ಹುಬ್ಬಳ್ಳಿ: ಹುಬ್ಬಳ್ಳಿ (Hubballi), ಧಾರವಾಡ (Dharwad) ಹಾಗೂ ಉತ್ತರ ಕರ್ನಾಟಕ ಭಾಗದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲ ಕಲ್ಲಿಸಲು ಹೊಸ ರೈಲು (Train) ಸೇವೆ ಸೋಮವಾರದಿಂದ (ನವೆಂಬರ್ 7) ಆರಂಭವಾಗಲಿದೆ. ಹುಬ್ಬಳ್ಳಿಯಿಂದ ಶಬರಿಮಲೆಗೆ (Sabarimala Temple) ಪ್ರಯಾಣಿಸಲು ರೈಲು ವ್ಯವಸ್ಥೆ ಕಲ್ಪಿಸುವಂತೆ ಅಯ್ಯಪ್ಪ ಸ್ವಾಮಿ ಭಕ್ತರ ಮನವಿಗೆ ಸ್ಪಂದಿಸಿದ್ದು, ಈ ಸೇವೆ ಆರಂಭಿಸಿರುವುದಾಗಿ ಪ್ರಹ್ಲಾದ್ ಜೋಶಿ (Pralhad Joshi) ಅವರು ತಿಳಿಸಿದ್ದಾರೆ.
Advertisement
ಅಯ್ಯಪ್ಪ ಸ್ವಾಮಿ ಭಕ್ತರ (Ayyappa Swamy Devotees) ಕೋರಿಕೆಗೆ ಸ್ಪಂದಿಸಿದ ಪ್ರಹ್ಲಾದ್ ಜೋಶಿ (Pralhad Joshi), ಕೇಂದ್ರ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್ (Ashwini Vaishnaw) ಅವರ ಗಮನಕ್ಕೆ ಈ ವಿಷಯ ತಂದು, ಸೂಕ್ತ ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದ್ದರು. ಪ್ರತಿ ವರ್ಷ ಲಕ್ಷಾಂತರ ಭಕ್ತರು ಉತ್ತರ ಕರ್ನಾಟಕದ ಭಾಗದಿಂದ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲು ತೆರಳುತ್ತಾರೆ. ಇದರಿಂದ ಹುಬ್ಬಳ್ಳಿ-ಧಾರವಾಡ ಅಷ್ಟೇ ಅಲ್ಲದೇ, ಉತ್ತರ ಕರ್ನಾಟಕ ಭಾಗದ ಎಲ್ಲ ಭಕ್ತರಿಗೂ ರೈಲಿನ ಅನುಕೂಲವಾಗಲಿದೆ. ಇದೆಲ್ಲವನ್ನು ಯೋಚಿಸಿ ವಿಜಯಪುರದಿಂದ ಹುಬ್ಬಳ್ಳಿ ಮಾರ್ಗವಾಗಿ ಶಬರಿಮಲೆ ಹೊಸ ರೈಲು (Train) ಸಂಪರ್ಕ ಕಲ್ಪಿಸುವಂತೆ ಜೋಶಿ ರೈಲ್ವೆ ಸಚಿವರಿಗೆ ಕೋರಿದ್ದರು. ಅದರಂತೆ ವಿಜಯಪುರದಿಂದ ಹುಬ್ಬಳ್ಳಿ ಮಾರ್ಗವಾಗಿ ಕೊಟ್ಟಾಯಂ ವರೆಗೆ ರೈಲು ಸೇವೆ ಆರಂಭಿಸುವಂತೆ ಅಶ್ವಿನಿ ವೈಷ್ಣವ್ ಆದೇಶಿಸಿದ್ದಾರೆ. ಇದನ್ನೂ ಓದಿ: ಟೆಕೆಟ್ ದರ ಇಳಿಕೆ – `ಗಂಧದಗುಡಿ’ ಚಿತ್ರ ವೀಕ್ಷಿಸುವ ಪ್ರೇಕ್ಷಕರಿಗೆ ಬಂಪರ್ ಆಫರ್
Advertisement
07385 ಸಂಖ್ಯೆಯ ಸಾಪ್ತಾಹಿಕ ರೈಲು ಸೋಮವಾರ ರಾತ್ರಿ 11 ಗಂಟೆಗೆ ವಿಜಯಪುರದಿಂದ (Vijayapura) ಹೊರಡಲಿದ್ದು, ಬುಧವಾರ ಬೆಳಗಿನ ಜಾವ 2 ಗಂಟೆಗೆ ಕೊಟ್ಟಾಯಂ ತಲುಪಲಿದೆ. ವಿಜಯಪುರ, ಬಸವನ ಬಾಗೇವಾಡಿ, ಬಾಗಲಕೋಟೆ, ಬಾದಾಮಿ, ಹೊಳೆ ಆಲೂರು, ಆಲಮಟ್ಟಿ, ಗದಗ, ಹುಬ್ಬಳ್ಳಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬಿರೂರು, ಅರಸಿಕೇರೆ, ತುಮಕೂರು, ಯಲಹಂಕ, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಇರೋಡ್, ತಿರುಪ್ಪೂರು, ಕೊಯಂಬತ್ತೂರು, ಪಾಲಕ್ಕಾಡ್, ತ್ರಿಶೂರ್ ಹಾಗೂ ಎರ್ನಾಕುಲಂ ಮಾರ್ಗವಾಗಿ ರೈಲು ಕೊಟ್ಟಾಯಂ ತಲುಪಲಿದೆ.