ಇಂದೋರ್: ನವವಿವಾಹಿತೆಯೊಬ್ಬರು ಕಟ್ಟಡದ 4ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯ ಪ್ರದೇಶದ ಇಂದೋರ್ ಜಿಲ್ಲೆಯ ಪಲ್ಲೇಶಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಘಟನೆ ಗೀತಾ ನಗರದ ರೈನ್ಬೋ ಅಪಾರ್ಟ್ ಮೆಂಟ್ ನಲ್ಲಿ ನಡೆದಿದ್ದು, ಶುಕ್ರವಾರ ಸಂಜೆ ಸುಮಾರು 4 ಗಂಟೆಗೆ ಕಟ್ಟಡದ ನಾಲ್ಕನೇ ಮಹಡಿಯಿಂದ ನವವಿವಾಹಿತ ಮಹಿಳೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಕೆ ಬಿದ್ದ ನಂತರ ಸ್ಥಳಕ್ಕೆ ನೆರೆಹೊರೆಯಲ್ಲಿದ್ದ ಜನರು ದೌಡಾಯಿಸಿದ್ದಾರೆ. ಆದರೆ ಜನರು ಬಂದು ನೋಡುವಷ್ಟರಲ್ಲಿ ಮಹಿಳೆ ಬಿದ್ದ ತಕ್ಷಣ ತಲೆಗೆ ಗಂಭೀರವಾಗಿ ತಲೆಗೆ ಪೆಟ್ಟಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Advertisement
Advertisement
ಸ್ಥಳದಲ್ಲಿದ್ದವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ನಂತರ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಮೃತ ಮಹಿಳೆಯ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ. ಆದರೆ ಇಲ್ಲಿಯವರೆಗೆ ಮಹಿಳೆಯ ಬಗ್ಗೆ ಹೆಚ್ಚಿನ ಮಾಹಿತಿ ದೊರೆತ್ತಿಲ್ಲ. ಕೌಟುಂಬಿಕ ಸಮಸ್ಯೆಗಳಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
Advertisement
ಮೃತ ಮಹಿಳೆ ಇತ್ತೀಚೆಗೆ ಅಂದರೆ ಕೆಲವು ದಿನಗಳ ಹಿಂದೆ ಮದುವೆಯಾಗಿದ್ದು. ಪತಿ ವಿದೇಶದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮದುವೆಯ ನಂತರ ಪತಿ ಆಕೆಯನ್ನು ದೂರ ಮಾಡಲು ಪ್ರಾರಂಭಿಸಿದ್ದರಿಂದ ಆಕೆ ಖಿನ್ನತೆಗೆ ಒಳಗಾಗಿದ್ದರು. ಆತ್ಮಹತ್ಯೆ ಮಾಡಿ ಕೊಳ್ಳುವ ಮೊದಲು ಆಕೆ ತನ್ನ ಚಿಕ್ಕಪ್ಪನ ಮನೆಗೆ ಹೋಗಿದ್ದು, ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.