ಸಂಸತ್‌ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ವಿಪಕ್ಷಗಳ ಬಹಿಷ್ಕಾರ – ಭಾಗವಹಿಸುತ್ತೇವೆ ಎಂದ 2 ಪಕ್ಷಗಳು

Public TV
1 Min Read
New Parliament Building modi 9

ನವದೆಹಲಿ: ಕಾಂಗ್ರೆಸ್, ಎಡಪಕ್ಷಗಳು, ಟಿಎಂಸಿ ಸೇರಿದಂತೆ 19 ವಿಪಕ್ಷಗಳು ಮೇ 28 ರಂದು ನಡೆಯಲಿರುವ ನೂತನ ಸಂಸತ್ ಭವನ (New Parliament Inauguration) ಉದ್ಘಾಟನೆಯ ಕಾರ್ಯಕ್ರಮವನ್ನು ಬಹಿಷ್ಕರಿಸಿದರೆ 2 ಪಕ್ಷಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿವೆ.

ಎನ್‌ಡಿಎ (NDA) ಮಿತ್ರ ಪಕ್ಷವಲ್ಲದ ಒಡಿಶಾದ ಬಿಜೆಡಿ (BJD) ಮತ್ತು ಆಂಧ್ರಪ್ರದೇಶದ ವೈಎಸ್‌ಆರ್‌ಸಿಪಿ (YSRCP) ಭಾಗವಹಿಸುವುದಾಗಿ ಅಧಿಕೃತವಾಗಿ ತಿಳಿಸಿವೆ. ನೂತನ ಸಂಸತ್‌ ಉದ್ಘಾಟನೆ ದೇಶದ ಪ್ರಜಾಪ್ರಭುತ್ವ ಪಾಲಿಗೆ ಮಹತ್ವದ ದಿನವಾಗಿದೆ. ಭಿನ್ನಾಭಿಪ್ರಾಯಗಳಿದ್ದರೆ ನಂತರ ಕುಳಿತು ಚರ್ಚಿಸೋಣ ಎಂದು ಬಿಜೆಡಿ ಮುಖ್ಯಸ್ಥ ಒಡಿಶಾ ಸಿಎಂ ನವೀನ್‌ ಪಟ್ನಾಯಕ್‌ ಹೇಳಿದ್ದಾರೆ.

New Parliament Building modi 1

ವಿಪಕ್ಷಗಳಿಂದ ಬಹಿಷ್ಕಾರ
ಪ್ರಧಾನಿ ಮೋದಿ (PM Narendra Modi) ನೂತನ ಸಂಸತ್ ಭವನವನ್ನು ಉದ್ಘಾಟನೆ ಮಾಡಲಿದ್ದು, ರಾಷ್ಟ್ರಪತಿಗಳು ಸಂಸತ್ ಭವನವನ್ನು ಉದ್ಘಾಟನೆ ಮಾಡದೇ ಇರುವುದನ್ನು ವಿಪಕ್ಷಗಳು ರಾಷ್ಟ್ರಪತಿಗಳ ಹುದ್ದೆಗೆ ಮಾಡಿದ ಅವಮಾನ ಎಂದು ಆರೋಪಿಸಿವೆ. ಇದನ್ನೂ ಓದಿ: ನೂತನ ಸಂಸತ್ ಭವನದಲ್ಲಿ ಇಡಲಾಗುತ್ತದೆ ಚಿನ್ನದ ರಾಜದಂಡ – ಸೆಂಗೊಲ್ ವಿಶೇಷತೆ ಏನು?

 

ಕಾರ್ಯಕ್ರಮವನ್ನು ಬಹಿಷ್ಕರಿಸುತ್ತಿರುವುದರ ಬಗ್ಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ವಿಪಕ್ಷಗಳು ನೂತನ ಸಂಸತ್ ಕಟ್ಟಡ ಉದ್ಘಾಟನೆ ಒಂದು ಮಹತ್ವದ ಸಂದರ್ಭವಾಗಿದೆ. ಆದರೆ ಸರ್ಕಾರ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಕುತ್ತಿದೆ ಎಂಬ ನಮ್ಮ ನಂಬಿಕೆ ಹಾಗೂ ಹೊಸ ಸಂಸತ್ತನ್ನು ನಿರ್ಮಿಸಿದ ನಿರಂಕುಶ ವಿಧಾನದ ಬಗ್ಗೆ ನಮ್ಮ ಅಸಮ್ಮತಿ ಹೊರತಾಗಿಯೂ ನಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಈ ಸಂದರ್ಭವನ್ನು ಗುರುತಿಸಲು ನಾವು ಮುಕ್ತರಾಗಿದ್ದೇವೆ. ಆದರೆ ಪ್ರಧಾನಿ ಮೋದಿ ಅವರು ಸ್ವತಃ ಸಂಸತ್ ಭವನವನ್ನು ಉದ್ಘಾಟಿಸುವ ನಿರ್ಧಾರ ತೆಗೆದುಕೊಂಡು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿರುವುದು ದೊಡ್ಡ ಅವಮಾನವಷ್ಟೇ ಅಲ್ಲದೇ ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ ಎಂದು ಹೇಳಿವೆ.

Share This Article