ಬೆಂಗಳೂರು: ವಾಹನ ಸವಾರರು ಇನ್ಮುಂದೆ ಸಂಚಾರ ನಿಯಮವನ್ನು ಬ್ರೇಕ್ ಮಾಡಿದರೆ ಭಾರೀ ದಂಡ ಬೀಳುತ್ತದೆ. ಯಾಕಂದರೆ ಸೆಪ್ಟೆಂಬರ್ 1ರಿಂದ ಹೊಸ ನಿಯಮ ಜಾರಿಗೆ ಬರಲಿದೆ.
2019ರ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯ ಆಯ್ದ 63 ನಿಯಮಗಳು ಸೆಪ್ಟೆಂಬರ್ 1ರಿಂದ ಜಾರಿಯಾಗಲಿದೆ. ಹೊಸ ಕಾನೂನಿನ ಪ್ರಕಾರ, ಸಂಚಾರ ನಿಯಮ ಉಲ್ಲಂಘಿಸಿದರೆ ದಂಡ, ಶಿಕ್ಷೆ ವಿಧಿಸಲು ಅವಕಾಶ ಇದೆ. ಇದರಲ್ಲಿ ಮುಖ್ಯವಾಗಿ ದಂಡದ ಜೊತೆಗೆ ಪರವಾನಗಿ, ನೋಂದಣಿ, ರಾಷ್ಟ್ರೀಯ ಸಾರಿಗೆ ನೀತಿಗೆ ಸಂಬಂಧಿಸಿದ ನಿಯಮಗಳು ಮಾತ್ರ ಇರುತ್ತದೆ.
Advertisement
Advertisement
ಆದ್ದರಿಂದ ವಾಹನ ದಾಖಲೆ ಇಲ್ಲದಿದ್ದರೆ ಸರಿ ಮಾಡಿಸಿ. ಡಿಎಲ್ ಮತ್ತು ಇನ್ಶೂರೆನ್ಸ್ ಇಲ್ಲ ಅಂದರೆ ಮಾಡಿಸಿಕೊಳ್ಳಿ. ಸೆಪ್ಟೆಂಬರ್ 1ರಿಂದ ರೂಲ್ಸ್ ಬ್ರೇಕ್ ಮಾಡಿದರೆ ದುಬಾರಿ ದಂಡ ಬೀಳುತ್ತದೆ.
Advertisement
ರಸ್ತೆ ಅಪಘಾತವನ್ನು ಕಡಿಮೆ ಮಾಡುವ ಉದ್ದೇಶದಿಂದ ಸಂಚಾರ ನಿಯಮ ಉಲ್ಲಂಘನೆಗಳಿಗೆ ಭಾರೀ ದಂಡ ವಿಧಿಸುವಂತಹ ಮೋಟಾರು ವಾಹನ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಸಮ್ಮತಿ ಸಿಕ್ಕಿತ್ತು. 2017ರಲ್ಲೇ ಪರಿಚಯವಾಗಿದ್ದ ಈ ಮಸೂದೆಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯಸಭೆಯಲ್ಲಿ ಮತ್ತೆ ಮಂಡಿಸಿದ್ದರು. ಈ ಮಸೂದೆ ಪರ 108 ಹಾಗೂ ವಿರುದ್ಧ 13 ಮತಗಳು ಬಂದಿತ್ತು.
Advertisement
2017ರಲ್ಲೇ ಪರಿಚಯಿಸಲಾಗಿದ್ದ ಈ ಮಸೂದೆ ಲೋಕಸಭೆಯಲ್ಲಿ ಜುಲೈ 23ರಂದೇ ಅಂಗೀಕಾರವಾಗಿತ್ತು. ಆದರೆ, ರಾಜ್ಯಸಭೆಯಲ್ಲಿ ಈ ಮಸೂದೆ ಅಂಗೀಕಾರಗೊಳ್ಳದ ಕಾರಣ 16ನೇ ಲೋಕಸಭೆಯಲ್ಲಿ ಈ ಮಸೂದೆ ಮೂಲೆ ಸೇರಿತ್ತು.
ಮೋಟಾರು ವಾಹನ ಅಪಘಾತಕ್ಕೆ ಸಂಬಂಧಿತ ಕೇಸ್‍ಗಳಲ್ಲಿ ಮೃತರಾದವರಿಗೆ 5 ಲಕ್ಷ ಹಾಗೂ ತೀವ್ರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂಪಾಯಿ ಪರಿಹಾರ ಸೇರಿದಂತೆ ಟ್ರಾಫಿಕ್ ಸಂಬಂಧಿತ ಅಪರಾಧಗಳಲ್ಲಿ ಹೆಚ್ಚಿನ ದಂಡ ಜೊತೆಗೆ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುತ್ತದೆ. ಇದರ ಜೊತೆಗೆ ನಾಲ್ಕು ವರ್ಷ ಮೇಲ್ಪಟ್ಟ ಮಕ್ಕಳಿಗೆ ಸೀಟ್ ಬೆಲ್ಟ್ ಕಡ್ಡಾಯ ಮಾಡಿದೆ.