ್ತೇನೆ ಎಂದಿದ್ದಾರೆ.
Advertisement
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಗೆಹ್ಲೋಟ್ ಸ್ಪಷ್ಟಪಡಿಸಿದ್ದರು. ಹೀಗಾಗಿ ರಾಜಸ್ಥಾನದ ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ: ತಿರುಪತಿ: ಸಾಮಾನ್ಯ ಯಾತ್ರಿಗಳಿಗೆ ಗುಡ್ ನ್ಯೂಸ್ ನೀಡಿದ ಟಿಟಿಡಿ