ಬೆಂಗಳೂರು: ಶಕ್ತಿ ಯೋಜನೆ, ಡೀಸೆಲ್ ದರ ಏರಿಕೆ ಸೇರಿದಂತೆ ಇತ್ಯಾದಿ ಕಾರಣಗಳಿಂದ ನಷ್ಟಕ್ಕೆ ಸಿಲುಕಿರುವ ಸರ್ಕಾರ ಈಗ ಕೊನೆಗೆ ಅನಿವಾರ್ಯವಾಗಿ ಬಸ್ ಟಿಕೆಟ್ ದರವನ್ನು 15% ಏರಿಕೆ ಮಾಡಿದೆ.
ಬಿಎಂಟಿಸಿ ಬಸ್ ದರ ಏರಿಕೆಯಾಗಿ 10 ವರ್ಷ ಆಗಿದ್ದರೆ ಕೆಎಸ್ಆರ್ಟಿಸಿ ದರ ಏರಿಕೆಯಾಗಿ 5 ವರ್ಷವಾಗಿದೆ. ಹೀಗಾಗಿ ಇಂದಿನ ಕ್ಯಾಬಿನೆಟ್ ಸಭೆಯ ಬಳಿಕ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದರ ಏರಿಕೆಯ ಬಗ್ಗೆ ಅಧಿಕೃತ ಘೋಷಣೆ ಮಾಡಿದರು.
Advertisement
Advertisement
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಟಿಕೆಟ್ ದರ ಏರಿಕೆ ಅನಿವಾರ್ಯವಾಗಿ ಮಾಡಲೇಬೇಕಿತ್ತು. 15% ಟಿಕೆಟ್ ದರ ಏರಿಕೆ ಮಾಡಿದ್ದೇವೆ. ಬಿಜೆಪಿ ಅವರು ಸಾವಿರಾರು ಕೋಟಿ ಸಾಲ ಉಳಿಸಿ ಹೋಗಿದ್ದರು. ಸಾರಿಗೆ ಸಂಸ್ಥೆಗಳು ಉಳಿಬೇಕು ಹೀಗಾಗಿ ಟಿಕೆಟ್ ದರ ಏರಿಕೆ ಮಾಡಿದ್ದೇವೆ ಎಂದು ತಿಳಿಸಿದರು.
Advertisement
Advertisement
ನಾಲ್ಕು ನಿಗಮಗಳಿಂದ ಬೇರೆ ಬೇರೆ ದರ ಏರಿಕೆಗೆ ಪ್ರಸ್ತಾವನೆ ಬಂದಿದೆ. ಬಿಎಂಟಿಸಿಯಿಂದ 42%, ಎನ್ಡಬ್ಲ್ಯೂ ಕೆಎಸ್ಆರ್ಟಿಸಿಯಿಂದ 25%, ಕೆಎಸ್ಆರ್ಟಿಸಿ ಮತ್ತು ಕೆಕೆಆರ್ಟಿಸಿಯಿಂದ 28% ದರ ಏರಿಕೆಗೆ ಪ್ರಸ್ತಾವನೆ ಬಂದಿತ್ತು. ಇದನ್ನೂ ಓದಿ: ಮಗುವಿಗೆ ಸೌತೆಕಾಯಿ ತಿನ್ನಿಸಬೇಡ ಅಂದಿದ್ದಕ್ಕೆ ತಂಗಿಯನ್ನೇ ಕೊಂದ ಅಣ್ಣ!
ಈ ಹಿಂದೆ ಯಾವಾಗ ಬಸ್ ದರ ಏರಿಕೆಯಾಗಿತ್ತು?
2020 ಫೆಬ್ರವರಿ 26ರಂದು ಕೆಎಸ್ ಆರ್ ಟಿಸಿ ,ಕೆಕೆಆರ್ ಟಿಸಿ ಹಾಗೂ ಎನ್ ಡಬ್ಲೂ ಕೆಎಸ್ ಆರ್ ಟಿ 12% ಏರಿಕೆಯಾಗಿತ್ತು. 2014 ರಲ್ಲಿ ಬಿಎಂಟಿಸಿ 17% ದರ ಏರಿಕೆ ಮಾಡಿತ್ತು. ನಂತರ ತರ 2015 ರಲ್ಲಿ 2% ಕಡಿಮೆ ಮಾಡಿ 15% ದರ ಕಡಿಮೆ ಮಾಡಲಾಗಿತ್ತು.