CinemaKarnatakaLatestMain PostSandalwood

ಭಾರತೀಯ ಸಿನಿಮಾ ಲೋಕದಲ್ಲಿ ಹೊಸ ದಾಖಲೆ: 21 ಸಿಟಿಗಳಲ್ಲಿ ಚಾರ್ಲಿ-777 ಪ್ರೀಮಿಯರ್

ನ್ನಡ ಸಿನಿಮಾ ಅಂಗಳದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ನಾಯಿ ಮತ್ತು ಮನುಷ್ಯನ ಬಾಂಧವ್ಯ ಕಥೆಯ ‘ಚಾರ್ಲಿ 777’ ಸಿನಿಮಾ ಇದೇ ತಿಂಗಳ‌ 10ರಂದು ವರ್ಲ್ಡ್ ವೈಡ್ ರಿಲೀಸ್ ಆಗುತ್ತಿದ್ದು, ಈ ಸಿನಿಮಾಗಾಗಿ ರಕ್ಷಿತ್ ಅಭಿಮಾನಿಗಳು ಕಾಯುವಂತಾಗಿದೆ. ಇದನ್ನೂ ಓದಿ :  ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್

ಜೂನ್ 10ರಂದು ಸಿನಿಮಾ ತೆರೆಗೆ ಬರ್ತಿರೋದ್ರಿಂದ ಚಿತ್ರತಂಡ ಭರ್ಜರಿ ಪ್ರಮೋಷನ್ ಮಾಡ್ತಿದೆ. ರಾಜ್ಯ ರಾಜ್ಯ ಸುತ್ತಿ ಪ್ರಚಾರದ ಕಹಳೆ ಮೊಳಗಿಸಿರುವ ಚಾರ್ಲಿ ಅಂಗಳದಿಂದ ಮಸ್ತ್ ಖಬರ್ ವೊಂದು ರಿವೀಲ್ ಆಗ್ತಿದೆ. ಬರೋಬ್ಬರಿ‌ 21 ಸಿಟಿಗಳಲ್ಲಿ ಚಾರ್ಲಿ ಸಿನಿಮಾ ಪ್ರೀಮಿಯರ್ ಆಗ್ತಿದೆ. ಹೈದ್ರಾಬಾದ್, ಚೆನ್ನೈ, ದೆಹಲಿ, ಮಧುರೈ ಸೇರಿದಂತೆ ಬರೋಬ್ಬರಿ 21 ಸಿಟಿಗಳಲ್ಲಿ ಪ್ರೀಮಿಯರ್ ಆಗುತ್ತಿದೆ. ಇದನ್ನೂ ಓದಿ : ಪತ್ನಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗೆದ್ದ ಹಾಲಿವುಡ್ ಸ್ಟಾರ್ ನಟ ಜಾನಿ ಡೆಪ್ : ನೂರಾರು ಕೋಟಿ ಪರಿಹಾರ

21 ಸಿಟಿಗಳಲ್ಲಿ ಪ್ರೀಮಿಯರ್ ಆಗ್ತಿರುವ ಚಾರ್ಲಿ-777 ಸಿನಿಮಾ ಹೈದ್ರಾಬಾದ್, ವಾರಾಣಾಸಿ 7ರಂದು, ದೆಹಲಿಯಲ್ಲಿ 2ರಂದು, ಅಮೃತಸರ 2ರಂದು, ಮಧುರೈ, ಪಂಜಿಮ್, ಬರೋಡಾ, ವೈಜಾಕ್ ನಲ್ಲಿ 8ರಂದು, ಕೊಯ್ಯಮತ್ತೂರು, ಸೊಲ್ಲಾಪುರ, ತಿರುವನಂತಪುರ, ಅಹಮದಾಬಾದ್ ನಲ್ಲಿ 7ರಂದು, ಪುಣೆ, ಮುಂಬೈ, ಕಿಚ್ಚಿನ್, ಲಖನೌ, ಚೆನ್ನೈ, ಜೈಪುರ, ಕೋಲ್ಕತ್ 6ರಂದು, ನಾಗಾಪುರ, ಸೂರತ್ ನಲ್ಲಿ 9ರಂದು ಪ್ರೀಮಿಯರ್ ಆಗುತ್ತಿದ್ದು, ಈಗಾಗ್ಲೇ ಆಲ್ ಮೋಸ್ಟ್ ಆಲ್ ಟಿಕೆಟ್ ಸೋಲ್ಟ್ ಔಟ್ ಆಗಿವೆ.

ಪರಂವಃ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಚಾರ್ಲಿ 777 ಸಿನಿಮಾದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಧರ್ಮ ಪಾತ್ರದಲ್ಲಿ ಮಿಂಚಿದ್ದು, ರಕ್ಷಿತ್ ಗೆ ಜೋಡಿಯಾಗಿ ಸಂಗೀತ ಶೃಂಗೇರಿ ನಟಿಸಿದ್ದಾರೆ. ನಟನೆ ಜೊತೆಗೆ ರಕ್ಷಿತ್ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.  ರಕ್ಷಿತ್ ಜತೆಗೆ ರಾಜ್‌ ಬಿ. ಶೆಟ್ಟಿ, ದಾನಿಶ್‌ ಸೇಠ್‌, ತಮಿಳಿನ ಬಾಬಿ ಸಿಂಹ ಸೇರಿ ಇನ್ನೂ ಅನೇಕರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಿರಣ್‌ ರಾಜ್‌ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು,  ಇದು ಇವರ ಚೊಚ್ಚಲ ಸಿನಿಮಾವಾಗಿದೆ.

Leave a Reply

Your email address will not be published.

Back to top button