Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Explainer

PublicTV Explainer: ಹೊಸ ವರ್ಷ.. ಹಳೇ ವೈರಸ್‌; ಚೀನಾದಲ್ಲಿ ಮತ್ತೆ ಕೊರೊನಾ ಆರ್ಭಟ – ಭಾರತದ ಕಥೆ ಏನು?

Public TV
Last updated: February 18, 2023 5:01 pm
Public TV
Share
5 Min Read
china covid corona
SHARE

ಹೊಸ ವರ್ಷ ಸಮೀಪಿಸುತ್ತಿದೆ. ನ್ಯೂ ಇಯರ್‌ (New Year 2023) ಸಂಭ್ರಮಾಚರಣೆಗೆ ಎಲ್ಲರೂ ತುದಿಗಾಲಲ್ಲಿ ಕಾಯುತ್ತಿದ್ದಾರೆ. ಆದರೆ ಇದರ ಮಧ್ಯೆ ಹಳೇ ವೈರಸ್‌ ಭೀತಿ ಕೂಡ ಹುಟ್ಟುಕೊಂಡಿದೆ. ಚೀನಾದಲ್ಲಿ ಮತ್ತೆ ಕೋವಿಡ್‌ ಆರ್ಭಟ ಶುರುವಾಗಿದೆ. ಕೊರೊನಾ (Covid-19) ಭೀತಿಯಿಂದ ಹೊರಬಂದಿದ್ದ ವಿಶ್ವದ ಜನತೆಗೆ ಈಗ ಮತ್ತೆ ಆತಂಕ ಶುರುವಾಗಿದೆ. ಹೊಸ ವರ್ಷಕ್ಕೆ ಹಳೆ ವೈರಸ್‌ ಮತ್ತೆ ಕಂಟಕವಾಗಬಹುದೇ? ಹಾಗಾದ್ರೆ ಈಗ ಪರಿಸ್ಥಿತಿ ಹೇಗಿದೆ? ತಿಳಿಯೋಣ ಬನ್ನಿ.

ಚೀನಾದಲ್ಲಿ ಮತ್ತೆ ಕೊರೊನಾ ರಣಾರ್ಭಟ
ಕೊರೊನಾ ವೈರಸ್‌ ತವರು ಚೀನಾ (China). ಮಾರಣಾಂತಿಕ ವೈರಸ್‌ ಮೂಲಕ ವಿಶ್ವಾದ್ಯಂತ ಸಾವು-ನೋವು, ಆರ್ಥಿಕ ಕುಸಿತಕ್ಕೆ ಈ ಡ್ರ್ಯಾಗನ್‌ ರಾಷ್ಟ್ರವೇ ಕಾರಣ. ಆದರೆ ಆ ಜವಾಬ್ದಾರಿಯನ್ನೂ ಈವರೆಗೂ ಚೀನಾ ಹೊತ್ತುಕೊಂಡಿಲ್ಲ. ಕೋವಿಡ್-19, ಡೆಲ್ಟಾ, ಓಮಿಕ್ರಾನ್‌ (Omicron) ಹೀಗೆ ಮೂರು ಅಲೆಗಳ ಮೂಲಕ ಇಡೀ ಜಗತ್ತನ್ನು ವೈರಸ್‌ ಹಿಂಡಿ ಹಿಪ್ಪೆ ಮಾಡಿತ್ತು. ಅದಾದ ಬಳಿಕ ಸ್ವಲ್ಪ ಚೇತರಿಕೆ ಕಾಣಿಸಿಕೊಳ್ಳುವ ಹೊತ್ತಿನಲ್ಲೇ ಈಗ ಮತ್ತೆ 4ನೇ ಅಲೆಯ ಭೀತಿ ಶುರುವಾಗಿದೆ.

Covid Isolation Ward China

ಹೌದು, ಚೀನಾದಲ್ಲಿ ಮತ್ತೆ ಕೊರೊನಾ ಹಾವಳಿ ಜೋರಾಗಿದೆ. ಕೊರೊನಾ ಉಪತಳಿಯು ಬಹು ವೇಗವಾಗಿ ದೇಶಾದ್ಯಂತ ಹರಡುತ್ತಿರುವುದು ವಿಶ್ವಮಟ್ಟದಲ್ಲಿ ಆತಂಕಕ್ಕೆ ಕಾರಣವಾಗಿದೆ. ಚೀನಾದಲ್ಲಿ ಲಕ್ಷಾಂತರ ಜನ ಸೋಂಕಿಗೆ ತುತ್ತಾಗುತ್ತಿದ್ದು, ಆಸ್ಪತ್ರೆಗಳು ಫುಲ್‌ ಆಗಿವೆ. ಸ್ಮಶಾನಗಳಲ್ಲಿ ಹೆಣಗಳ ರಾಶಿ ಕಾಣುತ್ತಿದೆ. ವೈದ್ಯರು ಸಹ ಚಿಕಿತ್ಸೆ ನೀಡುತ್ತಲೇ ಕುಸಿದು ಬೀಳುತ್ತಿದ್ದಾರೆ. ಈ ಭಯಾನಕ ದೃಶ್ಯಗಳು ಜಗತ್ತನ್ನು ಮತ್ತೆ ಕಂಗೆಡಿಸಿದೆ. ಇದನ್ನೂ ಓದಿ: ಆಸ್ಪತ್ರೆಗಳು ಭರ್ತಿ, ಸ್ಮಶಾನದಲ್ಲಿ ಶವಗಳ ರಾಶಿ – ಚೀನಾದಲ್ಲಿ ಕೋವಿಡ್‌ ಸುನಾಮಿಗೆ ಕಾರಣ ಏನು?

ಶೂನ್ಯ ಕೋವಿಡ್‌ ನಿಯಮಕ್ಕೆ ರೊಚ್ಚಿಗೆದ್ದ ಜನ
ಕೊರೊನಾ ನಿಯಂತ್ರಣಕ್ಕೆ ಜಾರಿಗೊಳಿಸಿದ್ದ ʼಶೂನ್ಯ ಕೋವಿಡ್‌ʼ (Zero Covid) ಕಠಿಣ ನಿಯಮಾವಳಿಗಳ ವಿರುದ್ಧ ಚೀನಾದ ಜನತೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು. ಜನರು ಮನೆಯಲ್ಲೇ ಬಂಧಿಯಾಗಿರಬೇಕು, ಪ್ರಮುಖ ಆರ್ಥಿಕ ಕೇಂದ್ರವಾದ ಶಾಂಘೈನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವವರು ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಬೇಕು ಎಂಬುದು ಸೇರಿದಂತೆ ಅನೇಕ ಕಠಿಣ ನಿಯಮಗಳನ್ನು ಚೀನಾದಲ್ಲಿ ಜಾರಿಗೊಳಿಸಲಾಗಿತ್ತು. ಇದರಿಂದ ತತ್ತರಿಸಿಹೋಗಿದ್ದ ಜನತೆ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರು. ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಕಠಿಣ ನಿಯಮಗಳ ಪೈಕಿ ಕೆಲವು ನಿರ್ಬಂಧಗಳಿಗೆ ವಿನಾಯಿತಿ ನೀಡಲಾಯಿತು. ಈಗ ಮತ್ತೆ ದೇಶದಲ್ಲಿ ಕೊರೊನಾ ಆರ್ಭಟ ಮುಂದುವರಿಸಿದೆ.

china covid corona protest 1 1

ಏನಿದು ಬಿಎಫ್‌.7 ಉಪತಳಿ?
ವೈರಸ್‌ಗಳು ರೂಪಾಂತರಗೊಂಡಾಗ, ಉಪ ರೂಪಾಂತರಿಗಳನ್ನು ರಚಿಸುತ್ತವೆ. SARS-CoV-2 ನ ಮುಖ್ಯ ವೈರಸ್ ಮತ್ತು ಉಪ ವೈರಸ್‌ಗಳು ಮೊಳಕೆಯೊಡೆಯುತ್ತವೆ. BF.7, BA.5.2.1.7 ನಂತೆಯೇ ಇರುತ್ತದೆ. ಇದು ಒಮಿಕ್ರಾನ್ ಉಪ ರೂಪಾಂತರಿ BA.5 ನ ಉಪ ವಂಶವಾಗಿದೆ. ಕೊರೊನಾ ವೈರಸ್ ಸೋಂಕಿನ ಓಮಿಕ್ರಾನ್ ರೂಪಾಂತರದ BF.7 ಉಪ ತಳಿಯು BA.5ನ ವಂಶಾವಳಿಯಾಗಿದೆ. ಇದು ಕಡಿಮೆ ಅವಧಿಯಲ್ಲಿ ಹೆಚ್ಚು ಹರಡುವ ರೂಪಾಂತರವಾಗಿದೆ. ಇದು ಮರು-ಸೋಂಕನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೇ ಕೋವಿಡ್-19 ಲಸಿಕೆ ಪಡೆದುಕೊಂಡವರಲ್ಲಿಯೂ ಈ ಸೋಂಕು ಕಾಣಿಸಿಕೊಳ್ಳಬಹುದು.

‘ಸೆಲ್ ಹೋಸ್ಟ್ ಮತ್ತು ಮೈಕ್ರೋಬ್’ ಜರ್ನಲ್‌ನಲ್ಲಿ ಪ್ರಕಟವಾದ ವರದಿ ಪ್ರಕಾರ, BF.7 ರೂಪಾಂತರ ಉಪ-ತಳಿಯು ಮೂಲ ವುಹಾನ್ ವೈರಸ್‌ಗಿಂತ 4.4 ಪಟ್ಟು ಹೆಚ್ಚಿನ ತಟಸ್ಥೀಕರಣ ಪ್ರತಿರೋಧವನ್ನು ಹೊಂದಿದೆ. ಅಂದರೆ ಕೊರೊನಾ ವೈರಸ್ ಲಸಿಕೆಯ ಮೂಲಕ ಜನರು ಪಡೆದುಕೊಂಡಿರುವ ಪ್ರತಿರೋಧಕ ಶಕ್ತಿಗಿಂತಲೂ ಈ ರೋಗಾಣು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಹೀಗಾಗಿಯೇ ಲಸಿಕೆ ಪಡೆದುಕೊಂಡವರು ಸಹಿತ ಈ ಸೋಂಕಿಗೆ ಒಳಗಾಗುವ ಅಪಾಯವಿರುತ್ತದೆ. ಇದನ್ನೂ ಓದಿ: ವೇಗವಾಗಿ ಹರಡುವ ಚೀನಾದ ಕೋವಿಡ್ ಹೊಸ ತಳಿ ಭಾರತದಲ್ಲಿ ಪತ್ತೆ – ರಾಜ್ಯಗಳಲ್ಲಿ ಹೈ ಅಲರ್ಟ್

Covid

ಬಿಎಫ್‌.7 ಉಪ ತಳಿ ಲಕ್ಷಣಗಳೇನು?
ಓಮಿಕ್ರಾನ್ ರೂಪಾಂತರದ BF.7 ಉಪ-ತಳಿ ಲಕ್ಷಣ ಕೊರೊನಾ ವೈರಸ್ ಸೋಂಕು ತಗುಲಿದ ವ್ಯಕ್ತಿಗಳಲ್ಲಿ ಸಾಮಾನ್ಯವಾಗಿ ಜ್ವರ, ಕೆಮ್ಮು, ಶ್ವಾಸಕೋಶ ಸಮಸ್ಯೆಗಳು ಪ್ರಾಥಮಿಕವಾಗಿ ಗೋಚರಿಸುತ್ತವೆ. ಅಂತೆಯೇ ಓಮಿಕ್ರಾನ್ ರೂಪಾಂತರದ ಬಿಎಫ್.7 ಉಪ-ತಳಿಯ ಲಕ್ಷಣಗಳೆಂದರೆ, ಜ್ವರ, ಗಂಟಲು ನೋವು, ಮೂಗು ಸ್ರವಿಸುವಿಕೆ, ಕೆಮ್ಮು, ಉಸಿರಾಟದ ಸಮಸ್ಯೆ.

ಮಧುಮೇಹಿಗಳಿಗೆ ಮಾಸ್ಕ್‌ ಕಡ್ಡಾಯ
‘ಕೋವಿಡ್‌–19 ಕುರಿತು ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ. ಮಧುಮೇಹ, ಅಧಿಕ ರಕ್ತದೊತ್ತಡ ಇರುವವರು (ಕೋಮಾರ್ಬಿಡಿಟಿ), ವಯಸ್ಸಾದವರು ಜನಜಂಗುಳಿ ಇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು’ ಎಂಬುದು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ.ವಿ.ಕೆ.ಪೌಲ್‌ ಸಲಹೆಯಾಗಿದೆ. ಇದನ್ನೂ ಓದಿ: ಭಾರತದಲ್ಲಿ ಲಾಕ್‌ಡೌನ್‌ ಅಗತ್ಯವಿಲ್ಲ : IMA

MASK

ಭಾರತದಲ್ಲಿ ಭೀತಿ.. ಎಚ್ಚರಿಕೆ!
ನೆರೆಯ ಚೀನಾದಲ್ಲಿ ಕೊರೊನಾ ಸೋಂಕು ಭಾರೀ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವುದು ಭಾರತದಲ್ಲಿ ಭೀತಿ ಉಂಟು ಮಾಡಿದೆ. ಕೂಡಲೇ ಎಚ್ಚೆತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೈ ಅಲರ್ಟ್‌ ಆಗಿವೆ. ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳುವ ಕುರಿತು ಸಭೆಗಳನ್ನು ನಡೆಸುತ್ತಿವೆ.

ಭಾರತದಲ್ಲಿ (India Covid) ಲಾಕ್‌ಡೌನ್‌ ಮಾಡುವ ಪರಿಸ್ಥಿತಿಯಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘದ ಡಾ ಗೋಯಲ್ ಹೇಳಿದ್ದಾರೆ. ಶೇ.95 ರಷ್ಟು ಜನರು ಈಗಾಗಲೇ ಲಸಿಕೆಯನ್ನು ಪಡೆದಿರುವ ಕಾರಣ ಲಾಕ್‌ಡೌನ್‌ ಮಾಡುವ ಪರಿಸ್ಥಿತಿ ಇಲ್ಲ. ಭಾರತೀಯರು ಚೀನಾದ ಜನರಿಗಿಂತ ಬಲವಾದ ರೋಗನಿರೋಧಕ ಶಕ್ತಿಯನ್ನು ಹೊಂದಿದ್ದಾರೆ. ಭಾರತವು ಕೋವಿಡ್‌ ಮೂಲಭೂತ ಅಂಶಗಳಾದ ಪರೀಕ್ಷೆ, ಚಿಕಿತ್ಸೆ, ಪತ್ತೆಹಚ್ಚುವಿಕೆಗೆ ಮರಳಬೇಕು ಎಂದು ಅವರು ಹೇಳಿದ್ದಾರೆ.

CORONA 1

ಭಾರತದಲ್ಲಿ ಹೇಗಿದೆ ಕೊರೊನಾ ಪರಿಸ್ಥಿತಿ?
ಕೇಂದ್ರ ಆರೋಗ್ಯ ಸಚಿವಾಲಯದ ಗುರುವಾರದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ 185 ಹೊಸ ಪ್ರಕರಣಗಳು ದೃಢಪಟ್ಟರೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,402 ಕ್ಕೆ ಇಳಿದಿದೆ. ದೇಶದಲ್ಲಿ ಇಲ್ಲಿಯವರೆಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4.46 ಕೋಟಿ (4,46,76,515) ದಾಖಲಾಗಿದೆ. ಒಟ್ಟು 5,30,681 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,41,42,432 ಕ್ಕೆ ಏರಿದೆ. ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ. ಸಚಿವಾಲಯದ ವೆಬ್‌ಸೈಟ್ ಪ್ರಕಾರ, ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇಲ್ಲಿಯವರೆಗೆ ದೇಶದಲ್ಲಿ 220.03 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. ಇದನ್ನೂ ಓದಿ: ಎಸಿ ಇರುವ ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯಕ್ಕೆ ಸಲಹೆ : ಸುಧಾಕರ್‌

ಚೀನಾದ ಕೋವಿಡ್‌ ಹೊಸ ತಳಿ ಭಾರತದಲ್ಲಿ ಪತ್ತೆ
ಚೀನಾದ ಆತಂಕಕ್ಕೆ ಕಾರಣವಾಗಿರುವ ಕೊರೊನಾ ವೈರಸ್ ಓಮಿಕ್ರಾನ್‌ನ ಉಪತಳಿ ಬಿಎಫ್.7 ಸೋಂಕಿನ 4 ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿವೆ. ಭಾರತದಲ್ಲಿ ಒಟ್ಟು ನಾಲ್ಕು ಪ್ರಕರಣಗಳು ವರದಿಯಾಗಿದ್ದು, ಗುಜರಾತ್ ಹಾಗೂ ಒಡಿಶಾ ರಾಜ್ಯಗಳಲ್ಲಿ ತಲಾ ಎರಡು ಪ್ರಕರಣಗಳು ವರದಿಯಾಗಿವೆ. ಬಿಎಫ್.7 ಸೋಂಕಿನ ಮೊದಲ ಪ್ರಕರಣ ಅಕ್ಟೋಬರ್‌ನಲ್ಲಿ ಗುಜರಾತ್‌ನಲ್ಲಿ ಪತ್ತೆಯಾಯಿತು. ಗುಜರಾತ್ ಬಯೋಟೆಕ್ನಾಲಜಿ ಸಂಶೋಧನಾ ಕೇಂದ್ರವು ಈ ಪ್ರಕರಣವನ್ನು ಪತ್ತೆ ಮಾಡಿತು. 2ನೇ ಪ್ರಕರಣವೂ ಗುಜರಾತ್‌ನಲ್ಲಿ ಪತ್ತೆಯಾಗಿದ್ದರೆ, ಉಳಿದೆರಡು ಪ್ರಕರಣಗಳು ಒಡಿಶಾದಲ್ಲಿ ವರದಿಯಾಗಿವೆ. ಯುಎಸ್, ಯುಕೆ, ಯುರೋಪಿಯನ್ ದೇಶಗಳಾದ ಬೆಲ್ಜಿಯಂ, ಜರ್ಮನಿ, ಜಪಾನ್‌, ಸೌತ್‌ ಕೊರಿಯಾ, ಬ್ರೆಜಿಲ್‌, ಫ್ರಾನ್ಸ್ ಹಾಗೂ ಡೆನ್ಮಾರ್ಕ್ ದೇಶಗಳಲ್ಲೂ ಬಿಫ್.7 ಉಪತಳಿ ಪತ್ತೆಯಾಗಿದ್ದು, ಆತಂಕ ಹೆಚ್ಚಿಸಿದೆ.

Happy Newyear 1

ನ್ಯೂ ಇಯರ್‌ಗೆ ನಿರ್ಬಂಧ?
ನ್ಯೂ ಇಯರ್‌ ಸಮೀಪಿಸುತ್ತಿರುವ ಹೊತ್ತಲ್ಲೇ ಕೊರೊನಾ ವೈರಸ್‌ ಭೀತಿ ಮತ್ತೆ ಶುರುವಾಗಿದೆ. ಇದರಿಂದ ನ್ಯೂ ಇಯರ್‌ ಸಂದರ್ಭದಲ್ಲಿ ಹಲವು ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆ ಇದೆ. ಈಗಾಗಲೇ ಮಾಸ್ಕ್‌ ಕಡ್ಡಾಯಕ್ಕೆ ಆದೇಶ ಹೊರಡಿಸುವ ಸಂಬಂಧ ಸುಳಿವು ಸಿಕ್ಕಿದೆ. ನ್ಯೂ ಇಯರ್‌ ವಿಜೃಂಭಣೆ ಆಚರಣೆಗೆ ಬ್ರೇಕ್‌ ಹಾಕುವ ಸಾಧ್ಯತೆ ಇದೆ. ಅನೇಕ ನಿರ್ಬಂಧಗಳೊಂದಿಗೆ ಸಂಭ್ರಮಾಚರಣೆಗೆ ಈ ಬಾರಿ ಅವಕಾಶ ಕಲ್ಪಿಸಬಹುದು.

Live Tv
[brid partner=56869869 player=32851 video=960834 autoplay=true]

TAGGED:BF.7 variantchinaCovid 19indiaNew Year 2023ಕೊರೊನಾ ವೈರಸ್ಚೀನಾಬಿಎಫ್‌.7ಭಾರತಹೊಸ ವರ್ಷ
Share This Article
Facebook Whatsapp Whatsapp Telegram

Cinema Updates

vivek oberoi
ಯಶ್ ‘ರಾಮಾಯಣ’ ಪ್ರಾಜೆಕ್ಟ್‌ನಲ್ಲಿ ವಿವೇಕ್ ಒಬೆರಾಯ್?
8 hours ago
prabhas tripti dimri
‘ಅನಿಮಲ್’ ನಟಿಗೆ ಬಂಪರ್ ಆಫರ್- ಪ್ರಭಾಸ್‌ಗೆ ನಾಯಕಿಯಾದ ತೃಪ್ತಿ ದಿಮ್ರಿ
9 hours ago
karunya ram
ಕಾಮಾಕ್ಯ ದೇಗುಲಕ್ಕೆ ನಟಿ ಕಾರುಣ್ಯ ರಾಮ್ ಭೇಟಿ
10 hours ago
RAGINI 4
‘ಜಾವಾ’ ಸಿನಿಮಾದಲ್ಲಿ ರಾಗಿಣಿ ಬೋಲ್ಡ್ ಅವತಾರ- ಪೋಸ್ಟರ್ ರಿವೀಲ್
12 hours ago

You Might Also Like

SRH
Cricket

ಸನ್‌ ರೈಸರ್ಸ್‌ಗೆ 110 ರನ್‌ಗಳ ಭರ್ಜರಿ ಗೆಲುವು – ಸೋಲಿನ ವಿದಾಯ ಹೇಳಿದ ಕೆಕೆಆರ್‌

Public TV
By Public TV
3 hours ago
Pakistan Rain
Latest

ಪಾಕಿಸ್ತಾನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – 20 ಜನ ಸಾವು, 150ಕ್ಕೂ ಹೆಚ್ಚು ಮಂದಿಗೆ ಗಾಯ!

Public TV
By Public TV
5 hours ago
Shiekh Hasina
Latest

ಬಾಂಗ್ಲಾದೇಶವನ್ನ ಅಮೆರಿಕಕ್ಕೆ ಮಾರಾಟ ಮಾಡಿದ್ದಾರೆ – ಯೂನಸ್ ವಿರುದ್ಧ ಶೇಖ್ ಹಸೀನಾ ಬಾಂಬ್‌

Public TV
By Public TV
5 hours ago
Corona
Bengaluru City

ಮತ್ತೆ ವಕ್ಕರಿಸಿಕೊಂಡ ಕೊರೊನಾ – ಸೋಮವಾರದಿಂದ ಟೆಸ್ಟ್ ಹೆಚ್ಚಳ, ಮುಂಜಾಗ್ರತೆ ವಹಿಸುವಂತೆ ಕರೆ

Public TV
By Public TV
5 hours ago
Heinrich Klaasen
Cricket

ಕ್ಲಾಸೆನ್‌ ಕ್ಲಾಸಿಕ್‌ ಶತಕ – ಸನ್‌ ರೈಸರ್ಸ್‌ ಆರ್ಭಟಕ್ಕೆ ದಾಖಲೆಗಳು ಧೂಳಿಪಟ

Public TV
By Public TV
6 hours ago
Udupi Rain 1
Districts

ಉಡುಪಿಯಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ – ರೆಡ್ ಅಲರ್ಟ್ ಘೋಷಣೆ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?