ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ರಾತ್ರಿ 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಂಜಿ ರೋಡ್, ಬ್ರಿಗೇಡ್ ರೋಡ್‍ನಿಂದ ಬಸ್ ವ್ಯವಸ್ಥೆ ಮಾಡಲಾಗಿದೆ.
ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆ/ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ರಾತ್ರಿ 11:00 ಗಂಟೆಯ ನಂತರ ತಡರಾತ್ರಿ 02:00 ಗಂಟೆಯವರೆಗೆ ಹೆಚ್ಚುವರಿ ಬಸ್ ಓಡಾಟ ಮಾಡಲಿವೆ. ಪ್ರಯಾಣಿಕರ ಬೇಡಿಕೆಗೆ ಅನುಸಾರ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ನ್ಯೂ ಇಯರ್‌ಗೆ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಡಿ.31ರಂದು ಮೂರು ಮಾರ್ಗದಲ್ಲಿ ಸೇವಾ ಸಮಯ ವಿಸ್ತರಣೆ
ಎಲೆಕ್ಟ್ರಾನಿಕ್ಸ್ ಸಿಟಿ ಪೂರ್ವ, ಜಿಗಣಿ, ಸರ್ಜಾಪುರ, ಕೆಂಗೇರಿ ಕೆಹೆಚ್‍ಬಿ ಕ್ವಾಟರ್ಸ್, ಜನಪ್ರಿಯ ಟೌನ್ ಶಿಪ್, ನೆಲಮಂಗಲ, ಯಲಹಂಕ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿ, ಜೀವನ್ ಭೀಮಾನಗರ ಸೇರಿ ಹಲವೆಡೆ ಬಸ್ ಸಂಚರಿಸಲಿವೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಗೈಡ್‌ಲೈನ್ಸ್ – ಡಿಜೆ, ಲೌಡ್‌ಸ್ಪೀಕರ್ ಬಳಕೆಗೆ ಅನುಮತಿ ಕಡ್ಡಾಯ

