ಬೆಂಗಳೂರು: ಇನ್ಮುಂದೆ ದೇವಾಲಯಗಳಲ್ಲಿ ಹೆಚ್ಚು ಸೌಂಡ್ ಇರುವಂತಹ ಧ್ವನಿವರ್ಧಕ ಬಳಸುವಂತಿಲ್ಲ. ಪೂಜೆ ಸಂದರ್ಭದಲ್ಲಿ ಡಮರುಗ, ಧ್ವನಿವರ್ಧಕ, ಭಾರೀ ಸದ್ದಾಗುವ ಗಂಟೆ ಹೊಡೆಯದಂತೆ ಮುಜರಾಯಿ ಇಲಾಖೆಯಡಿಯ ದೇವಸ್ಥಾನಗಳಿಗೆ ನೋಟಿಸ್ ನೀಡಲಾಗಿದೆ.
Advertisement
ಮಾಲಿನ್ಯ ನಿಯಂತ್ರಣ ಮಂಡಳಿಯ ನಿರ್ದೇಶನದಂತೆ ನೋಟಿಸ್ ನೀಡಲಾಗಿದೆ. ಒಂದು ವೇಳೆ ಹೆಚ್ಚು ಸೌಂಡ್ ಬಂದ್ರೆ ಎರಡು ಬಾರಿ ದಂಡ ಹಾಕ್ತಾರೆ. ಮೂರನೇ ಬಾರಿಗೆ ಕೇಸ್ ದಾಖಲಿಸಿಕೊಳ್ತಾರೆ. ಇನ್ನೂ ದೇವಸ್ಥಾನಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಕೂಡ ನಡೆಸಲಿದ್ದಾರೆ. ಇದನ್ನೂ ಓದಿ: ನಿನ್ನೆ ಕೂಲಿ ಕೆಲಸ ಮಾಡುತ್ತಿದ್ದವ ಇಂದು ಮಾಡೆಲ್- ಅದೃಷ್ಟ ಅಂದ್ರೆ ಇದು
Advertisement
Advertisement
ಈಗಾಗಲೇ ಬೆಂಗಳೂರಿನ ಪ್ರಸಿದ್ಧ ದೊಡ್ಡಗಣಪತಿ, ಬನಶಂಕರಿ, ಮಿಂಟೋ ಆಂಜನೇಯ ಸ್ವಾಮಿ ದೇವಸ್ಥಾನಗಳಿಗೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಪರಿಸರ ಮತ್ತು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಪ್ರತಿಕ್ರಿಯಿಸಿದ್ದು, ನಮ್ಮ ಇಲಾಖೆಯಿಂದ ಯಾವುದೇ ನೊಟೀಸ್ ಕೊಟ್ಟಿಲ್ಲ ಅಂತ ಇಲಾಖೆಯ ಸೆಕ್ರೇಟರಿ ಹೇಳಿದ್ದಾರೆ. ನೊಟೀಸ್ ಪತ್ರದ ಸಂಖ್ಯೆ ನಮ್ಮ ಇಲಾಖೆಯದಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಹಿಂದೂ ಧರ್ಮ ರಕ್ಷಣೆಗೆ ಮೈಸೂರು ಅರಮನೆ ಸದಾ ಸಿದ್ಧ: ರಾಜವಂಶಸ್ಥ ಯದುವೀರ್ ಒಡೆಯರ್