ಬೆಂಗಳೂರು: ಹೊಸ ವರ್ಷದ ಅಂಗವಾಗಿ ದರ್ಗಾಗೆ ತೆರಳಿದ್ದ ಮೂವರು ಯುವಕರನ್ನು ಬೆತ್ತಲೆಗೊಳಿಸಿ ಅಮಾನವೀಯವಾಗಿ ಹಲ್ಲೆ ನಡೆಸಿದಂತಹ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು ಗ್ರಾಮಾಂತರ ಹೊಸಕೋಟೆ ಬಳಿಯ ರಾಂಪುರ ಬಳಿ ಈ ಘಟನೆ ನಡೆದಿದ್ದು, ಸಿದ್ದೀಖ್, ಯಾಸಿನ್ ಮತ್ತು ಸಲೀಮ್ ಹಲ್ಲೆಗೆ ಒಳಗಾದ ಯುವಕರಾಗಿದ್ದು, ಇವರು ಕೆ.ಜಿ ಹಳ್ಳಿಯ ಸರಾಪಾಯಿಪಾಳ್ಯದ ನಿವಾಸಿಗಳು ಎಂದು ತಿಳಿದು ಬಂದಿದೆ.
Advertisement
Advertisement
ಮೂವರು ಯುವಕರು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕಳೆದ ಡಿಸೆಂಬರ್ 31ರಂದು ದರ್ಗಾಗೆ ಹೋಗುವ ವೇಳೆ ಅಪರಿಚಿತ ವ್ಯಕ್ತಿಗಳು ಅಡ್ಡಗಟ್ಟಿ ಕ್ರೈಂ ಪೋಲಿಸರು ಎಂದು ಸುಳ್ಳು ಹೇಳಿ ಅವಲಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯ ರಾಂಪುರ ಬಳಿಯ ಮಾವಿನ ತೋಪಿಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಅಲ್ಲಿ ಬೆತ್ತಲೆಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
Advertisement
ಹಲ್ಲೆಗೊಳಗಾದ ಯುವಕರನ್ನು ಅಲ್ಲಿನ ಸ್ಥಳೀಯರು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಂಬಂಧ ಅವಲಹಳ್ಳಿ ಪೋಲಿಸರು ಪ್ರಕರಣ ದಾಖಲು ಮಾಡಿಕೊಂಡು ಹಲ್ಲೆ ನಡೆಸಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv