ನವದೆಹಲಿ: ಪ್ರವಾದಿ ಮೊಹಮ್ಮದ್ (Prophet Mohammed) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ಬಿಜೆಪಿ (BJP) ಮಾಜಿ ನಾಯಕಿ ನೂಪುರ್ ಶರ್ಮಾ (Nupur Sharma) ಅವರಿಗೆ ವೈಯಕ್ತಿಕ ಗನ್ ಹೊಂದಲು ಪರವಾನಗಿಯನ್ನು ದೆಹಲಿ ಪೊಲೀಸರು ನೀಡಿದ್ದಾರೆ.
ಕಳೆದ ವರ್ಷ ಟಿವಿ ಚರ್ಚೆಯೊಂದರಲ್ಲಿ ಪ್ರವಾದಿ ಮೊಹಮ್ಮದ್ ಕುರಿತು ನೂಪುರ್ ಶರ್ಮಾ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಗೆ ದೇಶಾದ್ಯಂತ ವಿರೋಧ ವ್ಯಕ್ತವಾಗಿ, ಪ್ರತಿಭಟನೆಗಳು ನಡೆದಿದ್ದವು. ನೂಪುರ್ ಶರ್ಮಾಗೆ ವಿದೇಶಗಳಿಂದಲೂ ಜೀವ ಬೆದರಿಕೆ ಕರೆಗಳು ಬಂದಿದ್ದವು.
Advertisement
Advertisement
ಅಜ್ಮೀರ್ ದರ್ಗಾದ ಉದ್ಯೋಗಿಯೊಬ್ಬ ಆಕೆಯ ಕತ್ತು ಸೀಳುವುದಾಗಿ ವೀಡಿಯೋದಲ್ಲಿ ಹೇಳಿಕೆ ನೀಡಿದ್ದು, ಮತ್ತೊಬ್ಬ ಉತ್ತರ ಪ್ರದೇಶದ ನಿವಾಸಿ ಆಕೆಯನ್ನು ನಿಂದಿಸಿ ಶಿರಚ್ಛೇದ ಮಾಡುವುದಾಗಿ ಬೆದರಿಕೆಗಳು ಹಾಕಿದ್ದ. ಇದೆಲ್ಲದರ ಬೆನ್ನಲ್ಲೇ ನೂಪುರ್ ಶರ್ಮಾ ಅವರು ಸ್ವಯಂ ರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಪರವಾನಗಿ ಬೇಕು ಎಂದು ದೆಹಲಿ ಪೊಲೀಸರ ಬಳಿ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಅರ್ಜಿಯನ್ನು ಪರಿಶೀಲಿಸಿ ದೆಹಲಿ ಪೊಲೀಸರು ನೂಪುರ್ ಶರ್ಮಾಗೆ ಪರವಾನಗಿ ನೀಡಿದ್ದಾರೆ.
Advertisement
ನೂಪುರ್ ವಿರುದ್ಧ ದೂರು ದಾಖಲು: ನೂಪುರ್ ಶರ್ಮಾ ಅವರ ಹೇಳಿಕೆ ವಿವಾದ ಆಗುತ್ತಿದ್ದಂತೆ ರಾಷ್ಟ್ರದ ಅನೇಕ ರಾಜ್ಯಗಳಲ್ಲಿ ಪೊಲೀಸ್ ದೂರು ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ಬಂಧನದಿಂದ ರಕ್ಷಣೆ ನೀಡಿತ್ತು. ನೂಪುರ್ ಶರ್ಮಾ ವಿರುದ್ಧ ದಾಖಲಾಗಿರುವ ಒಂಬತ್ತು ಪ್ರಕರಣಗಳಲ್ಲಿ ಅವರನ್ನು ಬಂಧಿಸುವಂತಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ಅಷ್ಟೇ ಅಲ್ಲದೇ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಒಟ್ಟುಗೂಡಿಸಿ ದೆಹಲಿಯಲ್ಲಿ ಈ ಎಲ್ಲಾ ಪ್ರಕರಣಗಳ ವಿಚಾರಣೆ ನಡೆಸುವಂತೆ ಕೋರಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಾನ್ಯ ಮಾಡಿತ್ತು. ಇದನ್ನೂ ಓದಿ: ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್
Advertisement
ಬೆಂಬಲ ನೀಡಿದವರ ಹತ್ಯೆ: ಈ ವಿವಾದಕ್ಕೆ ಸಂಬಂಧಿಸಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದ ಇಬ್ಬರ ಹತ್ಯೆಯೂ ನಡೆದಿತ್ತು. ಆಕೆಗೆ ಬೆಂಬಲ ನೀಡಿದ ಫಾರ್ಮಸಿಸ್ಟ್ ಉಮೇಶ್ ಕೊಲ್ಹೆ ಜೂನ್‍ನಲ್ಲಿ ಮಹಾರಾಷ್ಟ್ರದ ಅಮರಾವತಿಯಲ್ಲಿ ಹತ್ಯೆ ಮಾಡಿದ್ದರು. ಅದಾದ ಕೆಲವೇ ದಿನಗಳ ನಂತರ, ನೂಪುರ್ ಶರ್ಮಾ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಬೆಂಬಲಿಸಿದ್ದ ಉದಯಪುರದ ಟೈಲರ್ ಕನ್ಹಯ್ಯ ಲಾಲ್‍ನನ್ನು ಅವರ ಅಂಗಡಿಯಲ್ಲಿ ಕೊಂದಿದ್ದರು.
ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಉದಯ್‍ಪುರದಲ್ಲಿ ಟೈಲರ್ ಹತ್ಯೆಯಂತಹ ದುರದೃಷ್ಟಕರ ಘಟನೆ ಆಗುವುದಕ್ಕೆ ನೂಪುರ್ ಶರ್ಮಾ ಹೇಳಿಕೆಯೇ ನೇರ ಕಾರಣ. ಈಗ ನಡೆಯುತ್ತಿರುವ ವಿದ್ಯಮಾನಗಳಿಗೆಲ್ಲ ನೂಪುರ್ ಶರ್ಮಾ ಒಬ್ಬರೇ ಹೊಣೆಗಾರರು ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಇದನ್ನೂ ಓದಿ: 4 ವರ್ಷಗಳ ಬಳಿಕ ಸಿಲಿಕಾನ್ ಸಿಟಿಯಲ್ಲಿ ದಾಖಲೆಯ ಕನಿಷ್ಠ ಉಷ್ಣಾಂಶ ಕುಸಿತ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k