ಬೆಂಗಳೂರು: ಇನ್ನೂ ಎರಡು ದಿನಗಳು ಕಳೆದರೆ ನಾವೆಲ್ಲರೂ ಹೊಸ ವರ್ಷಕ್ಕೆ ಕಾಲಿಡುತ್ತಿದ್ದೇವೆ ಈಗಾಗಲೇ ನ್ಯೂ ಇಯರ್ ಆಚರಣೆಗೆ ಎಲ್ಲರೂ ಸಿದ್ಧ ಮಾಡಿಕೊಳ್ಳುತ್ತಿದ್ದು, ಮದ್ಯ ಪ್ರಿಯರಿಗೆ ಒಂದು ಗುಡ್ ನ್ಯೂಸ್ ಸಿಗಲಿದೆ.
ಹೊಸ ವರ್ಷಕ್ಕೆ ಈ ಬಾರಿ ಹೋಟೆಲ್ ಮತ್ತು ಬಾರ್ ಆಂಡ್ ರೆಸ್ಟೋರೆಂಟ್ ಗಳಲ್ಲಿ ಮಧ್ಯರಾತ್ರಿ ತನಕ ಎಣ್ಣೆ ಸಿಗಲಿದೆ. ಮಧ್ಯರಾತ್ರಿ 2 ಗಂಟೆವರೆಗೆ ಬಾರ್ ತೆರೆಯಲು ಅವಧಿಯನ್ನು ವಿಸ್ತರಿಸಿ ಅನುಮತಿ ನೀಡಿ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಆದೇಶಿಸಿದ್ದಾರೆ.
Advertisement
Advertisement
ಡಿಸೆಂಬರ್ 31ರ ಮಧ್ಯರಾತ್ರಿ 2 ಗಂಟೆ ತನಕ ಬಾರ್ ಗಳು ಓಪನ್ ಆಗಿರಲು ಪೊಲೀಸರಿಂದ ಅನುಮತಿ ಪಡೆಯಬೇಕಾಗುತ್ತದೆ. ಸಿಎಲ್2 ಹೊರತು ಪಡಿಸಿ ಉಳಿದೆಲ್ಲಾ ಬಾರ್, ರಿಕ್ರಿಯೇಷನ್ ಕ್ಲಬ್ ಗಳು ಮತ್ತು ರೆಸ್ಟೋರೆಂಟ್‍ಗಳು ಮೊದಲೇ ಅನುಮತಿ ಪಡೆಯಬೇಕೆಂದು ನಿಬಂಧನೆ ವಿಧಿಸಲಾಗಿದೆ.
Advertisement
ನ್ಯೂ ಇಯರ್ ಸೆಲೆಬ್ರೇಟ್ ಮಾಡುವುದಕ್ಕೆ ಸಿಲಿಕಾನ್ ಸಿಟಿ ಜನ ಸಜ್ಜಾಗಿದ್ದಾರೆ. ಆದರೆ ಸೆಲೆಬ್ರೇಶನ್‍ಗೆ ಯಾಕೋ ವರುಣನ ಭಯ ಶುರುವಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಇನ್ನೆರಡು ದಿನ ಮಳೆ ಬರುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಗಾಳಿಯ ಒತ್ತಡ ಕಡಿಮೆಯಾಗಿರುವುದರಿಂದ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv