ಬೆಂಗಳೂರು: ರಾಜ್ಯದ ವಿವಿಧ ಹೋಟೆಲ್, ರೆಸ್ಟೋರೆಂಟ್ ಹಾಗೂ ಡಾಬಾಗಳಿಗೆ ಆಹಾರ ಸುರಕ್ಷತಾ ಇಲಾಖೆಯು ಮಾರ್ಗಸೂಚಿ ಹೊರಡಿಸಿದೆ.
ಇತ್ತೀಚೆಗೆ ನಡೆದ ತಪಾಸಣೆಗಳ ಸಂದರ್ಭದಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳನ್ನು ರಚಿಸಲಾಗಿದೆ. ಅವುಗಳ ಕಟ್ಟುನಿಟ್ಟಿನ ಅನುಷ್ಠಾನವನ್ನು ಮಾಡಬೇಕು. ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರೋಗ್ಯ ಸಚಿವ ಯು.ಟಿ.ಖಾದರ್ ಎಚ್ಚರಿಸಿದ್ದಾರೆ.
ಏನು ಮಾರ್ಗಸೂಚಿ?
ಆಹಾರ ವ್ಯವಹಾರ ನಿರ್ವಾಹಕರು (FBOs) ಪಾಲಿಸಬೇಕಾದ ನಿಯಮಗಳು
* ಆಹಾರ ವ್ಯವಹಾರದ ಪರವಾನಗಿಯನ್ನು ಸಂಸ್ಥೆಯ ಆವರಣದಲ್ಲಿ ಎಲ್ಲರಿಗೂ ಗೋಚರಿಸುವ ಪ್ರಮುಖ ಸ್ಥಳದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು.
* ಆಹಾರ ವ್ಯವಹಾರದ ಪ್ರಕ್ರಿಯೆಗಳು, ಚಟುವಟಿಕೆಗಳು ಅಥವಾ ಇತರೆ ವಿವರಗಳಲ್ಲಿ ಯಾವುದೇ ಬದಲಾವಣೆ/ಮಾರ್ಪಾಡು ಮಾಡಿದಲ್ಲಿ ಸಂಬಂಧಿತ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು.
ಆಹಾರ ತಯಾರು ಮಾಡುವ ಪ್ರದೇಶ ಹೇಗಿರಬೇಕು?
* ಅಡುಗೆ ಪ್ರದೇಶವನ್ನು ಸದಾ ಸ್ವಚ್ಛವಾಗಿ, ವ್ಯವಸ್ಥಿತವಾಗಿ ಹಾಗೂ ಸಮರ್ಪಕ ಗಾಳಿಯಾಡುವಂತೆ ನಿರ್ವಹಿಸಬೇಕು.
* ಪಾತ್ರೆ ತೊಳೆಯುವುದು, ಉಪಕರಣಗಳನ್ನು ಸ್ವಚ್ಛಗೊಳಿಸುವುದು ಹಾಗೂ ಕಚ್ಚಾ ಆಹಾರ ಪದಾರ್ಥಗಳನ್ನು ತೊಳೆಯುವುದಕ್ಕಾಗಿ ಪ್ರತ್ಯೇಕ ಸಿಂಕ್‌ಗಳನ್ನು ವ್ಯವಸ್ಥೆ ಮಾಡಬೇಕು.
* ಅಡುಗೆ ಮತ್ತು ಆಹಾರ ವಿತರಣೆಗೆ ಬಳಸುವ ಉಪಕರಣಗಳು, ಪಾತ್ರೆಗಳು, ಕ್ರಾಕರಿ ಹಾಗೂ ಕಟ್ಲರಿಗಳನ್ನು ಡಿಟರ್ಜೆಂಟ್ ಮತ್ತು ಬಿಸಿ ನೀರನ್ನು ಬಳಸಿ ಸಮರ್ಪಕವಾಗಿ ತೊಳೆಯಬೇಕು ಹಾಗೂ ಸ್ವಚ್ಛಗೊಳಿಸಬೇಕು.
* ಕಚ್ಚಾ ಆಹಾರ ಪದಾರ್ಥಗಳು ಬಳಸುವ ಕಚ್ಚಾ ಆಹಾರ ಪದಾರ್ಥಗಳು ಉತ್ತಮ ಗುಣಮಟ್ಟದ್ದಾಗಿದ್ದು, ವಿಶ್ವಾಸಾರ್ಹ ಮೂಲದಿಂದ ಖರೀದಿಸಬೇಕು.
* ಕಚ್ಚಾ ಪದಾರ್ಥಗಳನ್ನು ಸ್ವಚ್ಛ ಮತ್ತು ನೈರ್ಮಲ್ಯಯುತ ಪರಿಸ್ಥಿತಿಯಲ್ಲಿ, ಸೂಕ್ತ ತಾಪಮಾನದಲ್ಲಿ ಸಂಗ್ರಹಿಸಬೇಕು.
* ಹಣ್ಣು ಮತ್ತು ತರಕಾರಿಗಳನ್ನು ಬಳಸುವ ಮೊದಲು ಚೆನ್ನಾಗಿ ತೊಳೆಯಬೇಕು.
* ಆಹಾರ ಪದಾರ್ಥಗಳ ಗುಣಮಟ್ಟವನ್ನು ನಿಯಮಿತವಾಗಿ ಪರಿಶೀಲಿಸಿ ಅವು ಹಾಳಾಗದಂತೆ ಕ್ರಮ ಕೈಗೊಳ್ಳಬೇಕು.
* ಆಹಾರ ಪದಾರ್ಥಗಳನ್ನು ಸೂಕ್ತವಾಗಿ ಮುಚ್ಚಿ ಸಂಗ್ರಹಿಸಬೇಕು.
ಅಡುಗೆ ಮತ್ತು ಆಹಾರ ಸಂಗ್ರಹಣೆ ಏನು ಮಾರ್ಗಸೂಚಿ?
* ಆಹಾರವನ್ನು ಸಮರ್ಪಕವಾಗಿ ತಯಾರಿಸಿ, ಸಂಸ್ಕರಿಸಿ ಮತ್ತು ಸಂಪೂರ್ಣವಾಗಿ ಬೇಯಿಸಬೇಕು.
* ಆಹಾರ ತಯಾರಿಕೆಗೆ ಬಳಸುವ ಎಲ್ಲಾ ಪದಾರ್ಥಗಳು ತಾಜಾವಾಗಿದ್ದು, ಸಂಪೂರ್ಣವಾಗಿ ಬೇಯಿಸಿರುವುದನ್ನು ಖಚಿತಪಡಿಸಬೇಕು.
* ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರ ತಯಾರಿಕೆಯನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು.
* ಬಳಸಿದ ಅಡುಗೆ ಎಣ್ಣೆಯನ್ನು ಮರುಬಳಕೆ ಮಾಡುವುದನ್ನು ತಪ್ಪಿಸಬೇಕು.
* ಆಹಾರವನ್ನು ಸಂಪೂರ್ಣವಾಗಿ ಬೇಯಿಸಬೇಕು.
* ತಣ್ಣನೆಯ ಆಹಾರವನ್ನು 5°Cಕ್ಕಿಂತ ಕಡಿಮೆ ತಾಪಮಾನದಲ್ಲಿ ಹಾಗೂ ಬಿಸಿ ಆಹಾರವನ್ನು 60°Cಕ್ಕಿಂತ ಹೆಚ್ಚಿನ ತಾಪಮಾನದಲ್ಲಿ ಇಡಬೇಕು.
* ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರಕ್ಕಾಗಿ ಪ್ರತ್ಯೇಕ ಕತ್ತರಿಸುವ ಫಲಕಗಳು, ಚಾಕುಗಳು ಹಾಗೂ ಪಾತ್ರೆಗಳನ್ನು ಬಳಸಬೇಕು.
* ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರವನ್ನು ಪ್ರತ್ಯೇಕ ಪಾತ್ರೆಗಳಲ್ಲಿ ಸಂಗ್ರಹಿಸಬೇಕು.
* ತಣ್ಣನೆಯ ಆಹಾರವನ್ನು 5°Cಕ್ಕಿಂತ ಕಡಿಮೆ ತಾಪಮಾನದಲ್ಲಿ ಮತ್ತು ಫ್ರೋಜನ್ ಆಹಾರ ಪದಾರ್ಥಗಳನ್ನು
ಅಡುಗೆಮನೆ ಮತ್ತು ಆವರಣದ ಸ್ವಚ್ಛತೆ ಹೇಗಿರಬೇಕು?
* ಗೋಡೆಗಳು, ನೆಲ ಮತ್ತು ಮೇಲ್ಛಾವಣಿಯನ್ನು ಸ್ವಚ್ಛವಾಗಿ, ಸಮತಟ್ಟಾಗಿ ಮತ್ತು ಉತ್ತಮ ಸ್ಥಿತಿಯಲ್ಲಿ ನಿರ್ವಹಿಸಬೇಕು.
* ಉದುರುವ ಬಣ್ಣ, ಬಿರುಕುಗಳು, ತೆರೆದ/ನೇತಾಡುವ ವಿದ್ಯುತ್ ತಂತಿಗಳು ಮುಂತಾದ ಅಪಾಯಕಾರಿ ಪರಿಸ್ಥಿತಿಗಳು ಇರದಂತೆ ನೋಡಿಕೊಳ್ಳಬೇಕು.
* ಧೂಳು ಮತ್ತು ನೊಣಗಳ ಪ್ರವೇಶವನ್ನು ತಡೆಯಲು ಕಿಟಕಿ ಮತ್ತು ಬಾಗಿಲುಗಳಿಗೆ ಜಾಲರಿ (Mesh) ಅಥವಾ ಅಗತ್ಯವಿರುವಲ್ಲಿ ಏರ್ ಕರ್ಟನ್ ಅಳವಡಿಸಬೇಕು.
* ಸಾಬೂನು ಮತ್ತು ಶುದ್ಧ ಹರಿಯುವ ನೀರಿನೊಂದಿಗೆ ಪ್ರತ್ಯೇಕ ಕೈತೊಳೆಯುವ ಸಿಂಕ್‌ಗಳನ್ನು ಒದಗಿಸಬೇಕು.
* ಕಚ್ಚಾ ಆಹಾರ ತೊಳೆಯಲು ಮತ್ತು ಪಾತ್ರೆ/ಉಪಕರಣಗಳನ್ನು ತೊಳೆಯಲು ಪ್ರತ್ಯೇಕವಾಗಿ ಗುರುತಿಸಲಾದ ಸಿಂಕ್‌ಗಳನ್ನು ಬಳಸಬೇಕು.
* ಕಸದ ಬುಟ್ಟಿಗಳನ್ನು ನಿಯಮಿತವಾಗಿ ಖಾಲಿ ಮಾಡಿ, ಮುಚ್ಚಳದೊಂದಿಗೆ ಇಡಬೇಕು. ಇದರಿಂದ ಕೀಟಗಳು ಮತ್ತು ಸೂಕ್ಷ್ಮಜೀವಿಗಳ ಹರಡುವಿಕೆಯನ್ನು ತಡೆಯಬಹುದು.
* ತ್ಯಾಜ್ಯ ಮತ್ತು ಬಳಸಿದ ಅಡುಗೆ ಎಣ್ಣೆಯ ವಿಲೇವಾರಿ
* ಅಡುಗೆಮನೆಯ ಆಹಾರ ತ್ಯಾಜ್ಯವನ್ನು ಸಮರ್ಪಕವಾಗಿ ಸಂಗ್ರಹಿಸಿ ನಿಯಮಾನುಸಾರ ವಿಲೇವಾರಿ ಮಾಡಬೇಕು.
* ಬಳಸಿದ ಅಡುಗೆ ಎಣ್ಣೆಯನ್ನು ಅನಧಿಕೃತವಾಗಿ ಮರುಬಳಕೆ ಮಾಡಬಾರದು.
* ಬಳಸಿದ ಅಡುಗೆ ಎಣ್ಣೆಯನ್ನು ಅಧಿಕೃತ/ಅನುಮೋದಿತ ಮಾರ್ಗಗಳ ಮೂಲಕ ಮಾತ್ರ ವಿಲೇವಾರಿ ಮಾಡಬೇಕು.

