ಹಾಸನ: ಮದುವೆಯಾದ ಎರಡೇ ವಾರಕ್ಕೆ ನವವಧು ಸಾವನ್ನಪ್ಪಿರುವ ಘಟನೆ ಹಾಸನದ ಸಲೀಂ ನಗರದಲ್ಲಿ ನಡೆದಿದೆ.
ಫಿಜಾ ಖಾನಂ (22) ಮೃತ ನವವಧು. ವರದಕ್ಷಿಣೆಗಾಗಿ ಮಗಳನ್ನು ಕೊಲೆ ಮಾಡಿರುವುದಾಗಿ ಯುವತಿ ಪೋಷಕರು ಆರೋಪ ಮಾಡಿದ್ದಾರೆ.
- Advertisement 2
- Advertisement 3
ಡಿಸೆಂಬರ್ 2 ರಂದು ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹೊಳಲಗೋಡು ಗ್ರಾಮದ ಯುವತಿ ಫಿಜಾ ಖಾನಂ ಹಾಗೂ ಹಾಸನದ ಶಾಗಿಲ್ ಅಹಮದ್ ನಡುವೆ ಮದುವೆಯಾಗಿತ್ತು. ಮದುವೆಯಾಗಿ 19ನೇ ದಿನವೇ ನವ ವಿವಾಹಿತೆಯ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.
- Advertisement 4
ನಮ್ಮ ಮಗಳು ಸ್ನಾನಕ್ಕೆ ಹೋದಾಗ ಗ್ಯಾಸ್ ಗೀಸರ್ ಆನ್ ಮಾಡಿ, ಬಾಗಿಲು ಮುಚ್ಚಿ ಕೊಲೆ ಮಾಡಲಾಗಿದೆ ಎಂದು ಪೋಷಕರು ಆರೋಪ ಮಾಡುತ್ತಿದ್ದಾರೆ. ಅಳಿಯ ಹಾಗೂ ಅವರ ಮನೆಯವರ ವಿರುದ್ಧ ಆರೋಪ ಕೇಳಿಬಂದಿದೆ.
ಈ ಸಂಬಂಧ ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮದುವೆ ಹಿಂದಿನ ದಿನ ಚಿನ್ನಾಭರಣ ದೋಚಿ ಪ್ರಿಯಕರನೊಂದಿಗೆ ಯುವತಿ ಜೂಟ್