ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಕೇಜ್ರಿವಾಲ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.
ಟ್ವಿಟ್ಟರ್ ನಲ್ಲಿ ಏನಿದೆ?: ನಾನು ಕೊರೊನಾ ಟೆಸ್ಟ್‍ಗೆ ಒಳಗಾಗಿದ್ದೆ. ಅಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ನನಗೆ ಸೋಂಕಿನ ಗುಣಲಕ್ಷಣಗಳು ಕಡಿಮೆಯಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತೇನೆ. ಕಳೆದ ಕೆಲವು ದಿನಗಳಲ್ಲಿ ನನ್ನನ್ನು ಯಾರ್ಯಾರು ಭೇಟಿ ಮಾಡಿದ್ದಿರೋ ಅವರೆಲ್ಲರೂ ದಯವಿಟ್ಟು ಟೆಸ್ಟ್ ಮಾಡಿಸಿಕೊಳ್ಳಿ. ಜೊತೆಗೆ ತಮ್ಮನ್ನು ತಾವು ಕ್ವಾರಂಟೈನ್ ಮಾಡಿಕೊಳ್ಳಬೇಕು ಎಂದು ಪೋಸ್ಟ್ ಮಾಡಿದ್ದಾರೆ.
Advertisement
I have tested positive for Covid. Mild symptoms. Have isolated myself at home. Those who came in touch wid me in last few days, kindly isolate urself and get urself tested
— Arvind Kejriwal (@ArvindKejriwal) January 4, 2022
Advertisement
ಇತ್ತೀಚೆಗೆ ಕೇಜ್ರಿವಾಲ್ ಅವರು ಪಂಜಾಬ್ ಚುನಾವಣೆಯ ನಿಮಿತ್ತ ಪ್ರಚಾರಕ್ಕೆಂದು ಪಂಜಾಬ್‍ಗೆ ತೆರಳಿದ್ದರು. ಅಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಕೇಂದ್ರದ ಶೆ.50ರಷ್ಟು ಸಿಬ್ಬಂದಿಗೆ ವರ್ಕ್ ಫ್ರಂ ಹೋಂ
Advertisement
Advertisement
ದೆಹಲಿಯಲ್ಲಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 4,099 ಹೊಸ ಕೇಸ್‍ಗಳು ಸೋಮವಾರ ಪತ್ತೆಯಾಗಿದೆ. ದೆಹಲಿಯ ಪಾಸಿಟಿವ್ ರೆಟ್ ಶೇ.6.46ಕ್ಕೆ ಏರಿದೆ. 6,288 ಕೊರೊನಾ ಸೋಂಕಿತರು ಹಾಗೂ ಸೋಂಕಿತರ ಸಂಪರ್ಕಕ್ಕೆ ಬಂದವರು ಹೋಂ ಐಸೋಲೇಶನ್‍ಲ್ಲಿ ಇದ್ದಾರೆ. ದೆಹಲಿಯಲ್ಲಿ ನಿನ್ನೆ ದಾಖಲೆ ಮಟ್ಟದಲ್ಲಿ ಕೊರೊನಾ ಸಾವಿನ ಸಂಖ್ಯೆ ಏರಿಕೆಯಾಗಿತ್ತು. ಇದನ್ನೂ ಓದಿ: ಗಡಿಯೊಳಗೆ ನುಸುಳಿದ ಪಾಕ್ ಯೋಧನ ಹತ್ಯೆ – ಶವವನ್ನ ಹಿಂದಕ್ಕೆ ತೆಗೆದುಕೊಳ್ಳಿ ಎಂದ ಭಾರತೀಯ ಸೇನೆ