ಬೆಂಗಳೂರು: ಹೊಸ ವರ್ಷದ ಸೆಲೆಬ್ರೇಷನ್‌ಗೆ (New Year 2025) ಯುವ ಸಮೂಹ ಕಾತುರದಿಂದ ಕಾಯ್ತಿದ್ದು, ಈಗಾಗಲೆ ಪ್ರಮುಖ ಪಬ್-ಬಾರ್ & ರೆಸ್ಟೋರೆಂಟ್‌ಗಳಲ್ಲಿ ಸೀಟ್ ಬುಕ್ಕಿಂಗ್ ಆಗಿವೆ. ನ್ಯೂ ಇಯರ್ ಹಾಟ್ ಸ್ಪಾಟ್‌ಗಳಾದ ಬ್ರಿಗೇಡ್ ರೋಡ್, ಎಂಜಿ ರೋಡ್, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಪಾರ್ಟಿ ಪ್ರಿಯರಿಗಾಗಿ ಸಿದ್ಧವಾಗುತ್ತಿವೆ.
ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆಯ ಹಾಟ್ ಸ್ಪಾಟ್‌ಗಳಾದ ಬ್ರಿಗೇಡ್ ರೋಡ್, ಎಂ.ಜಿ. ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲದಲ್ಲಿ ಸಿದ್ಧತೆ ನಡೆಯುತ್ತಿದೆ. ಸಿಸಿಟಿವಿ ಹ್ಯಾಂಡಲ್ ಮಾಡಲು ತಾತ್ಕಾಲಿಕ ಕಂಟ್ರೋಲ್ ರೂಂ, ಎಕ್ಸ್ಟ್ರಾ ಲೈಟ್ಸ್, 12 ಐಲ್ಯಾಂಡ್‌ಗಳು, ವಾಚ್ ಟವರ್ಸ್‌ಗಳನ್ನ ಹಾಕುವ ಕೆಲಸ ನಡೀತಿದೆ. ಕುಡಿದು ಟೈಟ್ ಆದವರ ಆರೋಗ್ಯದಲ್ಲಿ ವ್ಯತ್ಯಾಸ ಆದರೆ ಅಂತಹವರನ್ನು ಆಸ್ಪತ್ರೆಗೆ ದಾಖಲಿಸಲು ಸೆಂಟ್ ಜಾನ್ ಆಸ್ಪತ್ರೆಯಲ್ಲಿ ಬೆಡ್ ಬುಕ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆಗೆ ಕರೆದೊಯ್ಯಲು ಅಂಬುಲೆನ್ಸ್‌ಗಳನ್ನ ಮೀಸಲಿರಿಸಲಾಗಿದೆ. ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ರಾಣಿ ಚೆನ್ನಮ್ಮ ಪಡೆ ಕೂಡ ಕಾರ್ಯ ನಿರ್ವಹಿಸಿದ್ದು, ಭದ್ರತೆಗಾಗಿ ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ ಸುತ್ತಮುತ್ತ ಎರಡು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಜನಸಂದಣಿ ಪ್ರದೇಶದಲ್ಲಿ ಡ್ರೋಣ್ ಕ್ಯಾಮೆರಾ, ಮಹಿಳೆಯರಿಗೆ, ವಯೋವೃದ್ಧರಿಗೆ ಪ್ರತ್ಯೇಕ್ ಲೇನ್ ಮಾಡಲಾಗುತ್ತೆ. ಇದನ್ನೂ ಓದಿ: ಹೋಟೆಲ್, ರೆಸಾರ್ಟ್‌ನವರು ನಿಯಮಗಳಿಗೆ ಅನುಸಾರ ಹೊಸ ವರ್ಷಾಚರಣೆ ಮಾಡಿ: ಡಿಕೆಶಿ ವಾರ್ನಿಂಗ್
Advertisement
Advertisement
ಕೋರಮಂಗಲ ಸುತ್ತಮುತ್ತಲೂ ಕೂಡ ಕಳೆದ ಬಾರಿಗಿಂತ ಈ ಬಾರಿ ಕ್ಯಾಮೆರಾ ಅಳವಡಿಕೆಗೆ ಹೆಚ್ಚು ಒತ್ತು ನೀಡಲಾಗಿದೆ. ಈಗಾಗಲೇ ಇರುವ ಕ್ಯಾಮೆರಾಗಳನ್ನ ಬಿಟ್ಟು, 180 ಕ್ಯಾಮೆರಾಗಳನ್ನ ಹೆಚ್ಚುವರಿಯಾಗಿ ಅಳವಡಿಸಲಾಗಿದೆ. ಸಿಸಿಟಿವಿ ಮಾನಿಟರಿಂಗ್‌ಗೆ ಮಿನಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ. ಬೀದಿ ದೀಪಗಳು ಕಡಿಮೆ ಇರುವುದರಿಂದ ಹೆಚ್ಚುವರಿಯಾಗಿ ಲೈಟ್ ಹಾಕಲಾಗ್ತಿದೆ. ಮಹಿಳೆಯರ ಸುರಕ್ಷತೆಗೆ 15 ಸೇಫ್ಟಿ ಐಲ್ಯಾಂಡ್, 15 ವಾಚ್ ಟವರ್ ಸ್ಥಾಪಿಸಲಾಗ್ತಿದೆ. ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ 10 ಬೆಡ್‌ಗಳನ್ನು ಮೀಸಲಿರಿಸಲಾಗಿದೆ. ಮೂರು ಅಂಬುಲೆನ್ಸ್ ಜೊತೆ ಎರಡು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯವಸ್ಥೆ ಕಲ್ಪಿಸಲಾಗಿದೆ.
500 ಕ್ಕಿಂತ ಹೆಚ್ಚು ಹೋಂಗಾರ್ಡ್, 700 ಪೊಲೀಸ್ ಸಿಬ್ಬಂದಿ, ಅಧಿಕಾರಿಗಳನ್ನ ಭದ್ರತೆಗೆ ನಿಯೋಜಿಸಲಾಗಿದೆ.
Advertisement
Advertisement
ನಿಯಮಗಳಿಗೆ ಅನುಸಾರ ಹೊಸ ವರ್ಷಾಚರಣೆ ಮಾಡಿ
ಬೆಂಗಳೂರು ಉಸ್ತುವಾರಿ ಸಚಿವ ಡಿಸಿಎಂ ಡಿಕೆ ಶಿವಕುಮಾರ್, ನಿಯಮಗಳಿಗೆ ಒಳಪಟ್ಟು ಹೊಸ ವರ್ಷಾಚರಣೆ ಮಾಡುವಂತೆ ಆಯೋಜಕರಿಗೆ ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ರೂಪದ ಮನವಿ ಮಾಡಿಕೊಂಡಿದ್ದಾರೆ. ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆ ಏಳು ದಿನಗಳ ಶೋಕಾಚರಣೆ ಘೋಷಣೆ ಮಾಡಿದ್ದೇವೆ. ಇದು ಕೇವಲ ಸರ್ಕಾರದ ಕಾರ್ಯಕ್ರಮಗಳಿಗೆ ಮಾತ್ರ ಅನ್ವಯ ಆಗುತ್ತದೆ. ಖಾಸಗಿ ಕಾರ್ಯಕ್ರಮಗಳನ್ನು ನಿಯಮಗಳಿಗೆ ಅನುಸಾರ ಮಾಡಿಕೊಳ್ಳಿ. ಹೋಟೆಲ್ ರೆಸಾರ್ಟ್‌ನವರು ಸರ್ಕಾರದ ನಿಯಮಗಳಿಗೆ ಅನುಸಾರ ಹೊಸ ವರ್ಷದ ಆಚರಣೆ ಮಾಡಿ. ನಾವು ಬ್ಯುಸಿನೆಸ್ ಮಾಡುವವರಿಗೂ ಅಡ್ಡಿ ಪಡಿಸಲು ಆಗಲ್ಲ. ಬೆಂಗಳೂರಿನಾದ್ಯಂತ ಹತ್ತು ಸಾವಿರ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಇದನ್ನು ಎಚ್ಚರಿಕೆ ಅಂತನಾದ್ರೂ ತಿಳಿದುಕೊಳ್ಳಿ, ಮನವಿ ಅಂತನಾದ್ರೂ ತಿಳಿದುಕೊಳ್ಳಿ ಆದ್ರೆ ನಿಯಮಗಳಿಗೆ ಅನುಸಾರ, ಎಚ್ಚರಿಕೆಯಿಂದ ಹೊಸವರ್ಷದ ಆಚರಣೆ ಮಾಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಅವರು ಏನೇ ಮಾಡಿದ್ರು ನಾನು ರಾಜೀನಾಮೆ ಕೊಡೊಲ್ಲ: ಪ್ರಿಯಾಂಕ್ ಖರ್ಗೆ