ನವದೆಹಲಿ: ಹೊಸ ಮೋಟಾರು ವಾಹನ ಕಾಯ್ದೆ ವಿರೋಧಿಸಿ ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ದೆಹಲಿ ನಿವಾಸದ ಎದುರು ಪ್ರತಿಭಟನೆ ನಡೆಸಿದರು.
ಕೇಂದ್ರ ಸಚಿವರ ನಿವಾಸದ ಮುಂದೆ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸರು ಐವೈಸಿ ಕಾರ್ಯಕರ್ತರನ್ನು ಮನೆಯ ಮುಂದೆ ತಡೆದರು. ಈ ವೇಳೆ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ನಿತಿನ್ ಗಡ್ಕರಿ ಅವರ ವಿರುದ್ಧ ಘೋಷಣೆ ಕೂಗಿದರು. ಅಷ್ಟೇ ಅಲ್ಲದೆ ಕೆಲವರು ಬ್ಯಾರಿಕೇಡ್ ಹಾರಿ ಮನೆಗೆ ನುಗ್ಗಲು ಪ್ರಯತ್ನಿಸಿದರು.
Advertisement
ಪ್ರತಿಭಟನೆ ಕಾವೇರುತ್ತಿದ್ದಂತೆ ಐವೈಸಿ ಕಾರ್ಯಕರ್ತರು ಸ್ಕೂಟರ್ ಒಂದನ್ನು ಎತ್ತಿಕೊಂಡು ನಿತಿನ್ ಗಡ್ಕರಿ ಅವರ ಮನೆಯ ಮುಂದೆ ಎಸೆದರು. ಪೊಲೀಸರು ತಡೆಯಲು ಮುಂದಾದರೂ ಕ್ಯಾರೇ ಎನ್ನಲಿಲ್ಲ. ಕೆಳಗೆ ಬಿದ್ದ ಸ್ಕೂಟರ್ ಸಂಪೂರ್ಣವಾಗಿ ಜಖಂ ಕೊಂಡಿತು. ಈ ವೇಳೆ ಮೋಟಾರ್ ವಾಹನ ಬಿಲ್ ವಾಪಸ್ ಪಡೆದುಯುವಂತೆ ಕೇಂದ್ರ ಸಚಿವರನ್ನು ಒತ್ತಾಯಿಸಿ ಘೋಷಣೆ ಕೂಗಿದರು. ಇದನ್ನೂ ಓದಿ:ಸ್ಲಿಪ್ಪರ್ ಹಾಕಿ ಬೈಕ್ ಓಡಿಸಿದ್ರೆ ಬೀಳುತ್ತೆ ಭಾರೀ ದಂಡ!
Advertisement
#WATCH Delhi: Indian Youth Congress (IYC) holds protest outside the residence of Nitin Gadkari, the Union Minister of Road Transport & Highways, against the amended provisions of the Motor Vehicle Act. pic.twitter.com/OJawhb1OHL
— ANI (@ANI) September 11, 2019
Advertisement
ಇದಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ನಿತಿನ್ ಗಡ್ಕರಿ ಅವರು, ದೇಶದಲ್ಲಿ ಪ್ರತಿ ವರ್ಷ 1.5 ಲಕ್ಷ ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ಇದರಲ್ಲಿ ಶೇ.65 ರಷ್ಟು 18-35 ವಯಸ್ಸಿನವರೇ ಇದ್ದಾರೆ. ಅಷ್ಟೇ ಅಲ್ಲದೆ ಪ್ರತಿ ವರ್ಷ 2 ಲಕ್ಷ ಜನರು ರಸ್ತೆ ಅಪಘಾತಗಳಿಂದ ಅಂಗವಿಕಲರಾಗಿದ್ದಾರೆ ಎಂದು ತಿಳಿಸಿದ್ದರು. ಇದನ್ನೂ ಓದಿ:ಸಂಚಾರ ನಿಯಮ ಉಲ್ಲಂಘಿಸಿ 86,500 ರೂ. ದಂಡ ತೆತ್ತ ಲಾರಿ ಚಾಲಕ
Advertisement
ಯುವಕರನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಲು ಹಾಗೂ ಅಪಘಾತದಿಂದ ಅಂಗವಿಕಲತೆಗೆ ತುತ್ತಾಗುವುದನ್ನು ತಪ್ಪಿಸುವ ಉದ್ದೇಶದಿಂದ ಹೊಸ ಟ್ರಾಫಿಕ್ ದಂಡವನ್ನು ಜಾರಿಗೆ ತರಲಾಗಿದೆ. ದಂಡವನ್ನು ಯಾವ ರೀತಿ ಅಳವಡಿಸಿಕೊಳ್ಳಬೇಕು ಎನ್ನುವುದು ಆಯಾಯಾ ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರವಾಗಿದೆ. ಸಂಗ್ರಹವಾದ ದಂಡದ ಮೊತ್ತವು ರಾಜ್ಯ ಸರ್ಕಾರಕ್ಕೆ ಹೋಗುತ್ತದೆ. ಟ್ರಾಫಿಕ್ ದಂಡ ಏರಿಕೆ ಉದ್ದೇಶ ಜನರ ಜೀವ ರಕ್ಷಣೆಗಾಗಿಯೇ ಹೊರತು ಸರ್ಕಾರಕ್ಕೆ ಆದಾಯ ತರುವುದಲ್ಲ ಎಂದು ಹೇಳಿದ್ದರು.
ಸಂಚಾರ ನಿಯಮ ಉಲ್ಲಂಘಿಸುವ ಚಾಲಕರು, ಸವಾರರಿಗೆ 30 ವರ್ಷಗಳ ಹಿಂದೆ 100 ರೂ. ದಂಡ ವಿಧಿಸಲಾಗುತ್ತಿತ್ತು. ಆಗ 100 ರೂ.ಗೆ ಇದ್ದ ಮೌಲ್ಯವು ಈಗ ಎಷ್ಟಾಗಬಹುದು ನೀವೇ ಯೋಚನೆ ಮಾಡಿ. ಸಂಚಾರ ನಿಮಯವನ್ನು ಸರಿಯಾಗಿ ಜನರು ಪಾಲಿಸಿದರೆ ಯಾವುದೇ ದಂಡ ಪಾವತಿಸುವ ಅಗತ್ಯವಿರಲ್ಲ ಎಂದ್ದರು.
ಟ್ರಾಫಿಕ್ ನಿಯಮ ಉಲ್ಲಂಘನೆಗೆ ವಿಧಿಸುತ್ತಿದ್ದ ದಂಡದ ಮೊತ್ತವು ಹೆಚ್ಚಾದ ಬಳಿಕ ಅನೇಕ ಬದಲಾವಣೆಗಳಾಗಿವೆ. ಅನೇಕರು ಲೈಸನ್ಸ್, ಹೆಲ್ಮೆಟ್ ಪಡೆಯುತ್ತಿದ್ದಾರೆ. ತಮ್ಮ ವಾಹನಗಳ ದಾಖಲೆಗಳನ್ನು ಸರಿ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದರು.