ನವದೆಹಲಿ: ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ಸಮಸ್ಯೆಗಳ ಪರಿಶೀಲನೆಯನ್ನು ಹೊಸ ಕಾನೂನು ಆಯೋಗವು ತನ್ನ ಸುಪರ್ದಿಗೆ ತೆಗೆದುಕೊಂಡಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಕಳೆದ ವರ್ಷ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಡಿ.1ರಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಸಭೆಯ ಶೂನ್ಯವೇಳೆಯಲ್ಲಿ ಏಕರೂಪ ನಾಗರಿಕ ಸಂಹಿತೆಯ ವಿಷಯವನ್ನು ಪ್ರಸ್ತಾಪಿಸಿದ್ದರು. ಇದನ್ನೂ ಓದಿ: ನಾನು ಸಾವಿಗೆ ಹೆದರಲ್ಲ – Z ಶ್ರೇಣಿಯ ಭದ್ರತೆ ತಿರಸ್ಕರಿಸಿದ ಓವೈಸಿ
Advertisement
Advertisement
ಈ ಕುರಿತು ಪ್ರತಿಕ್ರಿಯಿಸಿರುವ ರಿಜಿಜು ಅವರು, ವಿವಿಧ ಸಮುದಾಯಗಳನ್ನು ನಿಯಂತ್ರಿಸುವ ವಿವಿಧ ವೈಯಕ್ತಿಕ ಕಾನೂನುಗಳ ನಿಬಂಧನೆಗಳ ಆಳವಾದ ಅಧ್ಯಯನದ ಅಗತ್ಯವಿದೆ. ಹೀಗಾಗಿ ಈ ವಿಷಯದ ಸೂಕ್ಷ್ಮತೆಯ ಅಂಶವನ್ನು ಗಮನದಲ್ಲಿಟ್ಟುಕೊಂಡು ಹೊಸ ಕಾನೂನು ಆಯೋಗದ ತೆಕ್ಕೆಗೆ ವಹಿಸಲಾಗಿದೆ ಎಂದು ಹೇಳಿದ್ದಾರೆ.
Advertisement
21ನೇ ಕಾನೂನು ಆಯೋಗದ ಅವಧಿಯು 2018ರ ಆ.31ಕ್ಕೆ ಕೊನೆಗೊಂಡಿತ್ತು. ಹೀಗಾಗಿ 22ನೇ ಹೊಸ ಕಾನೂನು ಆಯೋಗವು ಏಕರೂಪ ನಾಗರಿಕ ಸಂಹಿತೆ ವಿಷಯವನ್ನು ಕೈಗೆತ್ತಿಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಕ್ರಮ ಮರಳುಗಾರಿಕೆಯಲ್ಲಿ ಸೋದರಳಿಯ ಬಂಧನಕ್ಕೆ ಪಂಜಾಬ್ ಸಿಎಂ ಪ್ರತಿಕ್ರಿಯೆ
Advertisement
ಡಿಸೆಂಬರ್ 2020ರಲ್ಲಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗೋವಾದ ವಿಮೋಚನೆಯ 60ನೇ ವಾರ್ಷಿಕೋತ್ಸವದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ್ದರು. ಈ ವೇಳೆ ಗೋವಾದ ಸಾಮಾನ್ಯ ನಾಗರಿಕ ಸಂಹಿತೆಯನ್ನು ಶ್ಲಾಘಿಸಿದ್ದರು.
ವಿವಿಧ ಧಾರ್ಮಿಕ ಸಮುದಾಯಗಳನ್ನು ನಿಯಂತ್ರಿಸುವ ವಿವಿಧ ವೈಯಕ್ತಿಕ ಕಾನೂನುಗಳನ್ನು ಬದಲಿಸಲು ಏಕರೂಪ ನಾಗರಿಕ ಸಂಹಿತೆ ಜಾರಿ ವಿಷಯವು ಆಡಳಿತಾರೂಢ ಬಿಜೆಪಿಯ ಪ್ರಮುಖ ರಾಜಕೀಯ ಗುರಿಗಳಲ್ಲಿ ಒಂದಾಗಿದೆ. ಪಕ್ಷದ 2019ರ ಪ್ರಣಾಳಿಕೆಯನ್ನು ಈ ವಿಷಯ ಕಾಣಿಸಿಕೊಂಡಿತ್ತು.