ದುಬೈ: ಸಿಕ್ಸ್ ಸಿಡಿಸಿ ದಾಖಲೆ ಬರೆದಿದ್ದ ಅಭಿಷೇಕ್ ಶರ್ಮಾ (Abhishek Sharma) ಈಗ ಏಷ್ಯಾಕಪ್ (Asia Cup) ವಿರಾಟ್ ಕೊಹ್ಲಿ, ಮೊಹಮ್ಮದ್ ರಿಜ್ವಾನ್ ದಾಖಲೆ ಮುರಿದು ಇತಿಹಾಸ ಸೃಷ್ಟಿಸಿದ್ದಾರೆ.
ಏಷ್ಯಾಕಪ್ ಒಂದು ಆವೃತ್ತಿಯಲ್ಲಿ 300 ರನ್ ಗಡಿ ದಾಟಿದ ಮೊದಲ ಬ್ಯಾಟರ್ ಅಲ್ಲದೇ ಅತಿ ಹೆಚ್ಚು ರನ್ ಸಿಡಿಸಿದ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಸದ್ಯ ಈಗ 309 ರನ್ ಸಿಡಿಸುವ ಮೂಲಕ ಅತಿ ಹೆಚ್ಚು ರನ್ ಸಿಡಿಸಿದ ಆಟಗಾರನಾಗಿ ಹೊರಹೊಮ್ಮಿದ್ದಾರೆ.
Yet another Abhishek Sharma blitz on show tonight⚡
Watch #INDvSL LIVE NOW on the Sony Sports Network TV channels & Sony LIV.#SonySportsNetwork #DPWorldAsiaCup2025 pic.twitter.com/qyj6Y52zKu
— Sony Sports Network (@SonySportsNetwk) September 26, 2025
ಅತಿಹೆಚ್ಚು ರನ್ ಹೊಡೆದ ಆಟಗಾರರ ಪೈಕಿ ಮೊದಲ ಸ್ಥಾನದಲ್ಲಿ ಇಲ್ಲಿಯವರೆಗೆ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಇದ್ದರೆ ಎರಡನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದರು. 2022 ರ ಆವೃತ್ತಿಯಲ್ಲಿ ರಿಜ್ವಾನ್ 281 ರನ್ ಹೊಡೆದರೆ ಕೊಹ್ಲಿ 276 ರನ್ ಹೊಡೆದಿದ್ದರು. ಇದನ್ನೂ ಓದಿ: ಸಿಕ್ಸ್ ಮೇಲೆ ಸಿಕ್ಸ್ – ಏಷ್ಯಾಕಪ್‌ನಲ್ಲಿ ದಾಖಲೆ ಬರೆದ ಅಭಿಷೇಕ್ ಶರ್ಮಾ
ಶ್ರೀಲಂಕಾ ವಿರುದ್ಧದ ಇಂದಿನ ಪಂದ್ಯದಲ್ಲಿ ಅಭಿಷೇಕ್ ಶರ್ಮಾ 31 ಎಸೆತಗಳಲ್ಲಿ 61 ರನ್(8 ಬೌಂಡರಿ, 2 ಸಿಕ್ಸ್) ಸಿಡಿಸಿ ಔಟಾದರು. ತಿಲಕ್ ವರ್ಮಾ ಔಟಾಗದೇ 49 ರನ್(34 ಎಸೆತ, 4 ಬೌಂಡರಿ, 1 ಸಿಕ್ಸ್), ಸಂಜು ಸ್ಯಾಮ್ಸನ್ 39 ರನ್(23 ಎಸೆತ, 1 ಬೌಂಡರಿ, 3 ಸಿಕ್ಸ್), ಅಕ್ಷರ್ ಪಟೇಲ್ 21 ರನ್(15 ಎಸೆತ, 1 ಬೌಂಡರಿ, 1 ಸಿಕ್ಸ್) ನೆರವಿನಿಂದ ಭಾರತ 202 ರನ್ ಹೊಡೆದಿದೆ.