ನವದೆಹಲಿ: ನೂತನ ಸಂಸತ್ ಭವನವನ್ನು (New Parliament Building) ಈ ತಿಂಗಳ ಕೊನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸುವ ಸಾಧ್ಯತೆಯಿದೆ.
Advertisement
ಮೇ ಕೊನೆಯ ವಾರದಲ್ಲಿ ಮೋದಿ ನೇತೃತ್ವದ ಸರ್ಕಾರ (Modi Government) ಅಧಿಕಾರಕ್ಕೆ ಏರಿ 9 ವರ್ಷ ಪೂರ್ಣಗೊಳ್ಳುತ್ತದೆ. ಈ ಕಾರಣಕ್ಕೆ ಮೇ ಕೊನೆಯಲ್ಲಿ ಸಂಸತ್ ಭವನ ಲೋಕಾರ್ಪಣೆಯಾಗುವ ಸಾಧ್ಯತೆಯಿದೆ.
Advertisement
ಸುಮಾರು 1,200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ 1,224 ಸಂಸದರು ಕುಳಿತುಕೊಳ್ಳಲು ಅವಕಾಶವಿದೆ. ಇದನ್ನೂ ಓದಿ: ಸಚಿನ್ ಪೈಲೆಟ್‌ಗೆ ರಾಹುಲ್ ಆರಂಭದಲ್ಲಿ ಮಾತು ಕೊಟ್ಟಿದ್ದರು, ನಂತರ ಏನಾಯ್ತು? – ವೇಣುಗೋಪಾಲ್‌ಗೆ ಉಲ್ಟಾ ಹೊಡೆದ ಡಿಕೆಶಿ
Advertisement
Advertisement
ಹೊಸ ಸಂಸತ್ತು ಜ್ಞಾನ ದ್ವಾರ, ಶಕ್ತಿ ದ್ವಾರ ಮತ್ತು ಕರ್ಮ ದ್ವಾರ ಹೆಸರಿನ ಮೂರು ದ್ವಾರಗಳನ್ನು ಹೊಂದಿದೆ. ಸಂಸದರು, ವಿಐಪಿಗಳು ಮತ್ತು ಸಂದರ್ಶಕರಿಗೆ ಪ್ರತ್ಯೇಕ ಪ್ರವೇಶವನ್ನು ಹೊಂದಿದೆ.
ಡಿಸೆಂಬರ್ 2020 ರಲ್ಲಿ ಹೊಸ ಸಂಸತ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನಡೆಸಿದ್ದರು. ಸರ್ಕಾರ ಕಳೆದ ವರ್ಷದ ನವೆಂಬರ್ ಒಳಗಡೆ ಕಾಮಗಾರಿ ಮುಕ್ತಾಯಗೊಳಿಸುವ ಗುರಿಯನ್ನು ನಿಗದಿ ಪಡಿಸಿತ್ತು. ಆದರೆ ಕೋವಿಡ್ ಮತ್ತು ಇತರೆ ಕೆಲ ಸಮಸ್ಯೆಗಳಿಂದಾಗಿ ಡೆಡ್‌ಲೈನ್ ವಿಸ್ತರಣೆಯಾಗಿ ಈಗ ಉದ್ಘಾಟನೆಯ ಹಂತಕ್ಕೆ ಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಒಂಬತ್ತು ವರ್ಷಗಳ ಹಿಂದೆ ಮೇ 26, 2014 ರಂದು ಪ್ರಮಾಣ ವಚನ ಸ್ವೀಕರಿಸಿದ್ದರು. ಮೋದಿ ಸರ್ಕಾರಕ್ಕೆ 9 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಬಿಜೆಪಿ ಸಿದ್ಧತೆ ನಡೆಸಿದೆ.
ಸೆಂಟ್ರಲ್ ವಿಸ್ಟಾ ಯೋಜನೆ ಭಾಗವಾಗಿ ಹೊಸ ಸಂಸತ್ ಭವನವನ್ನು ನಿರ್ಮಿಸಲಾಗುತ್ತಿದೆ. ತ್ರಿಕೋನಾಕಾರದ ಸಂಸತ್ ಭವನ ಇದಾಗಿದೆ. ಕಟ್ಟಡ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಕಟ್ಟಡದ ಒಳಾಂಗಣ ವಿನ್ಯಾಸದ ಕೆಲಸಗಳು ನಡೆಯುತ್ತಿವೆ.
2020ರಲ್ಲಿ ಟಾಟಾ ಪ್ರಾಜೆಕ್ಟ್ಸ್‌ಗೆ ನೂತನ ಸಂಸತ್ ಭವನ ನಿರ್ಮಾಣದ ಹೊಣೆ ವಹಿಸಲಾಗಿತ್ತು. ಆ ಸಂದರ್ಭದಲ್ಲಿ 971 ಕೋಟಿ ವೆಚ್ಚಕ್ಕೆ ಅನುಮೋದನೆ ದೊರಕಿತ್ತು. ನಂತರ ಅದರ ಕಚ್ಚಾ ಸಾಮಾಗ್ರಿ ದರ ಹೆಚ್ಚಳದಿಂದಾಗಿ ಯೋಜನಾ ವೆಚ್ಚ ಅಂದಾಜು 1,200 ಕೋಟಿ ರೂ.ಗೆ ಏರಿಸಲಾಗಿತ್ತು.
ನೂತನ ಸಂಸತ್ ಭವನದಲ್ಲಿ ಹಲವು ಆಕರ್ಷಣೆಗಳಿವೆ. ಅದರಂತೆ ಭವನದ ಮೇಲೆ ರಾಷ್ಟ್ರೀಯ ಲಾಂಛನವನ್ನು ಇರಿಸಲಾಗಿದೆ. ಈ ಲಾಂಛನದ ಪ್ರತಿಮೆಯನ್ನು ಕಂಚಿನಿಂದ ಮಾಡಲಾಗಿದೆ. ಅದರ ತೂಕ ಸುಮಾರು 9,500 ಕೆ.ಜಿ ಇದ್ದು, 6.5 ಮೀಟರ್ ಎತ್ತರವಿದೆ.