ಮಂಗಳೂರು: ದೈಹಿಕವಾಗಿ ಮತ್ತು ಬುದ್ಧಿವಂತಿಕೆಯಲ್ಲಿ ಇತರ ಜಿಲ್ಲೆಯ ಜನರಿಗೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯವರು ಒಂದು ಹೆಜ್ಜೆ ಮುಂದೆ ಎಂಬ ಅಭಿಪ್ರಾಯವಿದೆ. ಆದರೆ ಇಲ್ಲಿನ ಜನ ಪೊಲೀಸ್ ಸೇವೆಗೆ ಬರುವುದು ಮಾತ್ರ ಅತ್ಯಂತ ಕಡಿಮೆ. ಹೀಗಾಗಿ ಜಿಲ್ಲೆಯ ಜನರಿಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಪರ್ ಆಫರ್ ನೀಡಿದ್ದಾರೆ. ಈ ಆಫರ್ ಗೆ ಇದಿಗ ಉತ್ತಮ ಬೆಂಬಲ ಸಿಕ್ಕಿದೆ.
Advertisement
ದಕ್ಷಿಣ ಕನ್ನಡ ಜಿಲ್ಲೆಯ ಯುವಕರು ಪೊಲೀಸ್ ಇಲಾಖೆಗೆ ಸೇರ ಬಯಸುತ್ತಿದ್ದರು. ಆದರೆ ಈಗ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಸೇರುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಹೀಗಾಗಿ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಹಾಗೂ ಕಾನ್‍ಸ್ಟೇಬಲ್ ಆಗಲು ಬಯಸುವ ಜಿಲ್ಲೆಯ ಯುವಜನತೆಗೆ ಎನ್.ಶಶಿಕುಮಾರ್ ಉತ್ತಮ ಅವಕಾಶವೊಂದನ್ನು ನೀಡಿದ್ದಾರೆ. ಈಗಾಗಲೇ ಪಿ.ಸಿ ಮತ್ತು ಪಿ.ಎಸ್.ಐ ದೈಹಿಕ ಪರೀಕ್ಷೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ಒಂದು ತಿಂಗಳ ಕಾರ್ಯಾಗಾರ ನಡೆಸಲು ನಿರ್ಧರಿಸಿ ಅರ್ಜಿ ಆಹ್ವಾನಿಸಿದ್ದರು. ಕಮಿಷನರ್ ಕರೆಗೆ 710ಕ್ಕೂ ಅಧಿಕ ಮಂದಿ ರೆಸ್ಪಾನ್ಸ್ ಮಾಡಿದ್ದು, ಇದೀಗ ಅದರಲ್ಲಿ ಫಿಲ್ಟರ್ ಮಾಡಿ 200 ಅಭ್ಯರ್ಥಿಗಳನ್ನು ಸೆಲೆಕ್ಟ್ ಮಾಡಿ ತರಬೇತಿ ನೀಡಲಾಗುತ್ತಿದೆ.
Advertisement
Advertisement
ಪ್ರಾರಂಭದಲ್ಲಿ 100 ಮಂದಿಗೆ ಈ ತರಬೇತಿ ಕಾರ್ಯಗಾರ ಮಾಡುವ ನಿರ್ಧಾರ ಮಾಡಲಾಗಿತ್ತು. ಆದರೆ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾದರಿಂದ ಸ್ಕ್ರೀನಿಂಗ್ ಟೆಸ್ಟ್ ಮಾಡಿ 200 ಮಂದಿಯನ್ನು ಸೆಲೆಕ್ಟ್ ಮಾಡಲಾಗಿದೆ. ಇವರಿಗೆ ನಗರದ ಸೈಂಟ್ ಅಲೋಸಿಯಸ್ ವಿದ್ಯಾಸಂಸ್ಥೆಯಲ್ಲಿ ತರಬೇತಿಯನ್ನು ನೀಡಲಾಗುತ್ತಿದೆ. ಇದರಲ್ಲಿ 100 ಅಭ್ಯರ್ಥಿಗಳಿಗೆ ಹಾಸ್ಟೆಲ್‍ಗಳಲ್ಲೇ ಇದ್ದು ತರಬೇತಿ ಪಡೆಯುವ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಊಟದ ಸೌಲಭ್ಯದೊಂದಿಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಲಿಖಿತ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಯುವ ಪೊಲೀಸರಿಂದಲೇ ತರಬೇತಿ ನೀಡಲಾಗುತ್ತಿದೆ. ಇದನ್ನೂ ಓದಿ: ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!
Advertisement
ಕಳೆದ 11 ವರ್ಷಗಳಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ನೇಮಕಾತಿಯಾದವರು 68 ಮಂದಿ ಮಾತ್ರ. ಹೀಗಾಗಿ ಆಯಾ ಜಿಲ್ಲೆಯವರನ್ನೇ ಪೊಲೀಸ್ ಸೇವೆಗೆ ನೇಮಕಾತಿ ಮಾಡಲು ಅಧಿಕಾರಿಗಳು ಮುಂದಾಗುತ್ತಿದ್ದಾರೆ. ಈ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನೀನು ಮಹಿಳೆ ಉದ್ಯೋಗ ಮಾಡುವಂತಿಲ್ಲ, ಮನೆಗೆ ತೆರಳು – ಮಹಿಳಾ ಪತ್ರಕರ್ತೆಗೆ ಗೇಟ್‍ಪಾಸ್