ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತಮಟ್ಟದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಹಲವು ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಪ್ರಕಟಿಸಿದ್ದಾರೆ.
ಮೈಕ್ರೋ ಫೈನಾನ್ಸ್‌ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡುವುದಾಗಿ ಘೋಷಣೆ ಮಾಡಿದ್ದರು.
Advertisement
ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಕಾನೂನಿನಲ್ಲಿ ಅವಕಾಶ ಇದೆ. ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮ. ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು ಕ್ರಮ. ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
Advertisement
ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ. ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ. ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಭೆ ನಡೆಸಿ ಈ ಕುರಿತ ಜನರಿಗೆ ಸೂಕ್ತ ತಿಳುವಳಿಕೆ, ಹಾಗೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಬೇಕು ಎಂದಿದ್ದಾರೆ.
Advertisement
ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚನೆ. ಇಲ್ಲಿ ದೂರು ನೀಡಬಹುದು. ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಸೂಚಿಸಲಾಗಿದೆ ಅಂದ್ರು.
Advertisement
Banning of unregulated lending Activities ಕುರಿತು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿರುವವರ ಹಿತ ಕಾಪಾಡಲು ಕ್ರಮ. ಕಿರುಕುಳ ತಪ್ಪಿಸಲು ಸೂಕ್ತ ಕಾನೂನು ರಚಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು. ಸಾಲ ವಸೂಲಾತಿ ಕುರಿತಾಗಿ ಆರ್ ಬಿಐ ಹಲವು ಮಾರ್ಗಸೂಚಿ ಹೊರಡಿಸಿವೆ. ಸಂಜೆ 5ಗಂಟೆ ಬಳಿಕ ಮನೆಗೆ ಸಾಲ ವಸೂಲಾತಿಗೆ ಹೋಗಬಾರದು. ಬೆದರಿಕೆ ಹಾಕಬಾರದು. ವಸೂಲಾತಿಗೆ ಮೂರನೇ ವ್ಯಕ್ತಿಗಳನ್ನು ಬಳಸಿಕೊಳ್ಳಬಾರದು. ಇತ್ಯಾದಿ. ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸುವುದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.