CricketLatestMain PostNationalSports

ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ ರಾಸ್ ಟೇಲರ್

Advertisements

ವೆಲ್ಲಿಂಗ್ಟನ್: 16 ವರ್ಷಗಳ ಕ್ರಿಕೆಟ್ ವೃತ್ತಿಜೀವನಕ್ಕೆ ನ್ಯೂಜಿಲೆಂಡ್ ತಂಡದ ಖ್ಯಾತ ಆಟಗಾರ ರಾಸ್ ಟೇಲರ್ ವಿದಾಯ ಹೇಳಿದ್ದಾರೆ.

ಸೋಮವಾರ ನಡೆದ ನೆದರ್ಲೆಂಡ್ಸ್ ವಿರುದ್ಧದ ಏಕದಿನ ಪಂದ್ಯದ ಬಳಿಕ ಟೇಲರ್ ವಿದಾಯ ಹೇಳಿದ್ದಾರೆ. ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮುಖ್ಯಸ್ಥ ಮಾರ್ಟಿನ್ ಸ್ನೇಡನ್ ಅವರು ಟೇಲರ್‌ಗೆ ಬೀಳ್ಕೊಡುಗೆ ನೀಡಿ, ಸನ್ಮಾನಿಸಿದರು. ಇದನ್ನೂ ಓದಿ: ಜನಾಂಗ, ಧರ್ಮ, ಪಕ್ಷವನ್ನು ಬದಿಗಿರಿಸಿ ದೇಶಕ್ಕಾಗಿ ಒಂದಾಗಿ: ಮುತ್ತಯ್ಯ ಮುರುಳೀಧರನ್

ಸೇಡಾನ್ ಪಾರ್ಕ್‍ನಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು 115 ರನ್‍ಗಳಿಂದ ಜಯಗಳಿಸಿತು. ತಮ್ಮ ವೃತ್ತಿಜೀವನದ ಕೊನೆಯ ಪಂದ್ಯವನ್ನಾಡಿದ ಅವರು ಕೇವಲ 14 ರನಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಈ ಹಿಂದೆ ಜನವರಿಯಲ್ಲಿ ಅವರು ಬಾಂಗ್ಲಾ ವಿರುದ್ಧದ ಸರಣಿಯ ನಂತರ ಟೆಸ್ಟ್ ಕ್ರಿಕೆಟ್‍ಗೆ ವಿದಾಯ ಹೇಳಿದ್ದರು. ಇದನ್ನೂ ಓದಿ: ರಂಜಾನ್ ಸಮಯದಲ್ಲಿ ಮಧುಮೇಹ ನಿರ್ವಹಣೆ ಹೇಗೆ?

2006ರಲ್ಲಿ ರಾಷ್ಟ್ರೀಯ ತಂಡಕ್ಕೆ ಆಯ್ಕೆ ಆಗಿದ್ದ ಅವರು, ನಂತರದಲ್ಲಿ ನ್ಯೂಜಿಲೆಂಡ್ ತಂಡದ ಬೆಸ್ಟ್ ಬ್ಯಾಟರ್ ಆಗಿ ಹೊರಹೊಮ್ಮಿದರು. ಟೆಸ್ಟ್ ಹಾಗೂ ಸೀಮಿತ ಓವರ್‌ಗಳ ಕ್ರಿಕೆಟ್‍ನಲ್ಲಿ ಹಲವು ಸಾಧನೆಗಳನ್ನು ಮಾಡಿದ್ದಾರೆ. 2015 ರಲ್ಲಿ ಪರ್ತ್‍ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 290 ವೈಯಕ್ತಿಕ ರನ್‍ಗಳನ್ನು ಗಳಿಸಿದ್ದು, ಅದು ಅವರ ಜೀವನಶ್ರೇಷ್ಠ ಪಂದ್ಯವಾಗಿದೆ.

ಈ ಕುರಿತು ಮಾತನಾಡಿದ ಅವರು, ನನ್ನ ಈ 16 ವರ್ಷಗಳಲ್ಲಿ ಅದ್ಭುತವಾದ ಹಲವಾರು ಕ್ಷಣಗಳನ್ನು ಅನುಭವಿಸಿದ್ದೇನೆ. ಅದರಲ್ಲಿ ಕೆಲ ಸುಂದರ ನೆನಪುಗಳು ಇವೆ. ಕ್ರಿಕೆಟ್ ಆಟವೀಗ ಜಾಗತಿಕ ಮಟ್ಟದಲ್ಲಿ ಉತ್ತಮ ಕ್ರೀಡೆಯಾಗಿ ಮಿಂಚುತ್ತಿದೆ. ಇಂದಿನ ಎಲ್ಲ ನವ ಆಟಗಾರರಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ. ನನ್ನ ಸಹ ಆಟಗಾರರು ಮತ್ತು ನ್ಯೂಜಿಲೆಂಡ್ ತಂಡದ ಕ್ರಿಕೆಟ್ ಬೋರ್ಡ್‍ಗೆ ನಾನು ಧನ್ಯವಾದ ಅರ್ಪಿಸಲು ಇಷ್ಟಪಡುತ್ತೇನೆ. ನ್ಯೂಜಿಲೆಂಡ್ ತಂಡದ ಅಭಿಮಾನಿಗಳಿಗೆ ನಾನು ಸದಾ ಚಿರಋಣಿ ಆಗಿ ಇರುತ್ತೇನೆ ಎಂದರು. ಈ ಹಿಂದೆ ರಾಸ್ ಟೇಲರ್ ಅವರು ಐಪಿಎಲ್‍ನಲ್ಲಿ ನಮ್ಮ ಆರ್‍ಸಿಬಿ ತಂಡದ ಪರವಾಗಿ ಆಡಿದ್ದರು.

Leave a Reply

Your email address will not be published.

Back to top button