ನ್ಯೂಯಾರ್ಕ್: ದಿನೇ ದಿನೇ ನ್ಯೂಯಾರ್ಕ್‍ನಲ್ಲಿ ಹೊಸ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಅಧಿಕಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ನ್ಯೂಯಾರ್ಕ್‍ನ ಗವರ್ನರ್ ಕ್ಯಾಥಿ ಹೊಚಲ್ ತಿಳಿಸಿದ್ದಾರೆ.
ಏಪ್ರಿಲ್ 2020ರಿಂದಿಚೆಗೆ ನ್ಯೂಯಾರ್ಕ್‍ನಲ್ಲಿ ಕೊರೊನಾ ಪ್ರಕರಣಗಳು ಸ್ವಲ್ಪ ಕಡಿಮೆಯಾಗಿತ್ತು. ಆದರೆ ಕಳೆದ ಒಂದು ತಿಂಗಳಿಂದ ಪ್ರತಿನಿತ್ಯ 300 ಹೊಸ ಕೇಸ್‍ಗಳು ದಾಖಲಾಗುತ್ತಿದೆ. ಅಷ್ಟೇ ಅಲ್ಲದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಮೂಲಕ 2022ರ ಜನವರಿ 15ರ ವರೆಗೆ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಇದನ್ನೂ ಓದಿ: ಧಾರವಾಡ ಎಸ್‍ಡಿಎಂ ಕಾಲೇಜಿನಲ್ಲಿ ಮತ್ತೆ ಕೊರೊನಾ ಸ್ಫೋಟ – 77 ಮಂದಿಗೆ ಸೋಂಕು
Advertisement
Advertisement
ದಕ್ಷಿಣ ಆಫ್ರಿಕಾದಲ್ಲಿ ಹೊಸ ರೂಪಾತರಿ ತಳಿಯ ಒಮಿಕ್ರಾನ್ ಅಥವಾ ಬಿ. 1.1.529 ಎಂದು ಹೆಸರಿಟ್ಟಿರುವ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಎಡೆ ಮಾಡಿದೆ. ಈ ತಳಿಯಿಂದ ಒಬ್ಬ ವ್ಯಕ್ತಿಯಿಂದ ಉಳಿದವರಿಗೆ ಸೋಂಕು ಹಬ್ಬುವ ಪ್ರಮಾಣ ಉಳಿದ ರೂಪಾಂತರಿಗಿಂತ ಅಧಿಕವಾಗಿದೆ. ಈಗಾಗಲೇ ದಕ್ಷಿಣ ಆಫ್ರಿಕಾದಲ್ಲಿ 77 ಮಂದಿಯಲ್ಲಿ ಕಾಣಿಸಿಕೊಂಡಿದ್ದು, ವಿಶ್ವಾದ್ಯಂತ 87 ಮಂದಿಯಲ್ಲಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ವಿಶ್ವಕ್ಕೆ ಆತಂಕ ತಂದಿಟ್ಟ ರೂಪಾಂತರಿ ತಳಿ – ಹೈ ಅಲರ್ಟ್ ಘೋಷಣೆ, 87 ಮಂದಿಗೆ ಸೋಂಕು