ಧರ್ಮಶಾಲಾ: ಆಸ್ಟ್ರೇಲಿಯಾ (Australia) ವಿರುದ್ಧ ಇಲ್ಲಿನ HPCA ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆಸೀಸ್ ಬೌಲರ್‌ಗಳನ್ನ ಬೆಂಡೆತ್ತಿದ್ದ ಕಿವೀಸ್ ಆಟಗಾರ ರಚಿನ್ ರವೀಂದ್ರ (Rachin Ravindra) 77 ಎಸೆತಗಳಲ್ಲೇ 5 ಸಿಕ್ಸರ್, 7 ಬೌಂಡರಿಗಳ ನೆರವಿನೊಂದಿಗೆ ಶತಕ ಸಿಡಿಸಿ ಮಿಂಚಿದರು. ಒಟ್ಟು 89 ಎಸೆತಗಳನ್ನು ಎದುರಿಸಿದ ರವೀಂದ್ರ 116 ರನ್ (9 ಬೌಂಡರಿ, 5 ಸಿಕ್ಸರ್) ಬಾರಿಸುವ ಮೂಲಕ ಸ್ಫೋಟಕ ಪ್ರದರ್ಶನ ನೀಡಿ ಗಮನ ಸೆಳೆದರು.
Advertisement
ಈ ಶತಕದೊಂದಿಗೆ 23ನೇ ವಯಸ್ಸಿಗೆ ವಿಶ್ವಕಪ್ (World Cup) ಇತಿಹಾಸದಲ್ಲಿ 2 ಶತಕ ಸಿಡಿಸುವ ಮೂಲಕ ಭಾರತದ ಲೆಜೆಂಡ್ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ವಿಶೇಷ ದಾಖಲೆಯನ್ನೂ ಸರಿಗಟ್ಟಿದರು. ಪಂದ್ಯ ಮುಗಿದ ಬಳಿಕ ಪೋಸ್ಟ್ ಪ್ರೆಸೆಂಟೇಷನ್‌ನಲ್ಲಿ, ಭಾರತೀಯ ಮೂಲದವನಾಗಿ ಭಾರತದಲ್ಲಿ ಪ್ರದರ್ಶನ ನೀಡುತ್ತಿರುವ ಒತ್ತಡದ ಬಗ್ಗೆ ಕೇಳಲಾಯಿತು. ಇದನ್ನೂ ಓದಿ: 23ನೇ ವಯಸ್ಸಿಗೆ ಸಚಿನ್ ದಾಖಲೆ ಸರಿಗಟ್ಟಿದ ಬೆಂಗಳೂರು ಯುವಕ ರಚಿನ್
Advertisement
Advertisement
ಇದಕ್ಕೆ ಪ್ರತಿಕ್ರಿಯಿಸಿದ ರಚಿನ್, ನನಗೆ ಈ ಬಗ್ಗೆ ಸಾಕಷ್ಟುಬಾರಿ ಕೇಳಿದ್ದಾರೆ. ನಾನು 100% ಕಿವೀಸ್ ಅಟಗಾರನೇ ಎಂದು ಭಾವಿಸುತ್ತೇನೆ. ಆದ್ರೆ ನನ್ನ ಭಾರತೀಯ ಪರಂಪರೆ ಬಗ್ಗೆ ತುಂಬಾ ಹೆಮ್ಮೆಪಡುತ್ತೇನೆ. ನನ್ನ ಹೆತ್ತವರು ಹುಟ್ಟಿಬೆಳೆದ ದೇಶ ಇದು, ನನ್ನ ಕುಟುಂಬದ ಬಹಳಷ್ಟು ಮಂದಿ ಇಲ್ಲಿದ್ದಾರೆ. ಇಲ್ಲಿನ ಪರಿಸ್ಥಿತಿ ಬ್ಯಾಟಿಂಗ್‌ಗೆ ಉತ್ತಮವಾಗಿದೆ. ಮುಂದಿನ ದಿನಗಳಲ್ಲಿ ಭಾರತದ ಪ್ರವಾಸಕ್ಕೆ ಬರಲು ಇದೆಲ್ಲವೂ ನೆರವಾಗುತ್ತದೆ. ನನ್ನ ಆಟ ಪರ್ಫೆಕ್ಟ್ ಆಗಿ ಇರಬೇಕು ಎಂದು ನಾನು ಬಯಸುವುದಿಲ್ಲ, ಆದ್ರೆ ಉತ್ತಮ ಪ್ರದರ್ಶನ ನೀಡಬೇಕೆಂದು ಪ್ರಯತ್ನಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.
Advertisement
ನಂತರ ಧರ್ಮಶಾಲಾ ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಂದ ಸಿಕ್ಕ ಬೆಂಬಲದ ಬಗ್ಗೆ ಮಾತನಾಡಿದ ರಚಿನ್, ಖಂಡಿತವಾಗಿಯೂ ಪ್ರೇಕ್ಷಕರಿಂದ ಉತ್ತಮ ಬೆಂಬಲ ಸಿಕ್ಕಿದೆ. ಭಾರತದಲ್ಲಿ ಆಡಿದ ಪಂದ್ಯಗಳ ಪೈಕಿ ಹೆಚ್ಚಿನ ಜನ ಪ್ರೇಕ್ಷಕರನ್ನು ಒಳಗೊಂಡ ಪಂದ್ಯಗಳಲ್ಲಿ ಇದೂ ಒಂದಾಗಿದೆ. ಅಭಿಮಾನಿಗಳು ಸ್ಪಂದಿಸುತ್ತಿದ್ದ ರೀತಿ ತುಂಬಾ ಖುಷಿ ಕೊಟ್ಟಿದೆ. ಚಿಕ್ಕಮಕ್ಕಳಾಗಿದ್ದಾಗ ಸಾವಿರಾರು ಜನ ನಮ್ಮ ಹೆಸರು ಹೇಳಬೇಕೆಂದು ಬಯಸುತ್ತೇವೆ. ಆ ಕನಸು ಈಗ ನನಸಾಗಿದೆ. ಆ ಕ್ಷಣವನ್ನು ಕಣ್ತುಂಬಿಕೊಳ್ಳುವುದು ಆನಂದವಾಗಿತ್ತು, ಅದನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಧರ್ಮಶಾಲಾ ಅಂಗಳದಲ್ಲಿ ವಂದೇ ಮಾತರಂ ಝೇಂಕಾರ – ಅದ್ಭುತ ವೀಡಿಯೋ ನೀವೇ ನೋಡಿ
ಕೊಹ್ಲಿ ಹಿಂದಿಕ್ಕಿದ ರವೀಂದ್ರ: ಪ್ರಸ್ತುತ ವಿಶ್ವಕಪ್ ಕ್ರಿಕೆಟ್‌ನಲ್ಲಿ 354 ರನ್ ಗಳಿಸಿದ್ದ ಕಿಂಗ್ ಕೊಹ್ಲಿ ಅತಿಹೆಚ್ಚು ರನ್ ಗಳಿಸಿದ 4ನೇ ಬ್ಯಾಟರ್ ಎನಿಸಿಕೊಂಡಿದ್ದರು. ಆದ್ರೆ ಆಸೀಸ್ ವಿರುದ್ಧ ಸ್ಫೋಟಕ ಶತಕ ಸಿಡಿಸುವ ಮೂಲಕ 6 ಪಂದ್ಯಗಳಲ್ಲಿ 2 ಶತಕ ಸೇರಿ 406 ರನ್ ಗಳಿಸಿರುವ ರಚಿನ್ ರವೀಂದ್ರ ಕೊಹ್ಲಿಯನ್ನು ಹಿಂದಿಕ್ಕಿ 3ನೇ ಸ್ಥಾನಕ್ಕೆ ಜಿಗಿದಿದ್ದಾರೆ. 431 ರನ್ ಗಳಿಸಿರುವ ಕ್ವಿಂಟನ್ ಡಿಕಾಕ್ ಮೊದಲ ಸ್ಥಾನದಲ್ಲಿ, 413 ರನ್ ಗಳಿಸಿರುವ ಡೇವಿಡ್ ವಾರ್ನರ್ 2ನೇ ಸ್ಥಾನ, 356 ರನ್ ಗಳಿಸಿರುವ ಏಡನ್ ಮಾರ್ಕ್ರಮ್ 4ನೇ ಸ್ಥಾನದಲ್ಲಿದ್ದಾರೆ. ಭಾನುವಾರ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲೂ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದು, 6 ಪಂದ್ಯಗಳಿಂದ 354 ರನ್ ಗಳಿಸಿ 5ನೇ ಸ್ಥಾನದಲ್ಲೇ ಮುಂದುವರಿದಿದ್ದಾರೆ. ಇದನ್ನೂ ಓದಿ: World Cup 2023: ಸಿಕ್ಸರ್, ಬೌಂಡರಿಗಳ ಸುರಿಮಳೆ – ಭಾರತದ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಆಸೀಸ್
Web Stories