ಗಾಲೆ: ನ್ಯೂಜಿಲೆಂಡ್ ವೇಗದ ಬೌಲರ್ ಟಿಮ್ ಸೌಥಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸಚಿನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಸೌಥಿ ಲಂಕಾ ಸ್ಪಿನ್ನರ್ ಧನಂಜಯ ಡಿ ಸಿಲ್ವಾ ಬೌಲಿಂಗ್‍ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ತೆಂಡುಲ್ಕರ್ ದಾಖಲೆಯನ್ನು ಸರಿಗಟ್ಟಿದ್ದಾರೆ.
ಈ ಸಿಕ್ಸ್ ನೊಂದಿಗೆ ಸೌಥಿ ಟೆಸ್ಟ್ ಕ್ರಿಕೆಟ್‍ನಲ್ಲಿ 67 ಸಿಕ್ಸ್ ಹೊಡೆದ ಸಚಿನ್ ಜೊತೆಯಲ್ಲೇ ಸ್ಥಾನ ಹಂಚಿಕೊಂಡಿದ್ದಾರೆ. ಇನ್ನು ಎರಡು ಸಿಕ್ಸ್ ಹೊಡೆದರೆ ಯೂನಸ್ ಖಾನ್ ಅವರ ದಾಖಲೆಯನ್ನು ಮುರಿಯಲಿದ್ದಾರೆ.
Advertisement
ಸಚಿನ್ ತೆಂಡುಲ್ಕರ್ 329 ಇನಿಂಗ್ಸ್ ನಲ್ಲಿ 69 ಸಿಕ್ಸ್ ಹೊಡೆದಿದ್ದರೆ, ಸೌಥಿ ಕೇವಲ 89 ಇನಿಂಗ್ಸ್ ಗಳಲ್ಲಿ 69 ಸಿಕ್ಸ್ ಹೊಡೆದಿರುವುದು ವಿಶೇಷ. ಈ ಮೂಲಕ ಟೆಸ್ಟ್ ಕ್ರಿಕೆಟ್‍ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಜಂಟಿ 17ನೇ ಸ್ಥಾನ ಹಂಚಿಕೊಂಡಿದ್ದಾರೆ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಯೂನುಸ್ ಖಾನ್ 213 ಇನ್ನಿಂಗ್ಸ್ ಆಡಿ 70 ಸಿಕ್ಸ್ ಹೊಡೆದಿದ್ದಾರೆ.
Advertisement
Advertisement
ನ್ಯೂಜಿಲೆಂಡ್ ಮಾಜಿ ಕ್ರಿಕೆಟಿಗ ಬ್ರೆಂಡನ್ ಮೆಕ್ಲಮ್ ಟೆಸ್ಟ್ ಕ್ರಿಕೆಟ್‍ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ 107 ಸಿಕ್ಸರ್ ಸಿಡಿಸಿ ಮೊದಲ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಮಾಜಿ ವಿಕೆಟ್ ಕೀಪರ್ ಆ್ಯಡಂ ಗಿಲ್‍ಕ್ರಿಸ್ಟ್ 176 ಇನ್ನಿಂಗ್ಸ್ ನಿಂದ 100 ಸಿಕ್ಸ್ ಸಿಡಿಸಿದ್ದಾರೆ. ನಂತರದ ಸ್ಥಾನದಲ್ಲಿ ವೆಸ್ಟ್ ಇಂಡೀಸಿನ ಕ್ರಿಸ್ ಗೇಲ್(98), ದಕ್ಷಿಣ ಆಫ್ರಿಕಾದ ಜ್ಯಾಕ್ ಕ್ಯಾಲಿಸ್(97), ಭಾರತದ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್(91) ಇದ್ದಾರೆ.
Advertisement
ಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟಿಮ್ ಸೌಥಿ 14 ರನ್(19 ಎಸೆತ,1 ಸಿಕ್ಸರ್) ಹೊಡೆದು ರನೌಟ್ ಆಗಿದ್ದರು. ಎರಡನೇ ಇನ್ನಿಂಗ್ಸ್ ನಲ್ಲಿ 23 ರನ್(62 ಎಸೆತ, 1 ಬೌಂಡರಿ) ಹೊಡೆದು ಸ್ಟಂಪ್ ಔಟ್ ಆಗಿದ್ದಾರೆ.
ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ 249 ರನ್ ಗಳಿಗೆ ಆಲೌಟ್ ಆಗಿದ್ದರೆ, ಶ್ರೀಲಂಕಾ 267 ರನ್ ಗಳಿಗೆ ಆಲೌಟ್ ಆಗಿದೆ. ಎರಡನೇ ಇನ್ನಿಂಗ್ಸ್ ನಲ್ಲಿ ನ್ಯೂಜಿಲೆಂಡ್ ಮೂರನೇ ದಿನದಾಟದ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿ ಬ್ಯಾಟಿಂಗ್ ನಡೆಸುತ್ತಿದೆ.