ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಕ್ಕಟ್ಟು ಮುಂದುವರಿದಿದೆ. ಈ ನಡುವೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾಗುವಂತೆ ಮೂಲ ಕಾಂಗ್ರೆಸ್ ನಾಯಕರ ಬಣವೊಂದು ಪಟ್ಟು ಹಿಡಿದಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ, ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ. ಆ ಬಗ್ಗೆ ನಂಗೆ ಆಸಕ್ತಿಯೂ ಇಲ್ಲ ಎಂದಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಗೆ ಅಧ್ಯಕ್ಷರಾಗುವಂತೆ ಯಾರೂ ಮನವಿ ಮಾಡಿಲ್ಲ. ಮಾಜಿ ಸಂಸದ ಮುನಿಯಪ್ಪ ಸೇರಿದಂತೆ ಯಾರೂ ನನ್ನ ಭೇಟಿ ಮಾಡಿಲ್ಲ. ಕೆಪಿಸಿಸಿ ಸಂಬಂಧ ಮಾತನಾಡಿಲ್ಲ. ಅಂತಹ ಯಾವ ಬೆಳವಣಿಗಗಳೂ ನಡೆದಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವುದು ಸತ್ಯಕ್ಕೆ ದೂರವಾದದ್ದು ಊಹಾಪೋಹ ಸುದ್ದಿಗಳ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.
Advertisement
Advertisement
ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎಂದು ಹೈಕಮಾಂಡ್ ನಿರ್ಧಾರ ಮಾಡಲಿದೆ. ಹೈಕಮಾಂಡ್ ಈ ಬಗ್ಗೆ ನಂಗೇನೂ ಹೇಳಿಲ್ಲ, ಅವರು ಹೇಳಿದ ಮೇಲೆ ಗೊತ್ತಾಗಲಿದೆ. ಸಮನ್ವಯ ಸಮಿತಿ ರಚಿಸುವ ಬಗ್ಗೆಯೂ ನಂಗೆ ಮಾಹಿತಿ ಇಲ್ಲ ಎಂದು ಖರ್ಗೆ ಸ್ಪಷ್ಟಪಡಿಸಿದರು.
Advertisement