ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರದಿಂದ ಹೊಸ ನಿಯಮ ಜಾರಿಯಾಗಲಿದೆ. ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸವಾರರಿಗೆ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ. 18 ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು, ಮಹಿಳೆಯರು ಓಡಾಡಬಹುದು. ಇಬ್ಬರು ಪುರುಷ ಸವಾರರಿಗೆ ಈ ರೂಲ್ಸ್ ಇದ್ದು, ಕೆಲವು ಬಾರಿ ಹಿಂಬದಿ ಸವಾರರು ದುಷ್ಕೃತ್ಯ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಈ ನಿಯಮ ಜಾರಿಯಾಗಲಿದೆ ಎಂದು ತಿಳಿಸಿದರು.
Advertisement
Advertisement
ಒಂದು ವಾರ ಈ ನಿಯಮ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಯಾಗಲಿದೆ. ಬೇರೆ ರಾಜ್ಯದಲ್ಲೂ ಈ ನಿಯಮ ಜಾರಿಗೆ ಮಾಡಿದ್ದರು. ಆಗ ಎಲ್ಲಾ ಪುರಷ ಸವಾರರಿಗೆ ತಡೆ ಮಾಡಿದ್ದರು. ಇಲ್ಲಿ ಮಹಿಳೆಯರು, ಹಿರಿಯ ನಾಗರಿಕರು, ಮಕ್ಕಳಿಗೆ ರಿಯಾಯಿತಿ ನೀಡಲಾಗಿದೆ ಎಂದರು. ಇದನ್ನೂ ಓದಿ: ಗಣೇಶ ಕೂರಿಸಲು ಅನುಮತಿ ತೆಗೆದುಕೊಳ್ಳಬೇಡಿ: ಪೊಲೀಸರು, ಸರ್ಕಾರಕ್ಕೆ ಮುತಾಲಿಕ್ ಸವಾಲು
Advertisement
Advertisement
ಪ್ರಕರಣ ಪತ್ತೆ ಹಚ್ಚಲಾಗಿದೆ ಯಾರು ಮಾಡಿದ್ದಾರೆ ಗೊತ್ತಾಗಿದೆ. ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಮೂರು ಜನರ ವಿಚಾರಣೆ ನಡೆಸಲಾಗುತ್ತಿದೆ. ಯಾರು ಹೊಡೆದಿದ್ದಾರೆ ಗೊತ್ತಿದೆ ಅವರು ಸಿಗಬೇಕು. ಪ್ರಮುಖ ಆರೋಪಿ ಬಂಧಿಸುವ ಈಗಲೂ ಪ್ರಯತ್ನ ನಡೆಯುತ್ತಿದೆ. ಎನ್‍ಐಎ ಕೇಸ್ ಹಸ್ತಾಂತರದ ಬಗ್ಗೆ ಚರ್ಚೆ ನಡೆಯುತ್ತದೆ. ಆರೋಪಿಗಳ ಹಿಡಿಯುವ ಕೆಲಸ ಬಿಡಲ್ಲ. ಮೈನ್ ಆರೋಪಿಯನ್ನು ಶೀಘ್ರ ಹಿಡಿಯುತ್ತೇವೆ ಎಂದು ಹೇಳಿದರು.