ಬೆಳಗ್ಗೆ ಮದುವೆ, ಮಧ್ಯಾಹ್ನ ಮಚ್ಚಿನಿಂದ ಮಾರಾಮಾರಿ.. ವಧು ಸಾವು, ವರ ಗಂಭೀರ!

Public TV
1 Min Read
kolar bride and groom clash

– ಕೋಲಾರದಲ್ಲಿ ಘಟನೆ; ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ನವಜೋಡಿ

ಕೋಲಾರ: ಪರಸ್ಪರ ಪ್ರೀತಿಸಿ ಒಪ್ಪಿ ಬೆಳಗ್ಗೆ ಮದುವೆಯಾದ ನವಜೋಡಿ, ಅದೇ ದಿನ ಮಧ್ಯಾಹ್ನ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಪರಿಣಾಮ ನವವಧು ಸಾವನ್ನಪ್ಪಿದ್ದಾಳೆ. ಮದುಮಗನ ಸ್ಥಿತಿ ಚಿಂತಾಜನಕವಾಗಿದೆ.

ಕೋಲಾರ (Kolar) ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬರಸನಹಳ್ಳಿಯಲ್ಲಿ ಘಟನೆ ನಡೆದಿದೆ. ಆಂಧ್ರದ ಬೈನಪಲ್ಲಿ ಗ್ರಾಮದ ಲಿಖಿತಾಶ್ರೀ ಮೃತಪಟ್ಟಿದ್ದಾಳೆ. ಚಂಬರಸನಹಳ್ಳಿಯ ನವೀನ್‌ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಪಬ್‍ನಲ್ಲಿ ಯುವತಿಯ ಮಾನಭಂಗಕ್ಕೆ ಯತ್ನ – ನಾಲ್ವರು ಕಾಮುಕರು ಅರೆಸ್ಟ್

hospital

ನಡೆದಿದ್ದೇನು?
ನವೀನ್‌ ಮತ್ತು ಲಿಖಿತಾಶ್ರೀ ಜೋಡಿ ಪರಸ್ಪರ ಒಪ್ಪಿಕೊಂಡು ಮದುವೆಯಾಗಿದ್ದರು. ಇಂದು ಮುಂಜಾನೆ ಹಿರಿಯರ ಸಮ್ಮುಖದಲ್ಲಿ ಚಂಬರಸನಹಳ್ಳಿಯಲ್ಲಿ ಮದುವೆಯಾದರು. ಮದುವೆ ಕೆಲಗಂಟೆಗಳ ನಂತರ ನವಜೋಡಿ ರೂಂಗೆ ಹೋಗಿದ್ದಾರೆ. ಬಳಿಕ ಮಚ್ಚಿನಿಂದ ಪರಸ್ಪರರ ಮೇಲೆ ಹಲ್ಲೆ ನಡೆಸಿಕೊಂಡಿದ್ದಾರೆ.

ಮಾರಾಮಾರಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಕೆಜಿಎಫ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಲಿಖಿತಾಶ್ರೀ ಸಾವನ್ನಪ್ಪಿದ್ದಾಳೆ. ನವೀನ್‌ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳಕ್ಕೆ ಅಂಡರ್‌ಸನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಿಎಂ ನೋಡಲು ಹೋಗಿದ್ದ ಯುವಕನಿಗೆ ವಿದ್ಯುತ್ ಶಾಕ್!

ಇಬ್ಬರೂ ಪ್ರೀತಿಸಿ ಎರಡೂ ಕುಟುಂಬದವರನ್ನು ಒಪ್ಪಿಸಿ ಮದುವೆಯಾಗಿದ್ದರು. ಇಂದು ಬೆಳಗಿನ ಜಾವ ಇಬ್ಬರಿಗೂ ಮದುವೆಯಾಗಿತ್ತು. ಮದುವೆ ನಂತರ ಇಬ್ಬರೂ ಮನೆಯ ಕೊಠಡಿಗೆ ಹೋಗಿದ್ದರು. ಕೆಲ ಹೊತ್ತಿನಲ್ಲೇ ಕೊಠಡಿಯಲ್ಲಿದ್ದ ನವಜೋಡಿ ಮಚ್ಚಿನಿಂದ ಹೊಡೆದಾಡಿಕೊಂಡಿದ್ದಾರೆ. ಇಬ್ಬರ ಗಲಾಟೆಗೆ ಕಾರಣ ತಿಳಿದು ಬಂದಿಲ್ಲ.

Share This Article