– ತವರಿನಲ್ಲಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದ ಸ್ಯಾಂಟ್ನರ್ ಸೈನ್ಯ
ಆಕ್ಲೆಂಡ್: ಗ್ಲೆನ್ ಫಿಲಿಪ್ಸ್, ಮೈಕಲ್ ಬ್ರೇಸ್ವೆಲ್ ಸಿಡಿಲಬ್ಬರದ ಬ್ಯಾಟಿಂಗ್, ಜಾಕೊಬ್ ಡಫಿ ಬೆಂಕಿ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ತಂಡವು 4ನೇ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ 87 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಸರಣಿಯಲ್ಲಿ 1-3 ಅಂತರ ಕಾಯ್ದುಕೊಂಡಿದೆ.
5 ಪಂದ್ಯಗಳ ಟಿ20 ಸರಣಿಯಲ್ಲಿ ಸತತ ಮೂರು ಪಂದ್ಯಗಳನ್ನ ಸೋತಿದ್ದ ಕಿವೀಸ್ 4ನೇ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಕಳೆದ ಏಳೂವರೆ ವರ್ಷಗಳಲ್ಲಿ ನ್ಯೂಜಿಲೆಂಡ್ನಲ್ಲಿ ನಡೆದ ಟಿ20 ಅಂತಾರಾಷ್ಟ್ರೀಯ ಪಂದ್ಯವೊಂದರಲ್ಲಿ ಭಾರತದ ವಿರುದ್ಧ ಗೆಲುವು ಸಾಧಿಸಿದ ಸಾಧನೆ ಮಾಡಿದೆ.
ಆಕ್ಲೆಂಡ್ನ ಈಡನ್ ಪಾರ್ಕ್ ಮೈದಾನದಲ್ಲಿಂದು ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳಿದ ಕಿವೀಸ್ 7 ವಿಕೆಟ್ ನಷ್ಟಕ್ಕೆ 259 ರನ್ ಗಳಿಸಿತ್ತು. ಇದು ಟೀಂ ಇಂಡಿಯಾ ವಿರುದ್ಧ ವಿದೇಶಿ ತಂಡವೊಂದು ಗಳಿಸಿದ ಗರಿಷ್ಠ ರನ್ ಆಗಿದೆ. 260 ರನ್ ಗಳ ಗುರಿ ಬೆನ್ನಟ್ಟಿದ ಭಾರತ ಅಗ್ರ ಕ್ರಮಾಂಕದ ಬ್ಯಾಟರ್ಗಳ ಕಳಪೆ ಪ್ರದರ್ಶನದಿಂದ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 172 ರನ್ಗಳನ್ನಷ್ಟೇ ಗಳಿಸಿ ಸೋಲೋಪ್ಪಿಕೊಂಡಿತ್ತು.
ಈ ಸೋಲಿನೊಂದಿಗೆ ಐಸಿಸಿ ರ್ಯಾಂಕಿಂಗ್ನಲ್ಲಿ ನಂ.1 ಪಟ್ಟಕ್ಕೇರುವ ಅವಕಾಶವನ್ನೂ ಟೀಂ ಇಂಡಿಯಾ ಕಳೆದುಕೊಂಡಿತು.

