ವೆಲ್ಲಿಂಗ್ಟನ್: ನ್ಯೂಜಿಲೆಂಡ್‍ನ ಬಲಗೈ ಬ್ಯಾಟ್ಸ್ ಮನ್ ರಾಸ್ ಟೇಲರ್ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬೇಸಿಗೆಯಲ್ಲಿ ತವರು ನೆಲದಲ್ಲಿ ನಡೆಯುವ 3 ಅಂತಾರಾಷ್ಟ್ರೀಯ ಪಂದ್ಯಗಳ ನಂತರ ನಿವೃತ್ತಿ ಪಡೆಯುವುದಾಗಿ ಅವರು ತಿಳಿಸಿದ್ದಾರೆ.
ಶನಿವಾರದಿಂದ ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್ ಸರಣಿ ನಡೆಯಲಿದ್ದು, ಇದಾದ ಬಳಿಕ ಟೆಸ್ಟ್ ಪಂದ್ಯಕ್ಕೆ ವಿದಾಯ ಹೇಳುತ್ತೇನೆ. ಫೆಬ್ರವರಿ ಮತ್ತು ಮಾರ್ಚ್‍ನಲ್ಲಿ ಆಸ್ಟ್ರೇಲಿಯಾ ಮತ್ತು ನೆದಲ್ಯಾರ್ಂಡ್ಸ್ ವಿರುದ್ಧದ ಏಕದಿನ ಪಂದ್ಯಗಳಿವೆ. ಇವು ನನ್ನ ಪಾಲಿನ ಕೊನೆಯ ಪಂದ್ಯಗಳಾಗಿದ್ದು, ಇದಾದ ಬಳಿಕ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಪಂದ್ಯಗಳಿಗೂ ವಿದಾಯ ಹೇಳುತ್ತೇನೆ ಎಂದು 37 ವರ್ಷ ವಯಸ್ಸಿನ ರಾಸ್ ಟೇಲರ್ ಟ್ವಿಟ್ಟರ್ ಲ್ಲಿ ತಿಳಿಸಿದ್ದಾರೆ.
Advertisement
Advertisement
ಟ್ವಿಟ್ಟರ್ ನಲ್ಲಿ ಏನಿದೆ?: ಇದೊಂದು ಅದ್ಭುತ ಪ್ರಯಾಣವಾಗಿದೆ. ನನ್ನ ದೇಶವನ್ನು ಪ್ರತಿನಿಧಿಸಿರುವುದು ನನ್ನ ಜೀವಿತಾವಧಿಯ ಅದೃಷ್ಟ ಎಂದು ಭಾವಿಸುತ್ತೇನೆ. ಕೆಲವರು ಶ್ರೇಷ್ಠರ ಜೊತೆಗೆ ಹಾಗೂ ಅವರ ವಿರುದ್ಧ ಆಡುವ ಸೌಭಾಗ್ಯ ನನಗೆ ದೊರೆತಿದೆ. ದಾರಿಯುದ್ದಕ್ಕೂ ಒಳ್ಳೆಯ ನೆನಪುಗಳು ಹಾಗೂ ಸ್ನೇಹವನ್ನು ಸಂಪಾದಿಸಿದ್ದೇನೆ. ಇದು ನನ್ನ ಸೌಭಾಗ್ಯವಾಗಿದೆ. ಆದರೆ ಎಲ್ಲಾ ಒಳ್ಳೆಯ ವಿಷಯಗಳು ಒಂದೆಲ್ಲಾ ಒಂದು ದಿನ ಕೊನೆಗೊಳ್ಳಬೇಕು. ಹಾಗೇ ನಾನು ನಿವೃತ್ತಿ ಹೊಂದಲು ಇದು ಸರಿಯಾದ ಸಮಯ. ಇದನ್ನೂ ಓದಿ: ಕೋವಿಡ್ ಹೆಚ್ಚಾದ್ರೆ ಪಶ್ಚಿಮ ಬಂಗಾಳದಲ್ಲಿ ಶಾಲಾ-ಕಾಲೇಜ್ ಬಂದ್: ಮಮತಾ ಬ್ಯಾನರ್ಜಿ
Advertisement
Today I’m announcing my retirement from international cricket at the conclusion of the home summer, two more tests against Bangladesh, and six odi’s against Australia & the Netherlands. Thank you for 17 years of incredible support. It’s been an honour to represent my country #234 pic.twitter.com/OTy1rsxkYp
— Ross Taylor (@RossLTaylor) December 29, 2021
Advertisement
ಇಂದು ನಾನು ಬೇಸಿಗೆಯ ಕೊನೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿಯನ್ನು ಘೋಷಿಸುತ್ತಿದ್ದೇನೆ. ಬಾಂಗ್ಲಾದೇಶದ ವಿರುದ್ಧ ಇನ್ನೂ ಎರಡು ಟೆಸ್ಟ್‍ಗಳು ಹಾಗೂ ಆಸ್ಟ್ರೇಲಿಯಾ ಮತ್ತು ನೆದರ್ ಲ್ಯಾಂಡ್ಸ್ ವಿರುದ್ಧ ಆರು ಏಕದಿನ ಪಂದ್ಯಗಳಿವೆ. ಇದಾದ ಬಳಿಕ ನಿವೃತ್ತಿ ಘೋಷಿಸುತ್ತೇನೆ. 17 ವರ್ಷಗಳಿಂದ ಬೆಂಬಲಿಸಿರುವ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಐವರಿಗೆ ಓಮಿಕ್ರಾನ್ ದೃಢ – 43ಕ್ಕೇರಿದ ಸೋಂಕಿತರ ಸಂಖ್ಯೆ
ಟೇಲರ್ 2006ರಲ್ಲಿ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದರು. 109 ಟೆಸ್ಟ್ ಪಂದ್ಯದಲ್ಲಿ 7,577 ರನ್, 233 ಏಕದಿನ ಪಂದ್ಯಗಳಲ್ಲಿ 8,581 ರನ್ ಮತ್ತು 102 ಟಿ20 ಪಂದ್ಯಗಳಲ್ಲಿ 1,909 ರನ್‍ಗಳನ್ನು ಗಳಿಸಿದ್ದಾರೆ. ಐಪಿಎಲ್‍ನಲ್ಲೂ ಆಡಿರುವ ರಾಸ್ ಟೇಲರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ರಾಜಸ್ಥಾನ ರಾಯಲ್ಸ್, ಡೆಲ್ಲಿ ಡೇರ್ ಡೇವಿಲ್ಸ್ ಪುಣೆ ವಾರಿಯರ್ಸ್ ಪರ ಆಡಿದ್ದಾರೆ.