Gadag | ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ಆತ್ಮಹತ್ಯೆ

Public TV
1 Min Read
Gadag suicide copy

ಗದಗ: ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬೆಟಗೇರಿ (Betageri) ಶರಣ ಬಸವೇಶ್ವರ ನಗರದಲ್ಲಿ ನಡೆದಿದೆ.

ಪೂಜಾ ಅಮರೇಶ ಅಯ್ಯನಗೌಡರ್(27) ಮೃತ ಮಹಿಳೆ. ಪೂಜಾ, ಡೆತ್‌ನೋಟ್ ಬರೆದಿಟ್ಟು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮೈಸೂರು| ಬೈಕ್, ಕಾರು ಮುಖಾಮುಖಿ ಡಿಕ್ಕಿ – ಗುದ್ದಿದ ರಭಸಕ್ಕೆ ನದಿಗೆ ಬಿದ್ದ ತಾಯಿ, ಮಗ ಸಾವು

ಪೂಜಾಗೆ ಅತ್ತೆ ಶಶಿಕಲಾ, ಬಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ ನೀಡುತ್ತಿದ್ದರು. ಆಕೆ ಸ್ವಲ್ಪ ಕಪ್ಪು ಇದ್ದುದರಿಂದ ಅತ್ತೆ ಅಪಹಾಸ್ಯ ಮಾಡುತ್ತಿದ್ದರು ಎಂದು ಪೂಜಾ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಪತ್ನಿಯನ್ನು ಕೊಲೆಗೈದು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ಸೈನಿಕ ಅರೆಸ್ಟ್‌

ಅಲ್ಲದೇ ಅತ್ತೆ, ಮಾವ, ಬಾವ ಒಟ್ಟಾಗಿ ಆಕೆಯನ್ನು ನೇಣು ಹಾಕಿರುವುದಾಗಿ ಕುಟುಂಬಸ್ಥರು ಆರೋಪಿಸಿ, ಬಾವ ವೀರನಗೌಡನಿಗೆ ಥಳಿಸಿದ್ದಾರೆ. ಸ್ಥಳದಲ್ಲಿ ಯುವತಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಇನ್ನೋವಾ ಡಿಕ್ಕಿಯಾಗಿ 10 ಅಡಿ ದೂರ ಹಾರಿ ಬಿದ್ದ ಮಹಿಳೆ – ಮಕ್ಕಳಿಗೆ ಚಾಕ್ಲೇಟ್ ತರಲು ಹೋಗಿ ಅಪಘಾತಕ್ಕೆ ಬಲಿ

ಪೂಜಾ, 4 ತಿಂಗಳ ಹಿಂದೆಯಷ್ಟೇ ಅಮರೇಶ ಎಂಬುವವರನ್ನು ಮದುವೆಯಾಗಿದ್ದರು. ಪತಿ ಅಮರೇಶ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಸೋಮವಾರವಷ್ಟೇ ಚೆನ್ನೈಗೆ ಕೆಲಸಕ್ಕೆ ತೆರಳಿದ್ದರು. ಸ್ಥಳಕ್ಕೆ ಬೆಟಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article