ಬೆಂಗಳೂರು: ಹೊಸ ವರ್ಷ (New Year) ಆಚರಣೆಗೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ 2023ರನ್ನು ಬರಮಾಡಿಕೊಳ್ಳಲು ಸಿಲಿಕಾನ್ ಸಿಟಿ ಭರ್ಜರಿ ಸಿದ್ಧವಾಗಿದೆ. ಆದರೆ ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಚರ್ಚ್ ಸ್ಟ್ರೀಟ್‌ನಲ್ಲಿ (Church Street) ಲವರ್ ಮುಟ್ಟಿದ್ದಕ್ಕೆ ಮಾರಾಮಾರಿ ನಡೆದಿದೆ.
ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಈ ಘಟನೆ ನಡೆದಿದೆ. ಕೆಲ ದುಷ್ಕರ್ಮಿಗಳು ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಲವರ್ ಫುಲ್ ಗರಂ ಆಗಿದ್ದಾನೆ. ನೂಕುನುಗ್ಗಲಿನಲ್ಲಿ ತನ್ನ ಹುಡುಗಿ ಮುಟ್ಟಿದ್ದಕ್ಕೆ ದುಷ್ಕರ್ಮಿಗೆ ಆಕೆಯ ಪ್ರಿಯಕರ ಹೊಡೆದಿದ್ದಾನೆ. ಈ ವೇಳೆ ಹೊಡೆಸಿಕೊಂಡ ದುಷ್ಕರ್ಮಿ ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ಹೊಸ ವರ್ಷವನ್ನು ಯಾವ ದೇಶ ಮೊದಲು ಆಚರಿಸುತ್ತೆ ಗೊತ್ತಾ?
Advertisement
Advertisement
ಚರ್ಚ್ ಸ್ಟ್ರೀಟ್‌ನಲ್ಲಿ ಸಂಭ್ರಮಾಚರಣೆ ಮಿತಿಮೀರುತ್ತಿದೆ. ಸಂಭ್ರಮಾಚರಣೆ ಹೆಸರಿನಲ್ಲಿ ಯುವತಿಯರಿಗೆ ಕೆಲ ದುಷ್ಕರ್ಮಿಗಳು ತೊಂದರೆ ನೀಡುತ್ತಿದ್ದಾರೆ. ಇಷ್ಟೆಲ್ಲ ಆಗುತ್ತಿದ್ದರೂ ಇಲ್ಲಿ ಒಬ್ಬೇ ಒಬ್ಬರು ಪೊಲೀಸ್ ಇಲ್ಲದಿರುವುದು ವಿಪರ್ಯಾಸದ ಸಂಗತಿ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಬಂದ್ – ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ವಾಹನ ಸವಾರರು