ರಿಯಲ್ ಲೈಫ್ ಜೋಡಿಯಾಗಿದ್ದ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ (Niveditha Gowda) ಮೊದಲ ಬಾರಿಗೆ ಜೊತೆಯಾಗಿ ಅಭಿನಯಿಸಿದ್ದ ಚಿತ್ರಕ್ಕೆ ಇಟ್ಟಿದ್ದ ‘ಕ್ಯಾಂಡಿ ಕ್ರಶ್’ ಟೈಟಲ್ ಇದೀಗ ಬದಲಾಗಿದೆ. ಪುನೀತ್ ಶ್ರೀನಿವಾಸ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಸೈಕೋ ಥ್ರಿಲ್ಲರ್ ಕಥಾಹಂದರ ಹೊಂದಿದ ಚಿತ್ರದ ತಾತ್ಕಾಲಿಕ ಟೈಟಲ್ ಆಗಿದ್ದ ‘ಕ್ಯಾಂಡಿ ಕ್ರಶ್’ (Candy Crush) ಇದೀಗ ಮುದ್ದು ರಾಕ್ಷಸಿ ಎಂದು ಬದಲಾಯಿಸಲಾಗಿದೆ.
View this post on Instagram
ಶ್ರೀಚೌಡೇಶ್ವರಿ ಸಿನಿ ಕಂಬೈನ್ಸ್ ಮೂಲಕ ಮೋಹನ್ ಕುಮಾರ್ ಅವರು ಈ ಚಿತ್ರವನ್ನು ಬಿಗ್ ಬಜೆಟ್‌ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಮೊದಲ ಬಾರಿಗೆ ಒಟ್ಟಿಗೆ ನಟಿಸಿದ್ದಾರೆ. ಇದನ್ನೂ ಓದಿ:Toxic: ಯಶ್ ಚಿತ್ರದಲ್ಲಿ 7.8 ಅಡಿ ಎತ್ತರದ ನಟ ಸುನೀಲ್ ಕುಮಾರ್ ಎಂಟ್ರಿ
ಪುನೀತ್ ಶ್ರೀನಿವಾಸ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಬಹುತೇಕ ಶೂಟಿಂಗ್ ನಡೆಸಲಾಗಿದೆ. ಮುದ್ದುರಾಕ್ಷಸಿ ಒಂದು ವಿಭಿನ್ನ ರೊಮ್ಯಾಂಟಿಕ್ ಲವ್ ಸ್ಟೋರಿ ಜೊತೆಗೆ ಸೈಕೋ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾಗಿದ್ದು, ಚಿತ್ರದ ಈ ಶೀರ್ಷಿಕೆಯೇ ವಿಶೇಷವಾಗಿದೆ. ಮುದ್ದು ರಾಕ್ಷಸಿ ಚಿತ್ರದ ಹಾಡುಗಳಿಗೆ ಎಂ.ಎಸ್.ತ್ಯಾಗರಾಜ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಲ್ಲದೆ ಎ.ಕರುಣಾಕರ್ ಅವರು ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.