ನಾಳೆ ಗೋಲ್ಡನ್ ಸ್ಟಾರ್ ಗಣೇಶ್ (Ganesh) ಅವರು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟು ಹಬ್ಬಕ್ಕೆ ಮುನ್ನಾ ದಿನ ಇಂದು ಅವರ ಹೊಸ ಸಿನಿಮಾದ ಟೈಟಲ್ (Title) ಲಾಂಚ್ ಆಗಿದೆ. ದಂಡುಪಾಳ್ಯ ಖ್ಯಾತಿಯ ಶ್ರೀನಿವಾಸ್ ರಾಜು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ (Krishnam Pranaya Sakhi) ಎಂದು ಹೆಸರಿಡಲಾಗಿದೆ.
ಗಣೇಶ್ ನಾಯಕರಾಗಿ ನಟಿಸುತ್ತಿರುವ 41 ನೇ ಚಿತ್ರ ಇದಾಗಿದ್ದು, ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು (Srinivas Raju) ಇದೇ ಮೊದಲ ಬಾರಿಗೆ ಗಣೇಶ್ ಜೊತೆ ಕೆಲಸ ಮಾಡುತ್ತಿದ್ದಾರೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು, ರಾಜಸ್ಥಾನ ಹಾಗೂ ಯುರೋಪ್ ನಲ್ಲಿ ಚಿತ್ರೀಕರಣ ನಡೆಯಲಿದೆ. ಇದನ್ನೂ ಓದಿ:ಕಾರವಾರದಲ್ಲಿ ಬದುಕಿದ್ದ ವಿಲಕ್ಷಣ ವ್ಯಕ್ತಿಯ ಕಥೆಯೇ ‘ಟೋಬಿ’ : ಗುಟ್ಟು ರಟ್ಟು
ಜುಲೈ 2ರಂದು ಗಣೇಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. ಅರ್ಜುನ್ ಜನ್ಯ ಈ ಚಿತ್ರದ ಸಂಗೀತ ನಿರ್ದೇಶಕರು.
ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸುತ್ತಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಸುಧಾರಾಣಿ, ಶ್ರೀನಿವಾಸಮೂರ್ತಿ, ಶಿವಧ್ವಜ್ ಶೆಟ್ಟಿ, ಬೆನಕ ಗಿರಿ ಮುಂತಾದ ಕಲಾವಿದರು ಕೃಷ್ಣಂ ಪ್ರಣಯ ಸಖಿ ಚಿತ್ರದಲ್ಲಿ ನಟಿಸಿದ್ದಾರೆ.
Web Stories