– ಸಂವಿಧಾನ ಪ್ರತಿ ಹಿಡಿದು ಪ್ರತಿಭಟನೆ, ಪ್ರತಿಪಕ್ಷಗಳ ಒಗ್ಗಟ್ಟು ಪ್ರದರ್ಶನ
ನವದೆಹಲಿ: ಚುನಾವಣೆ ಬಳಿಕ ಮೊದಲ ಲೋಕಸಭೆ ಅಧಿವೇಶನ ಶುರುವಾಗಿದೆ. ಕಲಾಪದ ಮೊದಲ ದಿನವೇ ʻಸಂವಿಧಾನ ಬಚಾವ್ʼ ಘೋಷವಾಕ್ಯದೊಂದಿಗೆ ಪ್ರತಿಭಟನೆ ನಡೆಸಿದೆ. ಸಂವಿಧಾನ ಪ್ರತಿ ಹಿಡಿದು ವಿರೋಧ ಪಕ್ಷಗಳು (INDIA Bloc) ಒಗ್ಗಟ್ಟು ಪ್ರದರ್ಶಿಸಿವೆ. ಕಲಾಪ ಆರಂಭಕ್ಕೂ ಮುನ್ನ ಹೊರಗಡೆ ಸಂವಿಧಾನದ ಪ್ರತಿ ಹಿಡಿದು ಘೋಷಣೆ ಕೂಗಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (MallikarjunKharge ), ಸೋನಿಯಾ ಗಾಂಧಿ ಸೇರಿದಂತೆ ಎಲ್ಲ ವಿಪಕ್ಷ ನಾಯಕರು ಇದರಲ್ಲಿ ಭಾಗಿಯಾಗಿದ್ದರು. ಪ್ರತಿಭಟನೆ ಬೆನ್ನಲೆ ಈ ಬಗ್ಗೆ ಟ್ವಿಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ಹೆಚ್‍ಡಿಕೆ, ಜೋಶಿ, ಸೋಮಣ್ಣ, ಶೋಭಾ
Advertisement
प्रधानमंत्री मोदी जी ने अपने customary शब्द आज ज़रुरत से ज़्यादा बोले। इसे कहते हैं, रस्सी जल गई, बल नहीं गया।
देश को आशा थी कि मोदी जी महत्वपूर्ण मुद्दों पर कुछ बोलेंगे।
🔹NEET व अन्य भर्ती परीक्षाओं में पेपर लीक के बारे में युवाओं के प्रति कुछ सहानुभूति दिखाएंगे, पर… pic.twitter.com/AoPRqoURG5
— Mallikarjun Kharge (@kharge) June 24, 2024
Advertisement
ನೀಟ್, ನೆಟ್ ಪರೀಕ್ಷೆಯಲ್ಲಿ (NEET – NET Exams) ಅಕ್ರವಾಗಿದೆ, ಪಶ್ಚಿಮ ಬಂಗಾಳದಲ್ಲಿ ರೈಲು ದುರಂತವಾಗಿದೆ, ಕಳೆದ 13 ತಿಂಗಳಿನಿಂದ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದೆ ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ, ಬೆಲೆ ಏರಿಕೆ ಎಕ್ಸಿಟ್ ಪೋಲ್ ಷೇರು ಮಾರುಕಟ್ಟೆ ಹಗರಣ ನಡೆದಿದೆ. ಈ ಬಗ್ಗೆ ಮೋದಿ ಅವರು ಮಾತನಾಡಬಹುದು ಎಂದು ದೇಶದ ಜನರು ನಿರೀಕ್ಷಿಸಿದ್ದರು. ನೈತಿನ, ರಾಜಕೀಯ ಸೋಲಿನ ನಂತರವೂ ಮೋದಿ ಅಹಂಕಾರ ಹಾಗೇ ಉಳಿದಿದೆ. 50 ವರ್ಷಗಳ ಹಿಂದಿನ ತುರ್ತು ಪರಿಸ್ಥಿತಿ ಬಗ್ಗೆ ನೆನಪಿಸುತ್ತಾರೆ. ಆದರೆ ಕಳೆದ 10 ವರ್ಷದ ಘೋಷಿತ ತುರ್ತು ಪರಿಸ್ಥಿತಿ ಸಂದರ್ಭದ ಬಗ್ಗೆ ಮಾತನಾಡುವುದಿಲ್ಲ ಜನರು ಮೋದಿ ವಿರುದ್ಧ ಜನಾದೇಶ ನೀಡಿದ್ದಾರೆ ನಾವು ಪ್ರಜಾಪ್ರಭುತ್ವವನ್ನು ರಕ್ಷಿಸುತ್ತೇವೆ ಎಂದು ಗುಡುಗಿದ್ದಾರೆ.
Advertisement
Advertisement
ನಾಳೆಯೂ (ಜೂನ್ 25) ಪ್ರಮಾಣ ವಚನ ಕಾರ್ಯಕ್ರಮ ಮುಂದುವರಿಯಲಿದೆ. ಜೂನ್ 26 ರಂದು ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದೆ. ಜೂನ್ 27 ರಂದು ರಾಷ್ಟ್ರಪತಿಗಳು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ್ದು ಬಳಿಕ ಇದರ ಮೇಲೆ ಚರ್ಚೆ ನಡೆಯಲಿದೆ. ಇದನ್ನೂ ಓದಿ: ಪರಿಷತ್ ನೂತನ ಸದಸ್ಯರಾಗಿ 17 ಜನ ಪ್ರಮಾಣ ವಚನ ಸ್ವೀಕಾರ – ಸಿಎಂ ಕಾಲಿಗೆ ನಮಸ್ಕರಿಸಿದ ಸಿ.ಟಿ ರವಿ
ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಲೋಕಸಭೆಗೆ ಬಂದ ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಹಂತ ಹಂತವಾಗಿ ಎಲ್ಲ ಸಂಸದರಿಗೆ ಪ್ರಮಾಣ ವಚನ ಬೊಧಿಸುತ್ತಿದ್ದಾರೆ. 280 ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದು, ನಾಳೆ 264 ಹೊಸದಾಗಿ ಚುನಾಯಿತರಾದ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೊದಲು ಪ್ರಧಾನಿ ನರೇಂದ್ರ ಮೋದಿ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮೋದಿ ಬಳಿಕ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಖಟ್ಟರ್, ಮನೋಹರ್ ಲಾಲ್ ಖಟ್ಟರ್, ಪಿಯೋಷ್ ಗೊಯೇಲ್, ಧರ್ಮೇಂದ್ರ ಪ್ರಧಾನ್ ಸೇರಿ ಎಲ್ಲ ಕೇಂದ್ರ ಸಚಿವರು ಪ್ರಮಾಣವಚನ ಸ್ವೀಕರಿಸಿದರು. ಇದನ್ನೂ ಓದಿ: Parliament Session: ಸಂಸದರಾಗಿ ಮೋದಿ, ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ
ಪ್ರಮಾಣವಚನ ಸ್ವೀಕರಿಸಿದ ರಾಜ್ಯ ಸಂಸದರು:
ಕರ್ನಾಟಕದಿಂದ ಆಯ್ಕೆಯಾಗಿರುವ ಎಲ್ಲ ಸಂಸದರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಮೊದಲು ಕೇಂದ್ರ ಸಚಿವರಾಗಿರುವ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಪ್ರಮಾಣ ಸ್ವೀಕರಿಸಿದರು. ಬಳಿಕ ಎಲ್ಲ ಸಂಸದರು ಕನ್ನಡದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರಕ್ಕೂ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ ವಿ.ಸೋಮಣ್ಣ ಸಂಸತ್‌ನ ಮೆಟ್ಟಿಲುಗಳಿಗೆ ನಮಸ್ಕರಿಸಿದರು.